ಬೆಂಗಳೂರು: ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ ಪಹಲ್ಗಾಮ್ ನಲ್ಲಿ ನಡೆದಂತ ಉಗ್ರರ ದಾಳಿಯಲ್ಲಿ 27 ಮಂದಿ ಸಾವನ್ನಪ್ಪಿದ್ದಾರೆ. ಈ ದಾಳಿಯನ್ನು ತೀವ್ರವಾಗೇ ಖಂಡಿಸಿರುವಂತ ಸ್ಯಾಂಡಲ್ ವುಡ್ ನಟ ಧ್ರುವ ಸರ್ಜಾ, ಭಾರತಾಂಬೆಯ ಕಳಶದಂತಿರೋ ಜಮ್ಮು-ಕಾಶ್ಮೀರ ಎಂದಿಗೂ ನಮ್ಮದೆ ಎಂದಿದ್ದಾರೆ.
ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಭಾರತಾಂಬೆಯ ಕಳಶದಂತಿರೋ ಜಮ್ಮು ಮತ್ತು ಕಾಶ್ಮೀರ ಎಂದಿಗೂ ನಮ್ಮದೆ.. ಪಹಲ್ಗಾಮ್ ನಲ್ಲಿ ಉಗ್ರರು, ಅಮಾಯಕರ ಮೇಲೆ ನಡೆಸಿದಂತ ಕೃತ್ಯ ಎಂದಿಗೂ ಯಾರೂ ಕ್ಷಮಿಸಲಾಗದು ಅಂತ ಹೇಳಿದ್ದಾರೆ.
ಎಲ್ಲಾ ಧರ್ಮದ ಸಾರ ಪ್ರೀತಿ ಹಾಗೂ ಅಹಿಂಸೆ. ಪ್ರೀತಿಯಿಂದ ಸಾಧಿಸಲಾಗದ್ದು ಹಿಂಸೆ ಹಾಗೂ ದ್ವೇಷದಿಂದ ಸಾಧಿಸಲು ಸಾಧ್ಯವೇ ಇಲ್ಲ. ಪ್ರಾಣ ಬಿಟ್ಟವರ ಆತ್ಮಕ್ಕೆ ಶಾಂತಿ ಸಿಗಲಿ ಕಳೆದುಕೊಂಡವರ ಕುಟುಂಬಗಳಿಗೆ ದೇವರು ಧೈರ್ಯ ಕರುಣಿಸಲಿ ಅಂತ ತಿಳಿಸಿದ್ದಾರೆ.
ಭಾರತಾಂಬೆಯ ಕಳಶದಂತಿರೋ ಜಮ್ಮು ಮತ್ತು ಕಾಶ್ಮೀರ ಎಂದಿಗೂ ನಮ್ಮದೆ..
ಪಹಲ್ಗಾಮ್ ನಲ್ಲಿ ಉಗ್ರರು, ಅಮಾಯಕರ ಮೇಲೆ ನಡೆಸಿದಂತ ಕೃತ್ಯ ಎಂದಿಗೂ ಯಾರೂ ಕ್ಷಮಿಸಲಾಗದು.
ಎಲ್ಲಾ ಧರ್ಮದ ಸಾರ ಪ್ರೀತಿ ಹಾಗೂ ಅಹಿಂಸೆ. ಪ್ರೀತಿಯಿಂದ ಸಾಧಿಸಲಾಗದ್ದು ಹಿಂಸೆ ಹಾಗೂ ದ್ವೇಷದಿಂದ ಸಾಧಿಸಲು ಸಾಧ್ಯವೇ ಇಲ್ಲ.
ಪ್ರಾಣ ಬಿಟ್ಟವರ ಆತ್ಮಕ್ಕೆ ಶಾಂತಿ ಸಿಗಲಿ… pic.twitter.com/txUq3cwVAv— Dhruva Sarja (@DhruvaSarja) April 23, 2025
BREAKING : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : 16 ವರ್ಷದ ಬಾಲಕಿ ಮೇಲೆ ಅತ್ಯಾಚಾರ, ಆರೋಪಿ ಅರೆಸ್ಟ್!