ಬೆಂಗಳೂರು: ಮಾಜಿ ಸಂಸದ ಡಿಕೆ ಸುರೇಶ್ ಸಹೋದರಿ ಎಂದು ಹೇಳಿ ಚಿನ್ನ ವಂಚನೆ ಎಸಗಿದ್ದ ಪ್ರಕರಣ ಸಂಬಂಧ ಐಶ್ವರ್ಯ ಗೌಡ ಅವರ ಬೆಂಗಳೂರು ಹಾಗೂ ಮಂಡ್ಯದ ನಿವಾಸಗಳ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಇಂದು ದಾಳಿ ನಡೆಸಿದರು. ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಕಿರುಗಾವಲು ಗ್ರಾಮದಲ್ಲಿರುವ ಮನೆ ಹಾಗೂ ಬೆಂಗಳೂರಿನ ನಿವಾಸದ ಮೇಲೆ ದಾಳಿ ನಡೆದಿದ್ದು, ಕಡತಗಳು ಹಾಗೂ ದಾಖಲೆಗಳ ಶೋಧ ಮಾಡಿದರು. ಈ ಬಳಿಕ ಹೆಚ್ಚಿನ ವಿಚಾರಣೆಗಾಗಿ ಅವರನ್ನು ವಶಕ್ಕೆ ಪಡೆದಿರುವುದಾಗಿ ತಿಳಿದು ಬಂದಿದೆ.
ಶಾಸಕ ವಿನಯ್ ಕುಲಕರ್ಣಿಗೂ ED ಶಾಕ್!
ಡಿಕೆ ಸುರೇಶ್ ಸಹೋದರಿ ಎಂದು ಹೇಳಿ ಐಶ್ವರ್ಯ ಗೌಡ ವಂಚನೆ ಎಸಗಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ನಿವಾಸದ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಶಾಸಕ ವಿನಯ್ ಕುಲಕರ್ಣಿ ನಿವಾಸದ ಮೇಲು ಇಡಿ ಅಧಿಕಾರಿಗಳು ದಾಳಿ ಮಾಡಿ ಹಲವು ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.
ಏನಿದು ಪ್ರಕರಣ?
ವಾರಾಹಿ ವರ್ಲ್ಡ್ ಆಫ್ ಗೋಲ್ಡ್ ಅಂಗಡಿ ಬಾಲಕಿ ವನಿತಾ ಎಸ್ ಐತಾಳ್ ಎಂಬವರಿಗೆ ಐಶ್ವರ್ಯ ಗೌಡ ವಂಚನೆ ಎಸಗಿದ್ದರು. ಡಿಕೆ ಸುರೇಶ್ ಸಹೋದರಿ ಎಂದು ಹೇಳಿಕೊಂಡು ಮೋಸ ಮಾಡಲಾಗಿತ್ತು. ಈ ಬಗ್ಗೆ ಚಿನ್ನದ ಅಂಗಡಿ ಮಾಲಕಿ ಆಡಿಯೋ ಕ್ಲಿಪಿಂಗ್ ಮತ್ತು ಇತರ ದಾಖಲೆಗಳ ಸಹಿತ ಪೊಲೀಸರಿಗೆ ದೂರು ನೀಡಿದ್ದರು.
ಚಿನ್ನ ಖರೀದಿಸುವ ನೆಪದಲ್ಲಿ ಡಿಕೆ ಸುರೇಶ್ ಹೆಸರು ಹೇಳಿಕೊಂಡು 9.82 ಕೋಟಿ ರೂಪಾಯಿ ಮೌಲ್ಯದ 14 ಕೆಜಿ 660 ಗ್ರಾಂ ಚಿನ್ನ ವಂಚನೆ ಎಸಗಿದ ಆರೋಪ ಐಶ್ವರ್ಯ ಗೌಡ ಮೇಲಿದೆ. ಈ ಬಗ್ಗೆ ವನಿತಾ ಎಸ್ ಐತಾಳ್ ಚಂದ್ರಾ ಲೇಔಟ್ ಠಾಣೆಯಲ್ಲಿ ದೂರು ನೀಡಿದ್ದರು. ಅದಾದ ನಂತರ ಡಿಕೆ ಸುರೇಶ್ ಸಹ ದೂರು ನೀಡಿದ್ದರು.
ಮೈಸೂರಿನಲ್ಲಿ ಸುಸಜ್ಜಿತವಾದ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣ ಮಾಡಲು ರಾಜ್ಯ ಸಚಿವ ಸಂಪುಟ ಅನುಮೋದನೆ