ಬೆಂಗಳೂರು: ಜಮ್ಮು-ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿಯನ್ನು ಸ್ಯಾಂಡಲ್ ವುಡ್ ನಟ ಶ್ರೀಮುರುಳಿ ಖಾರವಾಗೇ ಖಂಡಿಸಿದ್ದಾರೆ. ಅಲ್ಲದೇ ಉಗ್ರರನ್ನು ಹುಡುಕಿಕೊಂಡು ಹೋಗಿ ಹೊಡೆಯಬೇಕು ಅಂತ ತಿಳಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವಂತ ಅವರು, ಪಹಲ್ಗಾಮ್ ನಲ್ಲಿ ನಡೆದಂತ ಉಗ್ರರ ದಾಳಿಯಲ್ಲಿ ಮೃತರಾದಂತವರ ಬಗ್ಗೆ ಮಮ್ಮಲ ಮರುಗಿದರು. ಈ ವಿಷಯ ನೋವು ತಂದಿದೆ. ಇಂತಹ ಕೃತ್ಯ ಎಸಗಿದಂತವರನ್ನು ಹುಡುಕಿಕೊಂಡು ಹೋಗಿ ಹೊಡೆಯಬೇಕು ಅಂತ ತಿಳಿಸಿದರು.
ಈಗಾಗಲೇ ಕೇಂದ್ರ ಸರ್ಕಾರ ಉಗ್ರರನ್ನು ಮಟ್ಟಹಾಕುವ ಕೆಲಸ ಮಾಡುತ್ತಿದೆ. ಒಬ್ಬ ನಾಗರೀಕನಾಗಿ ನಾನು ಹೇಳುವುದಾದರೇ ಉಗ್ರರ ದಾಳಿಯ ವಿಷಯ ಕೇಳಿ ಮೈಯಲ್ಲಿ ರಕ್ತವೇ ಕುದಿಯಿತು. ಭಯೋತ್ಪಾದಕರ ಸಂಹಾರ ಆಗೋವರೆಗೂ ನಮಗೆ ನೆಮ್ಮದಿಯೇ ಇಲ್ಲ. ಉಗ್ರರ ಅಂತ್ಯವಾಡಲೇ ಬೇಕು ಎಂದರು.
ಅಂದಹಾಗೇ ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ ಪಹಲ್ಗಾಮ್ ನಲ್ಲಿ ಏಪ್ರಿಲ್.22ರಂದು ಉಗ್ರರು ಅಟ್ಟಹಾಸ ಮೆರೆದಿದ್ದರು. ಪಹಲ್ಗಾಮ್ ನಲ್ಲಿದ್ದಂತ ಪ್ರವಾಸಿಗರ ಮೇಲೆ ಗುಂಡಿನ ದಾಳಿ ನಡೆಸಿದ್ದರಿಂದ 26 ಮಂದಿ ಸಾವನ್ನಪ್ಪಿದ್ದರು. ಅಲ್ಲದೇ ಹಲವರು ಗಾಯಗೊಂಡಿದ್ದರು.
ಯುದ್ಧ ಯಾವುದೇ ದೇಶದ ಅಂತಿಮ ಆಯ್ಕೆಯೇ ಹೊರತು, ಮೊದಲ ಏಕೈಕ ಆಯ್ಕೆಯಲ್ಲ: ಸಿಎಂ ಸಿದ್ಧರಾಮಯ್ಯ
ಮನ್ ಕಿ ಬಾತ್: ಭಯೋತ್ಪಾದನೆ ವಿರುದ್ಧ ಪ್ರಧಾನಿ ಮೋದಿಯವರ ಬಲವಾದ ಸಂದೇಶ, ಏಕತೆಗೆ ಒತ್ತು | Mann ki baat