ಶಿವಮೊಗ್ಗ : ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರ ಗುಂಡಿನ ದಾಳಿಗೆ ಬಲಿಯಾದ ಕರ್ನಾಟಕ ಮೂಲದ ಇಬ್ಬರು ಸಾವನ್ನಪ್ಪಿದ್ದು, ಈಗಾಗಲೇ ಶಿವಮೊಗ್ಗ ಜಿಲ್ಲೆಯ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಅವರ ಅಂತ್ಯಕ್ರಿಯೆ ಇಂದು ಶಿವಮೊಗ್ಗ ನಗರದ ತುಂಗಾ ನದಿ ತಟದಲ್ಲಿರುವ ರೋಟರಿ ಚಿತಾಗಾರದಲ್ಲಿ ನೆರವೇರಿತು. ಬಳಿಕ ಬೆಂಗಳೂರು ಮೂಲದ ಭರತ್ ಭೂಷಣ ಅವರ ಅಂತ್ಯಕ್ರಿಯೆ ಬೆಂಗಳೂರಿನ ಹೆಬ್ಬಾಳ ಚಿತಾಗಾರದಲ್ಲಿ ನೆರವೇರಿತು.
ಬೆಂಗಳೂರಿನ ಹೆಬ್ಬಾಳ ಚಿತಾಗಾರದಲ್ಲಿ ಭರತ್ ಭೂಷಣ ಅವರ ಅಂತ್ಯಕ್ರಿಯೆ ನೆರವೇರಿತು. ಒಕ್ಕಲಿಗ ಸಂಪ್ರದಾಯದಂತೆ ಅಂತಿಮ ವಿಧಿ ವಿಧಾನ ನಡೆಯಿತು.ಈ ಒಂದು ಅಂತ್ಯ ಸಂಸ್ಕಾರದಲ್ಲಿ ಸಚಿವ ರಾಮಲಿಂಗರೆಡ್ಡಿ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ವಿಧಾನ ಪರಿಷತ್ ಸದಸ್ಯರಾದಂತ ಛಲವಾದಿ ನಾರಾಯಣಸ್ವಾಮಿ, ಎನ್.ರವಿಕುಮಾರ್ ಸೇರಿದಂತೆ ಹಲವು ಗಣ್ಯರು ಅಂತಿಮ ದರ್ಶನ ಪಡೆದರು. ಇದೇ ವೇಳೆ ಸ್ಥಳೀಯ ಜನರು ಉಗ್ರರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.