ಶ್ರೀನಗರ : ಜಮ್ಮು ಕಾಶ್ಮೀರದ ಪಹಲ್ಗಮ್ ನಲ್ಲಿ ನಡೆದ ಭೀಕರ ಉಗರ ದಾಳಿಗೆ ಇಬ್ಬರು ಕನ್ನಡಿಗರು ಸೇರಿದಂತೆ 30 ಪ್ರವಾಸಿಗರು ಸಾವನಪ್ಪಿದ್ದಾರೆ ಘಟನೆಯನ್ನು ಖಂಡಿಸಿದ ಭಾರತವು ಪಾಕಿಸ್ತಾನ ವಿರುದ್ಧ ಹಲವು ಕ್ರಮ ಕೈಗೊಂಡಿದೆ. ಇದರ ಬೆನ್ನಲ್ಲೇ ಇದೀಗ ಜಮ್ಮು ಕಾಶ್ಮೀರದಲ್ಲಿ ‘LET’ ಸಂಪರ್ಕದಲ್ಲಿದ್ದ ಮೂವರು ಭಯೋತ್ಪಾದಕರನ್ನು ಭದ್ರತಾ ಪಡೆಗಳು ಇದೀಗ ಅರೆಸ್ಟ್ ಮಾಡಿದ್ದಾರೆ.
ಹೌದು ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿದ್ದು, LET ಸಂಪರ್ಕದಲ್ಲಿದ್ದ ಮೂವರು ಭಯೋತ್ಪಾದಕರನ್ನು ಇದೀಗ ಅರೆಸ್ಟ್ ಮಾಡಿದ್ದಾರೆ. ಮೂವರು ಭಯೋತ್ಪಾದಕರನ್ನು ಜಮ್ಮು ಕಾಶ್ಮೀರದ ಬಂಡಿಪೋರಾದಲ್ಲಿ ಅರೆಸ್ಟ್ ಮಾಡಲಾಗಿದೆ.