ಮಂಡ್ಯ : ಮಳವಳ್ಳಿ ತಾಲ್ಲೂಕಿನ ಹೊಸಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ-209(948)ರ ಗಗನಚುಕ್ಕಿ ಪ್ರೀ ಪ್ಲಾಜಾಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಭಾಗವಹಿಸಿ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಟೋಲ್ ಫ್ರೀ ಪ್ಲಾಜಾ ಗೆ ಭೇಟಿ ನೀಡಿ ಜಿಲ್ಲಾಧಿಕಾರಿ ಡಾ.ಕುಮಾರ ಹಾಗೂ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯು ಅಪೂರ್ಣ ಹಾಗೂ ಅವೈಜ್ಞಾನಿಕತೆಯಾಗಿದೆ ಎಂದು ಸ್ಥಳೀಯರು ಹಾಗೂ ರೈತ ಮುಖಂಡರು ಆರೋಪಿಸಿದ್ದು, ಕಳೆದ ತಿಂಗಳು ಪ್ರತಿಭಟನೆ ಕೂಡ ನಡೆಸಿದ್ದರು.
ಶಾಸಕ ಪಿ.ಎಂ.ನರೇಂದ್ರಸ್ವಾಮಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು, ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಿ ಕೆಲ ಸಲಹೆ ಸೂಚನೆಗಳನ್ನು ನೀಡಿದ್ದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಗುರುವಾರ ಟೋಲ್‌ಗೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಮಳವಳ್ಳಿ ಪಟ್ಟಣದ ಪ್ರವಾಸಿ ಮಂದಿರದ ಬಳಿ ಸುಗಮ ಸಂಚಾರ ವ್ಯವಸ್ಥೆ ಕುರಿತು ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿ ಕುಮಾರ ಸೇರಿದಂತೆ ಹಲವು ಅಧಿಕಾರಗಳಿಂದ ಮಾಹಿತಿ ಪಡೆದುಕೊಂಡರು.
ಇದೇ ವೇಳೆ ಜಿಲ್ಲಾಧಿಕಾರಿ ಡಾ.ಕುಮಾರ, ಜಿಲ್ಲಾ ಪಂಚಾಯಿತಿ ಸಿಇಒ ಕೆ.ಆರ್.ನಂದಿನಿ, ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಸಿ. ಶಿವಾನಂದಮೂರ್ತಿ, ತಹಶೀಲ್ದಾರ್ ಎಸ್.ವಿ.ಲೋಕೇಶ್ ಸೇರಿದಂತೆ ಮತ್ತಿತರರು ಇದ್ದರು.
ವರದಿ : ಗಿರೀಶ್ ರಾಜ್, ಮಂಡ್ಯ
BREAKING: ಇನ್ಮುಂದೆ ಮಲೆ ಮಹದೇಶ್ವರ ಬೆಟ್ಟ ಮದ್ಯಪಾನ ಪಾನ ಮುಕ್ತ: ಸಿಎಂ ಸಿದ್ಧರಾಮಯ್ಯ ಘೋಷಣೆ