Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ರಾಜೀನಾಮೆಗೆ ಕಾಲಾವಕಾಶ ಕೇಳಿದ್ದ ಸಿಎಂ ಸಿದ್ದರಾಮಯ್ಯಗೆ, ರಾಹುಲ್ ಗಾಂಧಿ ಹೇಳಿದ್ದೇನು ಗೊತ್ತಾ?

BIG UPDATE: ಬಾಲಿವುಡ್ ನಟ ರಣವೀರ್ ಸಿಂಗ್ ಬ್ಯಾನ್ ಆಗಿಲ್ಲ, ಅದು ‘ನಾನ್-ಕೋಆಪರೇಷನ್’ ಮಾತ್ರ: FWICE ಸ್ಪಷ್ಟನೆ

ರಾಜ್ಯದಲ್ಲಿ ಹೃದಯವಿದ್ರಾವಕ ಘಟನೆ : 18 ದಿನದ ಹಿಂದೆಯಷ್ಟೇ ಮದುವೆಯಾಗಿದ್ದ ಕಾನ್ಸ್ಟೇಬಲ್ ಹೃದಯಾಘಾತಕ್ಕೆ ಬಲಿ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ಕರ್ನಾಟಕದಲ್ಲಿರುವ ‘ಪಾಕಿಸ್ತಾನಿ ಪ್ರಜೆ’ಗಳನ್ನು ಹುಡುಕಿ ಹುಡುಕಿ ವಾಪಾಸ್ ಕಳಿಸ್ತೀವಿ: ಸಿಎಂ ಸಿದ್ಧರಾಮಯ್ಯ
KARNATAKA

BIG NEWS: ಕರ್ನಾಟಕದಲ್ಲಿರುವ ‘ಪಾಕಿಸ್ತಾನಿ ಪ್ರಜೆ’ಗಳನ್ನು ಹುಡುಕಿ ಹುಡುಕಿ ವಾಪಾಸ್ ಕಳಿಸ್ತೀವಿ: ಸಿಎಂ ಸಿದ್ಧರಾಮಯ್ಯ

By ವಸಂತ ಬಿ ಈಶ್ವರಗೆರೆ

ಮೈಸೂರು: ಕೇಂದ್ರ ಸರ್ಕಾರದ ಸೂಚನೆಯಂತೆ, ಕರ್ನಾಟಕ ರಾಜ್ಯದಲ್ಲಿರಬಹುದಾದ ಪಾಕಿಸ್ತಾನಿ ಪ್ರಜೆಗಳ ಬಗ್ಗೆ ಮಾಹಿತಿ ಕಲೆಹಾಕಿ, ಅವರನ್ನು ವಾಪಸ್ಸು ಕಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಈ ಮೂಲಕ ಕರ್ನಾಟಕದಲ್ಲಿರುವಂತ ಪಾಕಿಸ್ತಾನಿ ಪ್ರಜೆಗಳನ್ನು ಹುಡುಕಿ ಹುಡುಕಿ ವಾಪಾಸ್ಸು ಕಳುಹಿಸುವುದಾಗಿ ತಿಳಿಸಿದ್ದಾರೆ.

ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದ ವಿವಿಧ ನಗರಗಳಲ್ಲಿ ಪಾಕಿಸ್ತಾನಿಗಳ ಸಂಖ್ಯೆ ಬಗ್ಗೆ ಹಾಗೂ ಬೆಂಗಳೂರಿನಲ್ಲಿ ಪಾಕಿಸ್ತಾನಿಗಳ ಹೆಚ್ಚಿನ ಸಂಖ್ಯೆಯಲ್ಲಿದ್ದು, ಈ ಬಗ್ಗೆ ಮಾಹಿತಿ ಪಡೆಯಲಾಗವುದು ಎಂದರು.

ಕಾಶ್ಮೀರದಲ್ಲಿ ಭದ್ರತೆ ಹೆಚ್ಚಿಸಬೇಕಿತ್ತು

ಕಾಶ್ಮೀರದ ಉಗ್ರರ ದಾಳಿ ಘಟನೆಯಲ್ಲಿ ಭದ್ರತಾ ವೈಫಲ್ಯವನ್ನು ಕೇಂದ್ರ ಸರ್ಕಾರ ಒಪ್ಪಿಕೊಂಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಸ್ಥಳಕ್ಕೆ ಹೆಚ್ಚಿನ ಭದ್ರತೆಯನ್ನು ಒದಗಿಸಬೇಕಿತ್ತು.ಹಿಂದೆ ಪುಲ್ವಾಮಾದಲ್ಲಿಯೂ 40 ಜನ ಯೋಧರು ಪ್ರಾಣ ಕಳೆದುಕೊಂಡಿದ್ದರು. ಈ ಘಟನೆಯಲ್ಲಿ ಭದ್ರತಾ ವೈಫಲ್ಯವಾಗಿದೆ. ಕೇಂದ್ರ ಸರ್ಕಾರದವರನ್ನು ನಂಬಿ ಪ್ರವಾಸಿಗರು ಹೋಗಿದ್ದರು ಹಾಗೂ ಈಗ ಯಾವುದೇ ಕ್ರಮಗಳನ್ನು ಕೇಂದ್ರ ಕೈಗೊಂಡರೂ, ಪ್ರಾಣ ಕಳೆದುಕೊಂಡ 26 ಜನ ಮತ್ತೆ ಬದುಕಿ ಬರಲು ಸಾಧ್ಯವೇ ? ಕಾಶ್ಮೀರದಲ್ಲಿ ಸಿಲುಕಿದ್ದ ಕನ್ನಡಿಗರ ರಕ್ಷಣೆಗೆ ಸಚಿವ ಸಂತೋಷ್ ಲಾಡ್ ಅವರನ್ನು ನಿಯೋಜಿಸಿದ್ದು, ಅವರು ಎಲ್ಲ ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತಂದಿದ್ದಾರೆ ಎಂದರು.

ನಾವು ಯುದ್ಧದ ಪರ ಇಲ್ಲ

ಉಗ್ರರ ದಾಳಿಗೆ ಸಂಬಂಧಿಸಿದಂತೆ, ಪಾಕಿಸ್ತಾನದ ಮೇಲೆ ಯುದ್ಧ ಸಾರುವ ಅನಿವಾರ್ಯತೆ ಇದೆಯೇ ಎಂಬ ಬಗ್ಗೆ ಪ್ರತಿಕ್ರಿಯೆ ನೀಡಿ, ಪಾಕಿಸ್ತಾನದ ಮೇಲೆ ಯುದ್ಧ ಸಾರುವ ಅಗತ್ಯವಿಲ್ಲ. ಕಾಶ್ಮೀರದ ಪ್ರದೇಶದಲ್ಲಿ ಭದ್ರತಾ ಕ್ರಮಗಳನ್ನು ಬಿಗಿಗೊಳಿಸಲು ಕ್ರಮ ಕೈಗೊಳ್ಳಬೇಕು. ನಾವು ಯುದ್ಧದ ಪರ ಇಲ್ಲ. ಕಾಶ್ಮೀರದಲ್ಲಿ ಶಾಂತಿ ನೆಲೆಸಲು ಕೇಂದ್ರಸರ್ಕಾರ ಭದ್ರತೆಯನ್ನು ಹೆಚ್ಚಿಸಬೇಕು ಎಂದರು.

ಪ್ರಧಾನಿಯವರು ಜನರಿಗೆ ಟೋಪಿ ಹಾಕುವ ಕೆಲಸ ಮಾಡುತ್ತಿದ್ದಾರೆ

ಕಾಶ್ಮೀರದ ಉಗ್ರರ ದಾಳಿಗೆ ಸಂಭಂಧಿಸಿದಂತೆ ಕರೆಯಲಾಗಿದ್ದ ಸರ್ವಪಕ್ಷ ಸಭೆಯಲ್ಲಿ ಪ್ರಧಾನಿಯವರು ಭಾಗವಹಿಸದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಇದು ಮಹತ್ವಯುತ ಸಭೆಯಾಗಿದ್ದು, ಪ್ರಧಾನಿಯವರು ಈ ಸಭೆಯಲ್ಲಿ ಹಾಜರಿರಬೇಕಿತ್ತು. ಆದರೆ ಅವರಿಗೆ ಈ ಸಭೆಗಿಂತ ಬಿಹಾರದ ಚುನಾವಣಾ ಪ್ರಚಾರವೇ ಮುಖ್ಯವೆಂದು ಕಾಣುತ್ತದೆ. ಪ್ರಧಾನಿಯವರು ಜನರಿಗೆ ಟೋಪಿ ಹಾಕುವ ಕೆಲಸ ಮಾಡುತ್ತಿದ್ದಾರೆ ಎಂದರು.

ಚಾಮರಾಜನಗರಕ್ಕೆ 20 ಬಾರಿ ಮುಖ್ಯಮಂತ್ರಿಯಾಗಿ ಭೇಟಿ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು,ಚಾಮರಾಜನಗರಕ್ಕೆ ಮೊದಲ ಬಾರಿ ಭೇಟಿ ನೀಡಿದಾಗಲೇ, ಅಲ್ಲಿಗೆ ಭೇಟಿ ನೀಡಿದರೆ ಅಧಿಕಾರ ಹೋಗುತ್ತದೆಂಬ ಕಳಂಕ ತೊಡೆದುಹೋಯಿತು ಎಂದರು.

ಅಪಘಾತ, ಇತರೆ ಕಾರಣದಿಂದ ಮೃತಪಟ್ಟ ಸಾರಿಗೆ ಸಿಬ್ಬಂದಿ ಕುಟುಂಬಕ್ಕೆ ಸಚಿವ ರಾಮಲಿಂಗಾರೆಡ್ಡಿ ಪರಿಹಾರದ ಚೆಕ್ ವಿತರಣೆ

BREAKING : ಪಾಕಿಸ್ತಾನಕ್ಕೆ ತಿರುಗುಬಾಣವಾದ ಯುದ್ಧಾಭ್ಯಾಸ : ಲ್ಯಾಂಡ್ ಆಗುತ್ತಿದ್ದಂತೆ ಹೊತ್ತಿ ಉರಿದ ವಿಮಾನ | WATCH VIDEO

Share. Facebook Twitter LinkedIn WhatsApp Email

Related Posts

BIG NEWS : ರಾಜೀನಾಮೆಗೆ ಕಾಲಾವಕಾಶ ಕೇಳಿದ್ದ ಸಿಎಂ ಸಿದ್ದರಾಮಯ್ಯಗೆ, ರಾಹುಲ್ ಗಾಂಧಿ ಹೇಳಿದ್ದೇನು ಗೊತ್ತಾ?

1 Min Read

ರಾಜ್ಯದಲ್ಲಿ ಹೃದಯವಿದ್ರಾವಕ ಘಟನೆ : 18 ದಿನದ ಹಿಂದೆಯಷ್ಟೇ ಮದುವೆಯಾಗಿದ್ದ ಕಾನ್ಸ್ಟೇಬಲ್ ಹೃದಯಾಘಾತಕ್ಕೆ ಬಲಿ!

1 Min Read

SHOCKING: 18 ದಿನಗಳ ಹಿಂದಷ್ಟೇ ಮದುವೆಯಾಗಿದ್ದ ಕಾನ್ಸ್‌ಟೇಬಲ್ ಹೃದಯಾಘಾತದಿಂದ ನಿಧನ

1 Min Read
Recent News

BIG NEWS : ರಾಜೀನಾಮೆಗೆ ಕಾಲಾವಕಾಶ ಕೇಳಿದ್ದ ಸಿಎಂ ಸಿದ್ದರಾಮಯ್ಯಗೆ, ರಾಹುಲ್ ಗಾಂಧಿ ಹೇಳಿದ್ದೇನು ಗೊತ್ತಾ?

BIG UPDATE: ಬಾಲಿವುಡ್ ನಟ ರಣವೀರ್ ಸಿಂಗ್ ಬ್ಯಾನ್ ಆಗಿಲ್ಲ, ಅದು ‘ನಾನ್-ಕೋಆಪರೇಷನ್’ ಮಾತ್ರ: FWICE ಸ್ಪಷ್ಟನೆ

ರಾಜ್ಯದಲ್ಲಿ ಹೃದಯವಿದ್ರಾವಕ ಘಟನೆ : 18 ದಿನದ ಹಿಂದೆಯಷ್ಟೇ ಮದುವೆಯಾಗಿದ್ದ ಕಾನ್ಸ್ಟೇಬಲ್ ಹೃದಯಾಘಾತಕ್ಕೆ ಬಲಿ!

SHOCKING: 18 ದಿನಗಳ ಹಿಂದಷ್ಟೇ ಮದುವೆಯಾಗಿದ್ದ ಕಾನ್ಸ್‌ಟೇಬಲ್ ಹೃದಯಾಘಾತದಿಂದ ನಿಧನ

State News
KARNATAKA

BIG NEWS : ರಾಜೀನಾಮೆಗೆ ಕಾಲಾವಕಾಶ ಕೇಳಿದ್ದ ಸಿಎಂ ಸಿದ್ದರಾಮಯ್ಯಗೆ, ರಾಹುಲ್ ಗಾಂಧಿ ಹೇಳಿದ್ದೇನು ಗೊತ್ತಾ?

By ಸುರೇಶ್‌ KARNATAKA 1 Min Read

ಬೆಂಗಳೂರು : ನಿನ್ನೆ ದೆಹಲಿಯ ಕಾಂಗ್ರೆಸ್ ಕಚೇರಿಯಲ್ಲಿ ರಾಹುಲ್ ಗಾಂಧಿ ಅವರ ಜೊತೆಗೆ ಸಿಎಂ ಸಿದ್ದರಾಮಯ್ಯ ಹಲವು ವಿಚಾರಗಳು ಕುರಿತು…

ರಾಜ್ಯದಲ್ಲಿ ಹೃದಯವಿದ್ರಾವಕ ಘಟನೆ : 18 ದಿನದ ಹಿಂದೆಯಷ್ಟೇ ಮದುವೆಯಾಗಿದ್ದ ಕಾನ್ಸ್ಟೇಬಲ್ ಹೃದಯಾಘಾತಕ್ಕೆ ಬಲಿ!

SHOCKING: 18 ದಿನಗಳ ಹಿಂದಷ್ಟೇ ಮದುವೆಯಾಗಿದ್ದ ಕಾನ್ಸ್‌ಟೇಬಲ್ ಹೃದಯಾಘಾತದಿಂದ ನಿಧನ

KPCC ಅಧ್ಯಕ್ಷ ಸ್ಥಾನಕ್ಕೆ ಡಿಕೆ ಶಿವಕುಮಾರ್ ರಾಜೀನಾಮೆ ಸಾಧ್ಯತೆ : ಅಧ್ಯಕ್ಷ ಸ್ಥಾನದ ಮೇಲೆ ಸತೀಶ್ ಜಾರಕಿಹೊಳಿ ಕಣ್ಣು!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.