ಶಿವಮೊಗ್ಗ: ಜಿಲ್ಲೆಯ ಸಾಗರದಲ್ಲಿ ಇಂದು ಮಹಿಳೆಯೊಬ್ಬರ ಮಾಂಗಲ್ಯ ಸರವನ್ನು ಬೈಕ್ ನಲ್ಲಿ ಬಂದಂತ ಇಬ್ಬರು ಕಳ್ಳರು ಕದ್ದು ಪರಾರಿಯಾಗಿರುವಂತ ಘಟನೆ ನಡೆದಿದೆ.
ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಇಕ್ಕೇರಿ ರಸ್ತೆಯಲ್ಲಿ ಇಂದು ಸಂಜೆ ಈ ಘಟನೆ ನಡೆದಿದೆ. ಕೂಲಿ ಕೆಲಸ ಮಾಡುತ್ತಿದ್ದಂತ 60 ವರ್ಷದ ಮಹಿಳೆಯೊಬ್ಬರು ಇಕ್ಕೇರಿ ರಸ್ತೆಯಿಂದ ಜನ್ನತ್ ನಗರದ ತಮ್ಮ ಮನೆಗೆ ನಡೆದುಕೊಂಡು ಹೋಗುತ್ತಿದ್ದರು.
ಈ ವೇಳೆ ಮಹಿಳೆಯನ್ನು ಸ್ಕೂಟಿಯಲ್ಲಿ ಹಿಂಬಾಲಿಸಿ ತೆರಳಿದಂತ ಕಳ್ಳರು, ಹಿಂದಿನಿಂದ ಮಾಂಗಲ್ಯ ಸರವನ್ನು ಕಸಿದುಕೊಂಡು ಪರಾರಿಯಾಗಿದ್ದಾರೆ. ಕಳ್ಳರು ಕದ್ದೊಯ್ದಂತ ಮಾಂಗಲ್ಯ ಸರವು 28 ಗ್ರಾಂ ತೂಕದ್ದು ಎಂಬುದಾಗಿ ಮಹಿಳೆ ತಿಳಿಸಿದ್ದಾರೆ.
ಸರಗಳ್ಳತನ ಪ್ರಕರಣ ಸಂಬಂಧ ಸಾಗರ ನಗರ ಠಾಣೆಗೆ ತೆರಳಿ ಸೀತಮ್ಮ ದೂರು ನೀಡಿದ್ದಾರೆ. ಈ ದೂರು ಆಧರಿಸಿ ಸಾಗರ ಟೌನ್ ಠಾಣೆಯ ಪೊಲೀಸರು ಕಾರ್ಯ ಪ್ರವೃತ್ತರಾಗಿದ್ದು, ಮಹಿಳೆ ಮಾಂಗಲ್ಯ ಸರ ಕಸಿದುಕೊಂಡು ಪರಾರಿಯಾಗಿರುವಂತ ಕಳ್ಳರ ಬಂಧನಕ್ಕೆ ಬಲೆ ಬೀಸಿದ್ದಾರೆ.
ವರದಿ: ವಸಂತ ಬಿ ಈಶ್ವರಗೆರೆ
BREAKING: ಇನ್ಮುಂದೆ ಮಲೆ ಮಹದೇಶ್ವರ ಬೆಟ್ಟ ಮದ್ಯಪಾನ ಪಾನ ಮುಕ್ತ: ಸಿಎಂ ಸಿದ್ಧರಾಮಯ್ಯ ಘೋಷಣೆ