ನವದೆಹಲಿ : ಪಹಲ್ಗಾಮ್ ನಲ್ಲಿ ನಡೆದಂತಹ ಉಗ್ರರ ದಾಳಿಗೆ ಇದೀಗ ಭಾರತ ತಕ್ಕ ಉತ್ತರ ನೀಡಲು ಸಜ್ಜಾಗಿದ್ದು, ಉಗ್ರರನ್ನು ಪೋಷಿಸುತ್ತಿರುವ ಪಾಕಿಸ್ತಾನದ ವಿರುದ್ಧ ಈಗಾಗಲೇ ಕೇಂದ್ರ ಸರ್ಕಾರ ಹಲವು ಕಠಿಣ ಕ್ರಮ ಕೈಗೊಂಡಿದ್ದು, ಇದರ ಬೆನ್ನಲ್ಲೆ, ಇದೀಗ ಸಂಸತ್ ಭವನದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಧ್ಯಕ್ಷತೆಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭವಾಗಿದೆ.
ಸಂಸತ್ ಭವನದಲ್ಲಿ ಸರ್ವ ಪಕ್ಷಗಳ ಸಭೆ ಆರಂಭವಾಗಿದ್ದು, ರಕ್ಷಣಾ ಸಚಿವ ರಾಜನಾಥ ಸಿಂಗ್ ಅಧ್ಯಕ್ಷತೆಯಲ್ಲಿ ಇದೀಗ ಸರ್ವ ಪಕ್ಷಗಳ ಸಭೆ ಆರಂಭವಾಗಿದೆ. ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ವಿದೇಶಾಂಗ ಸಚಿವ ಜೈ ಶಂಕರ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರಾಹುಲ್ ಗಾಂಧಿ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ. ಸಭೆಯಲ್ಲಿ ಪಾಕಿಸ್ತಾನ ವಿರುದ್ಧ ಏನು ಕ್ರಮ ಕೈಗೊಳ್ಳಬೇಕು ಎನ್ನುವುದರ ಕುರಿತು ಚರ್ಚೆಯಾಗಲಿದೆ.