Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot
ಬಿಸಿಲಿನಿಂದ ಬಂದ ನಂತರ ಎಸಿ ಬಳಸುತ್ತಿರುವ ವ್ಯಕ್ತಿ - Person entering AC room after sunlight exposure

ummer Heat Safety Tips : ಬಿಸಿಲಿನಿಂದ ಬಂದ ನಂತರ ಎಸಿ ಕೋಣೆಗೆ ಹೋಗುವುದು ಒಳ್ಳೆಯದೇ? ಇಲ್ಲಿದೆ ನೋಡಿ ಮಹತ್ವದ ಮಾಹಿತಿ

ನೀರವ್ ಮೋದಿ ಹಸ್ತಾಂತರಕ್ಕೆ ಮತ್ತೆ ‘ಗುಪ್ತ ಪ್ರಕ್ರಿಯೆ’ ಅಡ್ಡಿ: ಭಾರತಕ್ಕೆ ಕರೆತರುವಲ್ಲಿ ವಿಳಂಬ!

vastu tips These 5 things in the house is inauspicious

Vastu Tips : ದಕ್ಷಿಣ ದಿಕ್ಕಿನಲ್ಲಿ ಈ ತಪ್ಪುಗಳಿದ್ದರೆ ಮನೆಗೆ ಕಾಲಿಡುತ್ತದೆ ದಾರಿದ್ರ್ಯ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಸಂಘ ಪರಿವಾರ ಯಾವತ್ತೂ ಸ್ವಾತಂತ್ರ್ಯ ಹೋರಾಟಕ್ಕೆ ಬರಲೇ ಇಲ್ಲ, ಈಗವರು ದೇಶಭಕ್ತಿ ಬಗ್ಗೆ ಮಾತಾಡುತ್ತಾರೆ’ : ಸಿಎಂ
KARNATAKA

‘ಸಂಘ ಪರಿವಾರ ಯಾವತ್ತೂ ಸ್ವಾತಂತ್ರ್ಯ ಹೋರಾಟಕ್ಕೆ ಬರಲೇ ಇಲ್ಲ, ಈಗವರು ದೇಶಭಕ್ತಿ ಬಗ್ಗೆ ಮಾತಾಡುತ್ತಾರೆ’ : ಸಿಎಂ

By kannadanewsnow05

ಬೆಂಗಳೂರು : ಸಂಘ ಪರಿವಾರ ಯಾವತ್ತೂ ಸ್ವಾತಂತ್ರ್ಯ ಹೋರಾಟಕ್ಕೆ ಬರಲೇ ಇಲ್ಲ. ಈಗವರು ದೇಶಭಕ್ತಿ ಬಗ್ಗೆ ಮಾತಾಡುತ್ತಾರೆ. ಸಾವರ್ಕರ್ ಮತ್ತು ಗೋಲ್ವಾಲ್ಕರರು ಅಂಬೇಡ್ಕರ್ ಅವರ ಸಂವಿಧಾನದ ವಿರುದ್ಧ ಇದ್ದವರು ಎನ್ನುವ ಸ್ಪಷ್ಟ ತಿಳುವಳಿಕೆ ನಮ್ಮ ಕಾರ್ಯಕರ್ತರಿಗೆ ಇರಬೇಕು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಇಂದು ಯುವ ಕಾಂಗ್ರೆಸ್ ಆಯೋಜಿಸಿದ್ದ “ಯುವ ಕ್ರಾಂತಿ” ಕಾರ್ಯಕರ್ತರ ತರಬೇತಿ ಶಿಬಿರದಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿ, ಸ್ವಾತಂತ್ರ್ಯ ಹೋರಾಟ ಮತ್ತು‌ ಆಧುನಿಕ ಭಾರತ ನಿರ್ಮಾಣದಲ್ಲಿ ಕಾಂಗ್ರೆಸ್ ನ ತ್ಯಾಗ-ಬಲಿದಾನ ಮಹತ್ವದ ಪಾತ್ರ ನಿರ್ವಹಿಸಿದೆ. ದೇಶಕ್ಕೆ ನಾಗರಿಕ ಹಕ್ಕು ಮತ್ತು ಸಾಮಾಜಿಕ ನ್ಯಾಯ ಒದಗಿಸಲು ಹುಟ್ಟಿದ ಪಕ್ಷ ಕಾಂಗ್ರೆಸ್. ಸಂಘ ಪರಿವಾರ ಯಾವತ್ತೂ ಸ್ವಾತಂತ್ರ್ಯ ಹೋರಾಟಕ್ಕೆ ಬರಲೇ ಇಲ್ಲ.

ಗಾಂಧಿ ಅವರು ಸ್ವಾತಂತ್ರ್ಯ ಹೋರಾಟದ ನೇತೃತ್ವ ವಹಿಸಿದಂತೆ, ಭಾರತದಲ್ಲಿ ಅಂಬೇಡ್ಕರ್ ಅವರ ಸಂವಿಧಾನಕ್ಕೆ ಭದ್ರ ಬುನಾಧಿ ಹಾಕಿದವರು ನೆಹರೂರವರು. ಬಹುತ್ವ ಭಾರತದ ನೆಲದಲ್ಲಿ ಏಕತೆ ಮೂಡಿಸಿ ಸಹಿಷ್ಣುಣತೆಯನ್ನು ಆಚರಣೆಗೆ ತರಲು ನೆಹರೂ ಕೊಡುಗೆ ಅಪಾರ. ಮನುಸ್ಮೃತಿ ಪ್ರೇರಿತ ಜಾತಿ ವ್ಯವಸ್ಥೆ ಭಾರತ ಸಮಾಜವನ್ನು ಜಾತಿ ಆಧಾರದಲ್ಲಿ ಒಡೆಯಿತು. ಈ ಇತಿಹಾಸ ನಿಮಗೆ ಗೊತ್ತಿರಬೇಕು.

ಯುವ ಕಾಂಗ್ರೆಸ್ ಅಂದರೆ ಭಾರತದ ಸಂವಿಧಾನ ಮತ್ತು ಬಹುತ್ವದ ರಕ್ಷಣೆಗೆ ನಿಂತ ಯುವ ಸೈನ್ಯ. ನಾವು ಏಕೆ ಕಾಂಗ್ರೆಸ್ ಕಟ್ಟುತ್ತಿದ್ದೇವೆ, ಆರ್.ಎಸ್.ಎಸ್ ಮತ್ತು ಸಂಘ ಪರಿವಾರ ಹೇಗೆ ಭಾರತದ ಬಹುತ್ವ ಮತ್ತು ಸಂವಿಧಾನ ವಿರೋಧಿ ಎನ್ನುವ ಸ್ಪಷ್ಟತೆ ನಿಮಗೆ ಇರಬೇಕು. ಈ ಸ್ಪಷ್ಟತೆ ಇಲ್ಲದವರು ಬಹಳ ವರ್ಷ ಕಾಂಗ್ರೆಸ್ ನಲ್ಲಿ ಉಳೀತಾರೆ ಎನ್ನುವುದು ಅನುಮಾನ. ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ, ಸಹಿಷ್ಣುತೆ ಹಾಗೂ ಸಹಬಾಳ್ವೆ ನಮ್ಮ ಸಂವಿಧಾನದ ಉಸಿರು. ಇದೇ ಭಾರತದ ಉಸಿರು ಕೂಡ ಆಗಿದೆ.

“ಅಧಿಕಾರ ಬಲಾಡ್ಯರ ಕೈಯಲ್ಲಿ ಇರಬಾರದು. ಜನ ಸಾಮಾನ್ಯರ ಕೈಯಲ್ಲಿ ಇರಬೇಕು” ಎಂದು ಅಂಬೇಡ್ಕರ್ ಹೇಳಿದ್ದರು. ಕಾಂಗ್ರೆಸ್ ಜನರ ಕೈಗೆ ಅಧಿಕಾರ ಮತ್ತು ಅವಕಾಶಗಳನ್ನು ನೀಡುತ್ತಿದೆ. ಬಿಜೆಪಿ ಬಲಾಡ್ಯರಿಗೆ ಅಧಿಕಾರ ಮತ್ತು ಅವಕಾಶ ನೀಡುತ್ತಿದೆ. ಇದು ಸಂವಿಧಾನ ವಿರೋಧಿ.

ನಾನು ಎರಡು ಬಾರಿ ಮುಖ್ಯಮಂತ್ರಿಯಾಗಿ ಅಸಮಾನತೆಯನ್ನು ಕಡಿಮೆ ಮಾಡುವ ಕಾರ್ಯಕ್ರಮಗಳನ್ನು ರೂಪಿಸಿ ಜಾರಿ ಮಾಡಿದ್ದೇನೆ. ಸ್ವಾತಂತ್ರ್ಯ ದೊರೆತದ್ದು ಸಾರ್ಥಕ ಆಗಬೇಕಾದರೆ ಪ್ರತಿಯೊಬ್ಬರೂ ಆರ್ಥಿಕ ಮತ್ತು ಸಾಮಾಜಿಕ ಸಬಲತೆ ಪಡೆದುಕೊಳ್ಳಬೇಕು. ಕಟ್ಟ ಕಡೆಯ ಮನುಷ್ಯನಿಗೆ ಶಕ್ತಿ ಕೊಡುವುದೇ ಸರ್ವೋದಯದ ಆಶಯ.ಮೌಡ್ಯ, ಕಂದಾಚಾರ, ಕರ್ಮ ಸಿದ್ಧಾಂತವನ್ನು ಕೃತಕವಾಗಿ ಸೃಷ್ಟಿಸಿ ನೀರು ಗೊಬ್ಬರ ಹಾಕಿ ಗಟ್ಟಿ ಮಾಡಿಟ್ಟಿದ್ದಾರೆ. ದೇವರು ಒಬ್ಬರಿಗೊಂದು, ಮತ್ತೊಬ್ಬರಿಗೊಂದು ಮಾಡುವುದಿಲ್ಲ. ದೇವರ ಹೆಸರಲ್ಲಿ ಮೌಢ್ಯಗಳನ್ನು ಬಿತ್ತುವವರ ಬಗ್ಗೆ ಎಚ್ಚರವಿರಲಿ.

ಶರಣ ಬಸವಣ್ಣ ಹೇಳಿದ ರೀತಿಯಲ್ಲಿ ದೇವರು ಇದ್ದಾನೆ. ಬಸವಣ್ಣರ ರೀತಿಯಲ್ಲಿ ದೇವರನ್ನು ಕಾಣಬೇಕು. ಮಾಡಬಾರದ ಪಾಪಗಳನ್ನೆಲ್ಲಾ ಮಾಡಿ ದೇವರಿಗೆ ಕೈ ಮುಗಿದರೆ ಪಾಪ ಹೋಗುವುದಿಲ್ಲ. ಬಿಜೆಪಿ ದೇವರು, ಧರ್ಮದ ಹೆಸರಲ್ಲಿ ಬರೀ ಸುಳ್ಳು ಹರಡುತ್ತದೆ. ಈ ಬಗ್ಗೆ ದೇಶದ ಜನರ ತಿಳಿವಳಿಕೆ ಹೆಚ್ಚಿಸುವ ಕೆಲಸ ಆಗಬೇಕಿದೆ.ತನ್ನನ್ನು ಚುನಾವಣೆಯಲ್ಲಿ ಸೋಲಿಸಿದ್ದು ಸಾವರ್ಕರ್ ಮತ್ತು ಢಾಂಗೆ ಎಂದು ಅಂಬೇಡ್ಕರ್ ಅವರೇ ಸ್ಪಷ್ಟವಾಗಿ ಬರೆದಿದ್ದಾರೆ. ನಿಮಗೆ ಇಂಥಾ ವಿಷಯಗಳಲ್ಲಿ ಸ್ಪಷ್ಟತೆ ಮತ್ತು ಬದ್ಧತೆ ಇದ್ದರೆ ಯಾರು ಏನೇ ಮಾಡಿದರೂ ನೀವು ಬದಲಾಗಲ್ಲ ಎಂದು ವಾಗ್ದಾಳಿ ನಡೆಸಿದರು.

ರಾಜೀವ್ ಗಾಂಧಿ ಅವರು ಕೊಟ್ಟ ಮೀಸಲಾತಿಯನ್ನು ವಿರೋಧಿಸಿ ನ್ಯಾಯಾಲಯದ ಮೆಟ್ಟಿಲೇರಿದ್ದು ಬಿಜೆಪಿಯ ರಾಮಾ ಜೋಯಿಸ್. ಆದರೆ ನ್ಯಾಯಾಲಯ ರಾಜೀವ್ ಗಾಂಧಿ ಅವರು ತಂದ ತಿದ್ದುಪಡಿಯನ್ನು ಎತ್ತಿ ಹಿಡಿದು, ಇದು ಸಂವಿಧಾನ ಬದ್ಧವಾಗಿದೆ ಎಂದು ಹೇಳಿತು. ಮೀಸಲಾತಿಯನ್ನು ವಿರೋಧಿಸಿದ್ದ ಬಿಜೆಪಿ ಮಂಡಲ್ ವರದಿಯನ್ನೂ ವಿರೋಧಿಸಿತು.

ಹೀಗಾಗಿ ಇತಿಹಾಸ ಮತ್ತು ಸಿದ್ಧಾಂತದ ಬಗ್ಗೆ ನಿಮಗೆ ಸ್ಪಷ್ಟತೆ ಇದ್ದರೆ ಮುಂದೆ ಉತ್ತಮ‌ ನಾಯಕರಾಗಿ ಬೆಳೆಯುತ್ತೀರಿ. ಯುವ ಕಾಂಗ್ರೆಸ್ ಇಂದು ಇಲ್ಲಿ ಆಯೋಜಿಸಿರುವ ಇಂತಹ ಕಾರ್ಯಾಗಾರಗಳು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ನಡೆಯಬೇಕು ಎಂದು ಯುವ ಕಾಂಗ್ರೆಸ್ ಆಯೋಜಿಸಿದ್ದ “ಯುವ ಕ್ರಾಂತಿ” ಕಾರ್ಯಕರ್ತರ ತರಬೇತಿ ಶಿಬಿರದಲ್ಲಿ ಸಿಎಂ ಸಿದ್ದರಾಮಯ್ಯ ಯುವ ಕಾಂಗ್ರೆಸ್ ಕಾರ್ಯಕರ್ತರಿಗೆ ಕಿವಿಮಾತು ಹೇಳಿದರು.

ಸಂಘ ಪರಿವಾರ ಯಾವತ್ತೂ ಸ್ವಾತಂತ್ರ್ಯ ಹೋರಾಟಕ್ಕೆ ಬರಲೇ ಇಲ್ಲ. ಈಗವರು ದೇಶಭಕ್ತಿ ಬಗ್ಗೆ ಮಾತಾಡುತ್ತಾರೆ. ಸಾವರ್ಕರ್ ಮತ್ತು ಗೋಲ್ವಾಲ್ಕರರು ಅಂಬೇಡ್ಕರ್ ಅವರ ಸಂವಿಧಾನದ ವಿರುದ್ಧ ಇದ್ದವರು ಎನ್ನುವ ಸ್ಪಷ್ಟ ತಿಳುವಳಿಕೆ ನಮ್ಮ ಕಾರ್ಯಕರ್ತರಿಗೆ ಇರಬೇಕು.

ಸ್ವಾತಂತ್ರ್ಯ ಹೋರಾಟ ಮತ್ತು‌ ಆಧುನಿಕ ಭಾರತ ನಿರ್ಮಾಣದಲ್ಲಿ ಕಾಂಗ್ರೆಸ್ ನ… pic.twitter.com/tEG5rjyEzv

— Siddaramaiah (@siddaramaiah) April 26, 2025

Share. Facebook Twitter LinkedIn WhatsApp Email

Related Posts

ಮದುವೆಯ ಬಗ್ಗೆ ಯಾರೂ ಹೇಳದ ಆ 5 ಸೀಕ್ರೆಟ್ಸ್ ಇಲ್ಲಿದೆ.. ಓದಿದರೆ ಶಾಕ್ ಆಗ್ತೀರಾ!

2 Mins Read

BREAKING : 1 ಲಕ್ಷ ರೂ. ಲಂಚ ಪಡೆಯುತ್ತಿದ್ದಾಗಲೇ ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಭ್ರಷ್ಟ ಇನ್ಸ್ಪೆಕ್ಟರ್ | Lokayukta Raid

1 Min Read
ಯಾದಗಿರಿ ಲೋಕಾಯುಕ್ತ ದಾಳಿ ಇನ್ಸ್‌ಪೆಕ್ಟರ್ ಬಂಧನ [Yadgiri Lokayukta Raid Inspector Arrested], ಗುರುಮಠಕಲ್ ಪೊಲೀಸ್ ಭ್ರಷ್ಟಾಚಾರ ಪ್ರಕರಣ [Gurmitkal Police Corruption Case], ವೀರಣ್ಣ ದೊಡ್ಡಮನಿ ಲೋಕಾಯುಕ್ತ ಟ್ರ್ಯಾಪ್ [Veeranna Doddamani Lokayukta Trap]. ಟ್ಯಾಗ್ಸ್‌ (Tags)

ಪೊಲೀಸ್ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ : ಒಂದು ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದಾಗ ದಾಳಿ

3 Mins Read
Recent News
ಬಿಸಿಲಿನಿಂದ ಬಂದ ನಂತರ ಎಸಿ ಬಳಸುತ್ತಿರುವ ವ್ಯಕ್ತಿ - Person entering AC room after sunlight exposure

ummer Heat Safety Tips : ಬಿಸಿಲಿನಿಂದ ಬಂದ ನಂತರ ಎಸಿ ಕೋಣೆಗೆ ಹೋಗುವುದು ಒಳ್ಳೆಯದೇ? ಇಲ್ಲಿದೆ ನೋಡಿ ಮಹತ್ವದ ಮಾಹಿತಿ

ನೀರವ್ ಮೋದಿ ಹಸ್ತಾಂತರಕ್ಕೆ ಮತ್ತೆ ‘ಗುಪ್ತ ಪ್ರಕ್ರಿಯೆ’ ಅಡ್ಡಿ: ಭಾರತಕ್ಕೆ ಕರೆತರುವಲ್ಲಿ ವಿಳಂಬ!

vastu tips These 5 things in the house is inauspicious

Vastu Tips : ದಕ್ಷಿಣ ದಿಕ್ಕಿನಲ್ಲಿ ಈ ತಪ್ಪುಗಳಿದ್ದರೆ ಮನೆಗೆ ಕಾಲಿಡುತ್ತದೆ ದಾರಿದ್ರ್ಯ

ಮದುವೆಯ ಬಗ್ಗೆ ಯಾರೂ ಹೇಳದ ಆ 5 ಸೀಕ್ರೆಟ್ಸ್ ಇಲ್ಲಿದೆ.. ಓದಿದರೆ ಶಾಕ್ ಆಗ್ತೀರಾ!

State News
KARNATAKA

ಮದುವೆಯ ಬಗ್ಗೆ ಯಾರೂ ಹೇಳದ ಆ 5 ಸೀಕ್ರೆಟ್ಸ್ ಇಲ್ಲಿದೆ.. ಓದಿದರೆ ಶಾಕ್ ಆಗ್ತೀರಾ!

By kannadanewsnow57 KARNATAKA 2 Mins Read

ಮದುವೆ ಅಂದ ತಕ್ಷಣ ನಮ್ಮ ಕಣ್ಣಮುಂದೆ ಬರುವುದು ಸಿನಿಮೀಯ ಶೈಲಿಯ ಎಂಟ್ರಿ, ದುಬಾರಿ ಉಡುಪುಗಳು, ಸುಂದರವಾದ ಮಂಟಪ ಮತ್ತು ಪರಸ್ಪರ…

BREAKING : 1 ಲಕ್ಷ ರೂ. ಲಂಚ ಪಡೆಯುತ್ತಿದ್ದಾಗಲೇ ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಭ್ರಷ್ಟ ಇನ್ಸ್ಪೆಕ್ಟರ್ | Lokayukta Raid

ಯಾದಗಿರಿ ಲೋಕಾಯುಕ್ತ ದಾಳಿ ಇನ್ಸ್‌ಪೆಕ್ಟರ್ ಬಂಧನ [Yadgiri Lokayukta Raid Inspector Arrested], ಗುರುಮಠಕಲ್ ಪೊಲೀಸ್ ಭ್ರಷ್ಟಾಚಾರ ಪ್ರಕರಣ [Gurmitkal Police Corruption Case], ವೀರಣ್ಣ ದೊಡ್ಡಮನಿ ಲೋಕಾಯುಕ್ತ ಟ್ರ್ಯಾಪ್ [Veeranna Doddamani Lokayukta Trap]. ಟ್ಯಾಗ್ಸ್‌ (Tags)

ಪೊಲೀಸ್ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ : ಒಂದು ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದಾಗ ದಾಳಿ

ಪಿಯುಸಿ, ಪದವೀಧರರಿಗೆ ಗುಡ್‌ ನ್ಯೂಸ್ : ಮೇ 11 ರಂದು : ಉದ್ಯೋಗಕ್ಕೆ ನೇರ ಸಂದರ್ಶನ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.