ಬೆಂಗಳೂರು : ಕಾಂಗ್ರೆಸ್ ಶಾಸಕ ವಿನಯ್ ಕುಲಕರಣಿಗೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು (ED) ಬಿಗ್ ಶಾಕ್ ನೀಡಿದ್ದು, ಬೆಂಗಳೂರಿನಲ್ಲಿರುವ ಶಾಸಕ ವಿನಯ್ ಕುಲಕರ್ಣಿ ನಿವಾಸದ ಮೇಲೆ ಇಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸಿದರು.
ಹೌದು ಡಿಕೆ ಸುರೇಶ್ ಸಹೋದರಿ ಎಂದು ಹೇಳಿ ಐಶ್ವರ್ಯ ಗೌಡ ವಂಚನೆ ಎಸಗಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ನಿವಾಸದ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಕಾಂಗ್ರೆಸ್ ಶಾಸಕ ವಿನಯ್ ಕುಲಕರಣಿ ನಿವಾಸದ ಮೇಲೆ ಇಡಿ ದಾಳಿ ಮಾಡಿದ್ದು, ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ವಿನಯ್ ಕುಲಕರ್ಣಿ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ವಿನಯ್ ಕುಲಕರ್ಣಿ ನಿವಾಸದಲ್ಲಿ ಇದೀಗ ಜಾರಿ ನಿರ್ದೇಶಕರು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.