ಶಿವಮೊಗ್ಗ : ಪಹಲ್ಗಾಮ್ ಉಗ್ರರ ದಾಳಿಗೆ ಬಲಿಯಾದ ಶಿವಮೊಗ್ಗದ ಮಂಜುನಾಥ್ ಮೃತದೇಹವನ್ನು ಶಿವಮೊಗ್ಗಕ್ಕೆ ತರಲಾಗಿದ್ದು, ಸಾವಿರಾರು ಜನರು ಅಂತಿಮ ದರ್ಶನ ಪಡೆದಿದ್ದಾರೆ.
ಶಿವಮೊಗ್ಗದ ಮಂಜುನಾಥ್ ಮೃತದೇಹವನ್ನು ಆಂಬುಲೆನ್ಸ್ ಮೂಲಕ ಬೆಂಗಳೂರಿನಿಂದ ತುಮಕೂರು, ಚಿತ್ರದುರ್ಗ, ಚನ್ನಗಿರಿ ಮಾರ್ಗವಾಗಿ ಹಳೇ ಬಸ್ ಸ್ಟ್ಯಾಂಡ್, ಗೋಪಿ ಸರ್ಕಲ್ ಮೂಲಕ ಶಿವಮೊಗ್ಗಕ್ಕೆ ತೆಗೆದುಕೊಂಡು ಬರಲಾಗಿದೆ. ಶಿವಮೊಗ್ಗದ ವಿಜಯನಗರ ಬಡಾವಣೆಯಲ್ಲಿರುವ ಮಂಜುನಾಥ್ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಂಜುನಾಥ್ ಪಾರ್ಥಿವ ಶರೀರ ಆಗಮಿಸುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.
ಪಹಲ್ಗಾಮ್ ನಲ್ಲಿ ಉಗ್ರರ ದಾಳಿಯಲ್ಲಿ ಮೃತಪಟ್ಟ ಕರ್ನಾಟಕದ ಮಂಜುನಾಥ್ ಮತ್ತು ಭರತ್ ಭೂಷಣ್ ಅವರ ಮೃತದೇಹಗಳನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮೃತದೇಹಗಳನ್ನ ತಂದು ಅಲ್ಲಿಂದ ಆಂಬುಲೆನ್ಸ್ ನಲ್ಲಿ ಸ್ವಗೃಹಕ್ಕೆ ಕೊಂಡೊಯ್ಯಲಾಗಿದೆ.