ಬೆಂಗಳೂರು : ರಾಜ್ಯದಲ್ಲಿ ಜಾತಿ ಗಣತಿ ಮರು ಸಮೀಕ್ಷೆಗೆ ಆಗ್ರಹಿಸಲು ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ನಿವಾಸದಲ್ಲಿ ನಡೆದ ಒಕ್ಕಲಿಗರು, ಲಿಂಗಾಯತ ನಾಯಕರ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.
ಶಾಮನೂರು ಶಿವಶಂಕರಪ್ಪ ನಿವಾಸದಲ್ಲಿ ನಡೆದ ಸಭೆಯಲ್ಲಿ, ಜಾತಿ ಗಣತಿ ಮರು ಸಮೀಕ್ಷೆಗೆ ಆಗ್ರಹಿಸಲಾಗಿದ್ದು, ಲಿಂಗಾಯಿತ, ಒಕ್ಕಲಿಗ ಮಠಾಧೀಶರನ್ನು ಭೇಟಿಯಾಗಿ ಚರ್ಚಿಸುವುದು, ಅವರನ್ನು ವಿಶ್ವಾಸದ ಪಡೆದುಕೊಂಡು ಮುಂದಿನ ಹೆಜ್ಜೆ ಇಡುವುದು, ಕಳೆದ ಬಾರಿ ಮೂಡಿದ್ದ ಗೊಂದಲ ಆಗದಂತೆ ಎಚ್ಚರಿಕೆ ವಹಿಸುವುದು, ಈಗ ಆ ರೀತಿ ಆಗದಂತೆ ಕಾನೂನು ಹೋರಾಟ ಮತ್ತು ಬೀದಿಗಿಳಿದು ಹೋರಾಟ ನಡೆಸಲು ಸಮುದಾಯದ ನಾಯಕರು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.
ಲಿಂಗಾಯಿತ, ಒಕ್ಕಲಿಗ ಸಮುದಾಯದ ನಾಯಕರ ಸಭೆಯಲ್ಲಿ ಜಾತಿ ಗಣತಿ ಮರು ಸಮೀಕ್ಷೆಗೆ ಆಗ್ರಹಿಸಲು ನಿರ್ಧಾರ ಕೈಗೊಳ್ಳಲಾಗಿದೆ. ಈ ವಿಚಾರದಲ್ಲಿ ಹಿಂದುಳಿದವರಲ್ಲೂ ಅಸಮಾಧಾನ ಶುರುವಾಗಿದ್ದು, ಅಂಥವರನ್ನು ಒಗ್ಗೂಡಿಸುವ ಜವಾಬ್ದಾರಿಯನ್ನು ಒಕ್ಕಲಿಗ ನಾಯಕರು ವಹಿಸಿಕೊಂಡಿದ್ದಾರೆ. ಅಸಮಾಧಾನಿತ ಎಲ್ಲರನ್ನು ಒಗ್ಗೂಡಿಸಿಕೊಂಡು ಹೋರಾಟ ನಡೆಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ.