ಬೆಂಗಳೂರು : ರೈಲ್ವೆ ನೇಮಕಾತಿ ಮಂಡಳಿ (ಆರ್‌ಆರ್‌ಬಿ) ನರ್ಸಿಂಗ್ ಸೂಪರಿಂಟೆಂಡೆಂಟ್ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ‘ಮಂಗಳ ಸೂತ್ರ ಮತ್ತು ಧಾರ್ಮಿಕ ಚಿಹ್ನೆಗಳನ್ನು’ ಧರಿಸಿ ಬರೆಯುವುದನ್ನು ನಿಷೇಧಿಸಿಸಲಾಗಿದೆ.
ಸಿಇಟಿ ಪರೀಕ್ಷೆ ಬರೆಯಲು ಜನಿವಾರ ನಿರಾಕರಿಸಿದ ಪ್ರಕರಣ ರಾಜ್ಯದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾದ ಬೆನ್ನಲ್ಲೇ ಇದೀಗ ಕೇಂದ್ರ ಸರ್ಕಾರದ ರೈಲ್ವೆ ನೇಮಕಾತಿ ಮಂಡಳಿ ನಡೆಸುವ ಪರೀಕ್ಷೆಯಲ್ಲಿ ಮಂಗಳಸೂತ್ರ ಹಾಗೂ ಧರ್ಮದ ಸಂಕೇತಗಳನ್ನು ಧರಿಸದಂತೆ ಸೂಚನೆ ನೀಡಲಾಗಿದೆ.
ರೈಲ್ವೆ ಇಲಾಖೆಯು ನರ್ಸಿಂಗ್ ಸೂಪರಿಂಟೆಂಡ್ ಹುದ್ದೆಗೆ ಮಂಗಳವಾರ ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ಕೇಂದ್ರದೊಳಗೆ ಪಾಲಿಸಬೇಕಾದ ಸೂಚನೆಗಳನ್ನು ಪ್ರವೇಶ ಪತ್ರದಲ್ಲಿ ನಮೂದಿಸಲಾಗಿದೆ. ಪ್ರವೇಶ ಪತ್ರದ 7ನೇ ಕ್ರಮಾಂಕದ ಸೂಚನೆಯಲ್ಲಿ ಮಂಗಳಸೂತ್ರ ಧರಿಸುವಂತಿಲ್ಲ ಹಾಗೂ ಧರ್ಮದ ಸಂಕೇತಗಳನ್ನು ಧರಿಸುವಂತಿಲ್ಲ ಎಂದು ಸ್ಪಷ್ಟವಾಗಿ ಸೂಚಿಸಲಾಗಿದೆ.