ಬೆಂಗಳೂರು : ಕಳೆದ ಏಪ್ರಿಲ್ 16ರಂದು ರಾಜ್ಯದಲ್ಲಿ ಸಿಇಟಿ ಪರೀಕ್ಷೆ ನಡೆಯುತ್ತಿತ್ತು ಈ ವೇಳೆ ಶಿವಮೊಗ್ಗ ಬೀದರ್ ಹಾಗೂ ಧಾರವಾಡದಲ್ಲಿ ಸಿಇಟಿ ಪರೀಕ್ಷೆ ಬರೆಯಲು ಬಂದಿದ್ದ ಅಭ್ಯರ್ಥಿಗಳಿಂದ ಜನಿವಾರ ತೆಗೆಸಿದ ಪ್ರಕರಣ ಇಡಿ ರಾಜ್ಯಾದ್ಯಂತ ಭಾರಿ ಸದ್ದು ಮಾಡಿದ್ದು ಇದೀಗ ಈ ಒಂದು ಘಟನೆಗೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್ ಅಶೋಕ ಕೇಂದ್ರ ಮಾನವ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ.
ಹೌದು ಸಿಇಟಿ ಪರೀಕ್ಷೆ ಬರೆಯಲು ಬಂದಿದ್ದ ಅಭ್ಯರ್ಥಿಗಳ ಜನಿವಾರ ತೆಗೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ, ವಿದ್ಯಾರ್ಥಿಗಳ ಧಾರ್ಮಿಕ ಭಾವನೆಗಳಿಗೆ ಹಕ್ಕುಗಳಿಗೆ ಚ್ಯುತಿ ತಂದ ಆರೋಪದ ಹಿನ್ನೆಲೆ ರಾಜ್ಯ ಸರ್ಕಾರದ ನಡೆಯ ವಿರುದ್ಧ ವಿಪಕ್ಷ ನಾಯಕ ಆರ್ ಅಶೋಕ್ ದೂರು ಸಲ್ಲಿಸಿದ್ದಾರೆ. ಕೇಂದ್ರ ಮಾನವ ಹಕ್ಕುಗಳ ಆಯೋಗಕ್ಕೆ ಆರ್ ಅಶೋಕ ಲಿಖಿತ ದೂರು ನೀಡಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಆರ್. ಅಶೋಕ್ ಸಿಇಟಿ ಪರೀಕ್ಷೆ ವೇಳೆಯಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸುವ ಮೂಲಕ ಅವರ ಧಾರ್ಮಿಕ ಭಾವನೆಗಳಿಗೆ, ಹಕ್ಕುಗಳಿಗೆ ಚ್ಯುತಿ ತಂದ ರಾಜ್ಯ ಸರ್ಕಾರದ ನಡೆ ವಿರುದ್ಧ ಕೇಂದ್ರ ಮಾನವ ಹಕ್ಕುಗಳ ಆಯೋಗಕ್ಕೆ ಲಿಖಿತ ದೂರು ಸಲ್ಲಿಸಿ, ನಾಗರೀಕರ ಸಂವಿಧಾನದತ್ತ ಹಕ್ಕುಗಳು ಹಾಗು ಘನತೆಯನ್ನು ರಕ್ಷಿಸುವ ನಿಟ್ಟಿನಲ್ಲಿ, ಈ ಪ್ರಕರಣದ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದೇನೆ.
On 23rd April, I have filed a complaint with the National Human Rights Commission about the incidents of infringement of personal beliefs by Government of Karnataka in which students were compelled to remove their scared religious symbols such as Janivara (Yagnopavita), Shivadara… pic.twitter.com/uKwMiMbBlD
— R. Ashoka (@RAshokaBJP) April 25, 2025