ಶಿವಮೊಗ್ಗ : ಪ್ರವಾಸಿಗರಿಗೆ ಗುಡ್ ನ್ಯೂಸ್ ಎನ್ನುವಂತೆ ಜೋಗದ ಜಲಪಾತ ವೀಕ್ಷಣೆಗೆ ವಿಧಿಸಲಾಗಿದ್ದಂತ ನಿರ್ಬಂಧವನ್ನು ತೆರವುಗೊಳಿಸಲಾಗುತ್ತಿದೆ. ಮೇ.1ರಿಂದ ಜೋಗದ ಜಲಪಾತವನ್ನು ಸಾರ್ವಜನಿಕರು ವೀಕ್ಷಣೆ ಮಾಡೋದಕ್ಕೆ ಅವಕಾಶ ನೀಡಲಾಗುತ್ತಿದೆ.
ಈ ಕುರಿತಂತೆ ಶಿವಮೊಗ್ಗ ಜಿಲ್ಲಾಧಿಕಾರಿ ಹಾಗೂ ಜೋಗ ನಿರ್ವಹಣಾ ಪ್ರಾಧಿಕಾರದ ಮುಖ್ಯ ಕಾರ್ಯನಿರ್ಹಣಾಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಜಿಲ್ಲೆಯ ಸಾಗರ ತಾಲೂಕಿನ ವಿಶ್ವ ವಿಖ್ಯಾತ ಜೋಗ ಜಲಪಾತದ ಪ್ರವೇಶ ದ್ವಾರದ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದ್ದ ಕಾರಣ ಏ.30ರವರೆಗೆ ಪ್ರವಾಸಿಗರ ಹಾಗೂ ಸಾರ್ವಜನಿಕರ ಪ್ರವೇಶವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿತ್ತು ಎಂದಿದ್ದಾರೆ.
ಮೇ 01 ರಿಂದ ಸಾರ್ವಜನಿಕರ ಹಾಗೂ ಪ್ರವಾಸಿಗರಿಗೆ ಜೋಗ ಜಲಪಾತದ ವೀಕ್ಷಣೆಗೆ ಪ್ರವೇಶಾವಕಾಶ ಕಲ್ಪಿಸಲಾಗಿದೆ ಎಂದು ಮಾಹಿತಿಯನ್ನು ಶಿವಮೊಗ್ಗ ಜಿಲ್ಲಾಧಿಕಾರಿ ಹಾಗೂ ಜೋಗ ನಿರ್ವಹಣಾ ಪ್ರಾಧಿಕಾರದ ಮುಖ್ಯ ಕಾರ್ಯ ನಿರ್ವಹಣಾದಿಕಾರಿಗಳು ತಿಳಿಸಿದ್ದಾರೆ.
BREAKING : ‘ಭೂಮಿಯ ತುದಿಯವರೆಗೂ ಬೆನ್ನಟ್ಟಿ ಹುಡುಕಿ ಉಗ್ರರನ್ನು ಹೊಡೆಯುತ್ತೇವೆ’ : ಪ್ರಧಾನಿ ಮೋದಿ ಗುಡುಗು!