ಕಲಬುರಗಿ : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ.
ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಮಳಖೇಢ ಬಳಿ ರಸ್ತೆ ಬದಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಹೇಶ್ (32), ಪ್ರೇಮ್ ಕುಮಾರ್ (25), ಅನ್ನದಾನಯ್ಯ (35) ಮೃತಪಟ್ಟವರು ಎಂದು ಗುರುತಿಸಲಾಗಿದೆ.
ಸೇಡಂ ಕಡೆಯಿಂದ ಗುಂಡಗುರ್ತಿ ಕಡೆಗೆ ಕಾರು ಹೋಗುತ್ತಿದ್ದ ಕಾರು ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಮದುವೆ ಆಮಂತ್ರಣ ಪತ್ರಿಕೆ ಕೊಡಲು ಕಾರಿನಲ್ಲಿ ಹೋಗುವಾಗ ಈ ಅಪಘಾತ ಸಂಭವಿಸಿದೆ. ಗಂಭೀರವಾಗಿ ಗಾಯಗೊಂಡಿದ್ದ ನಿತ್ಯಾನಂದನಿಗೆ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಳಖೇಡ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.