ಕಲಬುರಗಿ : ಕಲಬುರಗಿ ಜಿಲ್ಲೆಯಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.
ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಯಾತನೂರಿನಲ್ಲಿ ನಿದ್ದೆ ಮಾತ್ರೆ ಸೇವಿಸಿ ನಾಗೇಶ್ ರೂಗಿ (50) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಿಂದುಜಾ ಮೈಕ್ರೋ ಫೈನಾನ್ಸ್ ನಲ್ಲಿ 5 ಲಕ್ಷ ರೂ. ಸಾಲ ಪಡೆದಿದ್ದರು. 1 ಲಕ್ಷ 50 ಸಾವಿರ ರೂ. ಬಾಕಿ ಉಳಿಸಿಕೊಂಡಿದ್ದ ನಾಗೇಶ್ ರೂಗಿಗೆ ಬಾಕಿ ಹಣಕ್ಕಾಗಿ ಸಿಬ್ಬಂದಿ ಮನೆಗೆ ಬಂದು ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ.
ಮನೆಯ ಗೋಡೆಯ ಮೇಲೆ ಮನೆ ಮಾರಾಟಕ್ಕಿದೆ ಎಂಬ ಬರಹ ಹಿನ್ನೆಲೆಯಲ್ಲಿ ಮನೆಯಲ್ಲಿ ನಿದ್ದೆ ಮಾತ್ರೆ ಸೇವಿಸಿ ನಾಗೇಶ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ನೆಲೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.