ಬೆಂಗಳೂರು: ರಾಜ್ಯದ ಕಾರ್ಮಿಕರಾದ ನೀವು ಮಂಡಳಿಯಲ್ಲಿ ನೋಂದಾಯಿತ ಕಾರ್ಮಿಕರಾಗಲು ಈ ಎಲ್ಲಾ ಅರ್ಹತೆಗಳನ್ನು ಹೊಂದಿರಬೇಕು ಎಂಬುದಾಗಿ ಕಾರ್ಮಿಕ ಇಲಾಖೆ ತಿಳಿಸಿದೆ.
ಕಟ್ಟಡ ಮತ್ತು ಇತರೆ ನಿರ್ಮಾಣ ಕಾಮಗಾರಿಯಲ್ಲಿ ತೊಡಗಿರುವ ಕಾರ್ಮಿಕರು ಮಂಡಳಿಯಲ್ಲಿ ನೋಂದಾಯಿತ ಕಾರ್ಮಿಕರಾಗಲು ನೋಂದಣಿ ಪೂರ್ವದ 12 ತಿಂಗಳಲ್ಲಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾಮಗಾರಿಗಳಲ್ಲಿ ಕನಿಷ್ಠ 90 ದಿನಗಳ ಕಾಲ ಕಾರ್ಯನಿರ್ವಹಿಸಿರಬೇಕು ಹಾಗೂ 18 ರಿಂದ 60 ವರ್ಷದೊಳಗಿನ ವಯೋಮಿತಿಯನ್ನು ಹೊಂದಿರಬೇಕು.
ಈ ಅರ್ಹತೆಗಳನ್ನು ಹೊಂದಿರುವ ಕಾರ್ಮಿಕರು ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿ ಮಂಡಳಿಯು ನೀಡುವ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಬಹುದು.
ಕಟ್ಟಡ ಮತ್ತು ಇತರೆ ನಿರ್ಮಾಣ ಕಾಮಗಾರಿಯಲ್ಲಿ ತೊಡಗಿರುವ ಕಾರ್ಮಿಕರು ಮಂಡಳಿಯಲ್ಲಿ ನೋಂದಾಯಿತ ಕಾರ್ಮಿಕರಾಗಲು ನೋಂದಣಿ ಪೂರ್ವದ 12 ತಿಂಗಳಲ್ಲಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾಮಗಾರಿಗಳಲ್ಲಿ ಕನಿಷ್ಠ 90 ದಿನಗಳ ಕಾಲ ಕಾರ್ಯನಿರ್ವಹಿಸಿರಬೇಕು ಹಾಗೂ 18 ರಿಂದ 60 ವರ್ಷದೊಳಗಿನ ವಯೋಮಿತಿಯನ್ನು ಹೊಂದಿರಬೇಕು. ಈ ಅರ್ಹತೆಗಳನ್ನು ಹೊಂದಿರುವ… pic.twitter.com/ls4qDlrmKp
— Construction Workers Welfare Board (@WorkersBoard) April 23, 2025
ಇನ್ನೂ ಮಂಡಳಿಯಿಂದ ಪಡೆಯಬಹುದಾದ ಸೌಲಭ್ಯಗಳು, ಯೋಜನೆಗಳ ಕುರಿತ ಮಾಹಿತಿಯನ್ನು ತಿಳಿಯಲು ಕಾರ್ಮಿಕ ಸಹಾಯವಾಣಿ 155214 ಗೆ ಕರೆ ಮಾಡಿ.
BREAKING : ‘ಭೂಮಿಯ ತುದಿಯವರೆಗೂ ಬೆನ್ನಟ್ಟಿ ಹುಡುಕಿ ಉಗ್ರರನ್ನು ಹೊಡೆಯುತ್ತೇವೆ’ : ಪ್ರಧಾನಿ ಮೋದಿ ಗುಡುಗು!