ಹಾವೇರಿ : ಇತ್ತೀಚಿಗೆ ಈ ಸಂಬಂಧ ಎನ್ನುವುದಕ್ಕೆ ಅರ್ಥವೇ ಇಲ್ಲದಂತಾಗಿದೆ. ಏಕೆಂದರೆ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಅತ್ಯಾಚಾರ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇವೆ. ಹಿರಿದ ಹಾವೇರಿಯಲ್ಲಿ ಬೆಚ್ಚಿ ಬೀಳಿಸುವಂತಹ ಘಟನೆ ನಡೆದಿದ್ದು ಮನೆ ಮುಂದೆ ಆಟ ಆಡುತ್ತಿದ್ದ 7 ವರ್ಷದ ಬಾಲಕಿಯ ಮೇಲೆ ವೃದ್ಧ ಒಬ್ಬ ಲೈಂಗಿಕ ದೌರ್ಜನ ಎಸಗಿರುವ ಘಟನೆ ಬೆಳಕಿಗೆ ಬಂದಿದೆ.
ಹೌದು ಜಿಲ್ಲೆಯ ಶಿಗ್ಗಾವಿ ತಾಲೂಕು ಹುಲಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ಘಟನೆ ನಡೆದಿದೆ. ಬಾಲಕಿಗೆ ಮಾವಿನಹಣ್ಣು ಕೊಡುವುದಾಗಿ ಆಮಿಷವೊಡ್ಡಿರುವ ಆರೋಪಿ, ಆಕೆಯನ್ನು ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ದೂರು ನೀಡಲಾಗಿದೆ. ಹುಲಗೂರು ಪೊಲೀಸ್ ಠಾಣೆಯಲ್ಲಿ ಶನಿವಾರ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇತ್ತೀಚಿಗೆ ಹುಬ್ಬಳ್ಳಿಯಲ್ಲಿ ಇಡೀ ರಾಜ್ಯವೇ ಬೆಚ್ಚಿ ಬೀಳಿಸುವಂತಹ ಘಟನೆ ನಡೆದಿತ್ತು. ಚಾಕ್ಲೇಟ್ ಕೊಡಿಸುವ ನೆಪದಲ್ಲಿ ಬಿಹಾರ್ ಮೂಲದ ಪ್ರತಿಯೊಬ್ಬ ಹರಿಸಿ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದ. ಬಳಿಕ ಪೊಲೀಸರು ಆತನನ್ನು ಅರೆಸ್ಟ್ ಮಾಡಲು ಹೋದಾಗ ಅವರ ಮೇಲೆ ಹಲ್ಲೆ ಮಾಡಿದ್ದ. ಈ ವೇಳೆ ಪೊಲೀಸರು ಆತ್ಮ ರಕ್ಷಣೆಗಾಗಿ ಆತನ ಮೇಲೆ ಗುಂಡಿನ ದಾಳಿ ನಡೆಸಿದ್ದರು. ಬಳಿಕ ಚಿಕಿತ್ಸೆ ಫಲಿಸದೇ ಆತ ಸಾವನ್ನಪ್ಪಿದ್ದ