ಮಂಡ್ಯ : ಮಂಡ್ಯದಲ್ಲಿ ಹೆದ್ದಾರಿ ಪಕ್ಕದಲ್ಲೇ ದಿಢೀರ್ ಆಗಿ ಖಾಸಗಿ ಬಸ್ ವೊಂದು ಹೊತ್ತಿ ಉರಿದ ಘಟನೆ ನಡೆದಿದ್ದು, ಅದೃಷ್ಟವಶಾತ್ 25 ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮಂಡ್ಯ ಜಿಲ್ಲೆಯ ನಾಗಮಂಗಲ ತಾಳೂಕಿನ ಕದಬಹಳ್ಳಿ ಬಳಿ ಖಾಸಗಿ ಬಸ್ ದಿಢೀರ್ ಹೊತ್ತಿ ಉರಿದಿದೆ. ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಹೋಗುತ್ತಿದ್ದ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಪ್ರಯಾಣಿಕರನ್ನು ಚಾಲಕ ಕೆಳಗಿಳಿಸಿದ್ದಾರೆ. ಬಿಂಡಿಗನವಿಲೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.