ಬೆಂಗಳೂರು : ನನಗೆ ಜೀವ ಬೆದರಿಕೆ ನನಗೆ ಸೂಕ್ತ ಭದ್ರತೆ ಒದಗಿಸಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿ ಅವರು ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಇದೀಗ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ್ಯ ಮಹೇಶ್ ಜೋಶಿ ಅವರಿಗೆ ಅಗತ್ಯವಿದ್ದರೆ ಸೂಕ್ತ ಭದ್ರತೆ ಒದಗಿಸಿ ಎಂದು ರಾಜ್ಯ ಸರ್ಕಾರಕ್ಕೆ ಮೌಖಿಕ ನಿರ್ದೇಶನ ನೀಡಿದೆ.
ಕಳೆದ ವರ್ಷ ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಜರುಗಿದ ಗಳಿಗೆಯಿಂದ ನನಗೆ ಜೀವ ಬೆದರಿಕೆಯ ಆಡಿಯೊ-ವಿಡಿಯೊ ಕರೆಗಳು ಬರುತ್ತಿವೆ. ಇದರಿಂದ ನನ್ನ ಜೀವಕ್ಕೆ ಅಪಾಯವಿದ್ದು, 24×7 ಭದ್ರತೆ ಒದಗಿಸುವ ಗನ್‌ಮೆನ್ ಜೊತೆಗೆ ಸೂಕ್ತ ಪೊಲೀಸ್ ರಕ್ಷಣೆ ಒದಗಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು’ ಎಂದು ಮಹೇಶ್ ಜೋಶಿ ಕೋರಿದ್ದಾರೆ.
ಜೋಶಿ ಪರ ಪದಾಂಕಿತ ಹಿರಿಯ ವಕೀಲ ಎಸ್.ಬಸವರಾಜು ವಾದ ಮಂಡಿಸಿದ್ದರು. ಈ ವೇಳೆ ವಿಚಾರಣೆ ವೇಳೆ, ಜೋಶಿ ಅವರಿಗೆ ಅಗತ್ಯವಿದ್ದರೆ ಸೂಕ್ತ ಭದ್ರತೆಯನ್ನು ಒದಗಿಸಿ ಎಂದು ಪ್ರಾಸಿಕ್ಯೂಷನ್ ಪರ ಹಾಜರಿದ್ದ ರಾಹುಲ್ ಕಾರ್ಯಪ್ಪ ಅವರಿಗೆ ನಿರ್ದೇಶಿಸಿದ ನ್ಯಾಯಪೀಠ ಲಿಖಿತ ಆದೇಶವನ್ನು ಕಾಯ್ದಿರಿಸಿತು.







