ಬೆಂಗಳೂರು: ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಬಗ್ಗೆ ವಿವಾದಾತ್ಮಕವಾದಂತ ಅವಹೇಳನಕಾರಿ ಪೋಸ್ಟ್ ಮಾಡಿದ್ದಂತ ಕರ್ನಾಟಕ ಬಿಜೆಪಿ ಐಟಿ ಸೆಲ್ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಈ ಸಂಬಂಧ ಕೆಪಿಸಿಸಿ ಕಾನೂನು ಘಟಕದ ಸಿಎಂ ಧನಂಜಯ್ ಅವರು ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ತೆರಳಿ ಕರ್ನಾಟಕ ಬಿಜೆಪಿ ಐಟಿ ಸೆಲ್ ವಿರುದ್ಧ ದೂರು ನೀಡಿದ್ದರು. ಈ ದೂರು ಆಧರಿಸಿ ಎಫ್ಐಆರ್ ದಾಖಲಾಗಿದೆ.
ಕಾಂಗ್ರೆಸ್ ಸಲ್ಲಿಸಿರುವಂತ ದೂರಿನಲ್ಲಿ ರಾಹುಲ್ ಗಾಂಧಿ ವಿದೇಶಕ್ಕೆ ಹೋದಾಗ ಉಗ್ರರ ದಾಳಿ ನಡೆಯುತ್ತದೆ. ಪ್ರತಿ ಬಾರಿ ವಿದೇಶಕ್ಕೆ ಹೋದಾಗ ಈ ರೀತಿಯ ಕೃತ್ಯ ನಡೆದಿರುತ್ತದೆ ಎಂಬುದಾಗಿ ಸಾಮಾಜಿಕ ಜಾಲತಾಣದಲ್ಲಿ ಕರ್ನಾಟಕ ಬಿಜೆಪಿ ಐಟಿ ಸೆಲ್ ಪೋಸ್ಟ್ ಮಾಡಿರೋದಾಗಿ ಆರೋಪಿಸಿದ್ದರು.
ಈ ಪೋಸ್ಟ್ ನಿಂದ ಶಾತಿ, ಸೌಹಾರ್ದತೆದೆ ಧಕ್ಕೆ ಉಂಟು ಮಾಡುವ ರೀತಿಯಿದೆ. ಇದೊಂದು ಪ್ರಚೋದನಕಾರಿ ಆರೋಪವಾಗಿದೆ. ರಾಹುಲ್ ವಿರುದ್ಧ ಸುಳ್ಳು ಸುದ್ದಿ ಹರಡಿ ಅವರ ಘನತೆಗೆ ಧಕ್ಕೆ ತರಲು ಯತ್ನ ನಡೆಸಲಾಗಿದೆ ಎಂಬುದಾಗಿ ಆರೋಪಿಸಿ ದೂರು ನೀಡಿದ್ದರು. ಈ ದೂರು ಆಧರಿಸಿ ಕರ್ನಾಟಕ ಬಿಜೆಪಿ ಐಟಿ ಸೆಲ್ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
BREAKING : ‘ಭೂಮಿಯ ತುದಿಯವರೆಗೂ ಬೆನ್ನಟ್ಟಿ ಹುಡುಕಿ ಉಗ್ರರನ್ನು ಹೊಡೆಯುತ್ತೇವೆ’ : ಪ್ರಧಾನಿ ಮೋದಿ ಗುಡುಗು!