ಬೆಂಗಳೂರು: ಇಸ್ರೋ ಮಾಜಿ ಅಧ್ಯಕ್ಷ ಕೆ.ಕಸ್ತೂರಿರಂಗನ್ ಅವರು ಇಂದು ನಿಧನರಾಗಿದ್ದಾರೆ. ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸಂತಾಪ ಸೂಚಿಸಿದ್ದಾರೆ.
ಈ ಸಂಬಂಧ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಬಾಹ್ಯಾಕಾಶ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತದ ಕೀರ್ತಿಪತಾಕೆಯನ್ನು ಆಗಸದೆತ್ತರಕ್ಕೆ ಹಾರಿಸಿದ್ದ ಖ್ಯಾತ ಖಭೌತ ವಿಜ್ಞಾನಿ ಡಾ.ಕೆ.ಕಸ್ತೂರಿ ರಂಗನ್ ಅವರ ನಿಧನದಿಂದ ಆಘಾತವಾಗಿದೆ. ಕರ್ನಾಟಕ ಮೂಲದ ಡಾ.ಕಸ್ತೂರಿರಂಗನ್ ಅವರಿಗೆ ನಮ್ಮ ರಾಜ್ಯದ ಬಗ್ಗೆ ಅಪಾರವಾದ ಪ್ರೀತಿ ಮತ್ತು ಕಾಳಜಿ ಇತ್ತು ಎಂದಿದ್ದಾರೆ.
ಭಾರತದ ಹೆಮ್ಮೆಯ ಇಸ್ರೋ ಸಂಸ್ಥೆಗೆ ದೀರ್ಘ ಕಾಲ ಅಧ್ಯಕ್ಷರಾಗಿ ಮತ್ತು ಕೇಂದ್ರದ ಬಾಹ್ಯಾಕಾಶ ಮಂಡಳಿಯ ನಿರ್ದೇಶಕರಾಗಿ ಡಾ.ಕಸ್ತೂರಿ ರಂಗನ್ ಅವರು ಸಲ್ಲಿಸಿದ ಸೇವೆಯಿಂದಾಗಿ ಭಾರತ ಇಂದು ಬಾಹ್ಯಾಕಾಶ ವಿಜ್ಞಾನ ಕ್ಷೇತ್ರದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳುವಂತಾಗಿದೆ ಎಂದು ಹೇಳಿದ್ದಾರೆ.
ಡಾ.ಕಸ್ತೂರಿ ರಂಗನ್ ಅವರನ್ನು ಕಳೆದುಕೊಂಡಿರುವ ಅವರ ಕುಟುಂಬದ ಸದಸ್ಯರು ಮತ್ತು ಅಭಿಮಾನಿಗಳ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ. ಮೃತರ ಆತ್ಮಕ್ಕೆ ಶಾಂತಿಯನ್ನು ಕೋರುತ್ತೇನೆ ಎಂದಿದ್ದಾರೆ.
ಬಾಹ್ಯಾಕಾಶ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತದ ಕೀರ್ತಿಪತಾಕೆಯನ್ನು ಆಗಸದೆತ್ತರಕ್ಕೆ ಹಾರಿಸಿದ್ದ ಖ್ಯಾತ ಖಭೌತ ವಿಜ್ಞಾನಿ ಡಾ.ಕೆ.ಕಸ್ತೂರಿ ರಂಗನ್ ಅವರ ನಿಧನದಿಂದ ಆಘಾತವಾಗಿದೆ.
ಕರ್ನಾಟಕ ಮೂಲದ ಡಾ.ಕಸ್ತೂರಿರಂಗನ್ ಅವರಿಗೆ ನಮ್ಮ ರಾಜ್ಯದ ಬಗ್ಗೆ ಅಪಾರವಾದ ಪ್ರೀತಿ ಮತ್ತು ಕಾಳಜಿ ಇತ್ತು.ಭಾರತದ ಹೆಮ್ಮೆಯ ಇಸ್ರೋ ಸಂಸ್ಥೆಗೆ ದೀರ್ಘ ಕಾಲ… pic.twitter.com/BI50EnYZxW
— Siddaramaiah (@siddaramaiah) April 25, 2025