ಶಿವಮೊಗ್ಗ : ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರ ಗುಂಡಿನ ದಾಳಿಗೆ ಬಲಿಯಾದ ಕರ್ನಾಟಕ ಮೂಲದ ಶಿವಮೊಗ್ಗ ಜಿಲ್ಲೆಯ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಅವರ ಅಂತ್ಯಕ್ರಿಯೆ ಇಂದು ಶಿವಮೊಗ್ಗ ನಗರದ ತುಂಗಾ ನದಿ ತಟದಲ್ಲಿರುವ ರೋಟರಿ ಚಿತಾಗಾರದಲ್ಲಿ ನೆರವೇರಿತು. ಪೊಲೀಸರು ಮೂರು ಸುತ್ತು ಗುಂಡು ಹಾರಿಸುವ ಮೂಲಕ ಸಕಲ ಸರ್ಕಾರಿ ಗೌರವ ನಮನ ಸಲ್ಲಿಸಿದರು.
ಶಿವಮೊಗ್ಗದ ರೋಟರಿ ಚಿತಾಗಾರದಲ್ಲಿ ಮಂಜುನಾಥ್ ಅಂತ್ಯಕ್ರಿಯೆ ನೆರವೇರಿತು. ತುಂಗಾ ನದಿ ತಟದಲ್ಲಿರುವ ರೋಟರಿ ಚಿತಾಗಾರದಲ್ಲಿ ಅಂತ್ಯಕ್ರಿಯ ವಿಧಿ ವಿಧಾನ ನಡೆದು ಬ್ರಾಹ್ಮಣ ಸಂಪ್ರದಾಯದಂತೆ ಅಂತಿಮ ವಿಧಿ ವಿಧಾನ ನಡೆಯಿತು.ಬಳಿಕ ಪುತ್ರ ಅಭಿಜನ್ ತಂದೆಯ ಮೃತ ದೇಹಕ್ಕೆ ಅಗ್ನಿ ಸ್ಪರ್ಶ ಮಾಡಿದ.
ಈ ಒಂದು ಅಂತ್ಯ ಸಂಸ್ಕಾರದಲ್ಲಿ ಸಚಿವ ಮಧು ಬಂಗಾರಪ್ಪ ಸೇರಿದಂತೆ ಶಾಸಕರು ಮುಖಂಡರು ಗಣ್ಯ ವ್ಯಕ್ತಿಗಳು ಹಾಗೂ ಮೃತ ಮಂಜುನಾಥ್ ಕುಟುಂಬಸ್ಥರು ಸಂಬಂಧಿಕರು ಸ್ನೇಹಿತರು ಎಲ್ಲರೂ ಉಪಸ್ಥಿತರಿದ್ದರು. ಅಂತಿಮ ದರ್ಶನಕ್ಕೂ ವ್ಯವಸ್ಥೆ ಕಲ್ಪಿಸಲಾಗಿತ್ತು. ತೆರೆದ ವಾಹನದಲ್ಲಿ ಮಂಜುನಾಥ್ ಮೃತದೆಹದ ಮೆರವಣಿಗೆ ನಡೆಯಿತು. ಮಂಜುನಾಥ್ ಅಂತಿಮ ಯಾತ್ರೆಯಲ್ಲಿ ನೂರಾರು ಜನರು ಭಾಗಿಯಾಗಿದ್ದರು. ಶಿವಮೊಗ್ಗದ ಗೋಪಿ ಸರ್ಕಲ್ ನಲ್ಲಿ ಅಂಗಡಿ ಮುಗ್ಗಟ್ಟುಗಳನ್ನು ಬಂದ್ ಮಾಡಿದ್ದರು.