ಕರಾಚಿ: ಪಹಲ್ಗಾಮ್ ಉಗ್ರರ ದಾಳಿಯ ನಂತ್ರ ಭಾರತ ಮಹತ್ವದ ಹೆಜ್ಜೆ ಇರಿಸಿ, ಸಿಂಧೂ ನದಿ ನೀರು ಒಪ್ಪಂದ ರದ್ದುಗೊಳಿಸುವುದು ಸೇರಿದಂತೆ ಹಲವು ನಿರ್ಧಾರ ಕೈಗೊಂಡಿತ್ತು. ಈ ಬೆನ್ನಲ್ಲೇ ಪಾಕಿಸ್ತಾನ ಭಾರತೀಯ ವಿಮಾನಯಾನ ಸಂಸ್ಥೆಗಳಿಗೆ ವಾಯುಪ್ರದೇಶ ಬಳಕೆಗೆ ನಿರ್ಬಂಧ ವಿಧಿಸಿದೆ. ಅಲ್ಲದೇ ವಾಘಾ ಗಡಿಯನ್ನು ಬಂದ್ ಮಾಡಿದೆ.
ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲಿನ ಭಯೋತ್ಪಾದಕರ ದಾಳಿಗೆ ಭಾರತ ದಿಟ್ಟ ಉತ್ತರ ನೀಡಿದೆ. ಭಾರತದಲ್ಲಿರುವಂತ ಎಲ್ಲಾ ಪಾಕಿಸ್ತಾನಿ ಪ್ರಜೆಗಳು 48 ಗಂಟೆಯಲ್ಲಿ ವಾಪಾಸ್ಸು ತೆರಳೋದಕ್ಕೆ ಡೆಡ್ ಲೈನ್ ನೀಡಿದೆ. ಇದರ ಭಾಗವಾಗಿ ಇಂದು ಪಾಕಿಸ್ತಾನಿ ಪ್ರಜೆಗಳ ಎಲ್ಲಾ ವೀಸಾವನ್ನು ರದ್ದುಗೊಳಿಸಿ ಕೇಂದ್ರ ಗೃಹ ಸಚಿವಾಲಯ ಆದೇಶಿಸಿದೆ.
ಮತ್ತೊಂದೆಡೆ ಭಾರತದ ನಿರ್ಧಾರಕ್ಕೆ ತಿರುಗೇಟು ಎನ್ನುವಂತೆ ಪಾಕಿಸ್ತಾನ ಭಾರತೀಯ ವಿಮಾನಯಾನ ಸಂಸ್ಥೆಗಳಿಗೆ ವಾಯುಪ್ರದೇಶ ಬಳಕೆಗೆ ನಿರ್ಬಂಧ ಹೇರಿದೆ. ಇದಲ್ಲದೇ ವಾಘಾ ಗಡಿಯಲ್ಲಿನ ಸಂಚಾರವನ್ನು ಬಂದ್ ಮಾಡಿದೆ ಎಂಬುದಾಗಿ ತಿಳಿದು ಬಂದಿದೆ.
BREAKING : ‘ಭೂಮಿಯ ತುದಿಯವರೆಗೂ ಬೆನ್ನಟ್ಟಿ ಹುಡುಕಿ ಉಗ್ರರನ್ನು ಹೊಡೆಯುತ್ತೇವೆ’ : ಪ್ರಧಾನಿ ಮೋದಿ ಗುಡುಗು!