Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯ ಸರ್ಕಾರ ತನ್ನ ಕೈಲಾದಷ್ಟು ಪ್ರಯತ್ನಿಸುತ್ತಿದೆ: ಎಲ್‌ಪಿಜಿ ಬಿಕ್ಕಟ್ಟು ಬಗ್ಗೆ ಮಧ್ಯಪ್ರವೇಶಿಸಕ್ಕೆ ಹೈಕೋರ್ಟ್ ನಕಾರ

23/03/2026 3:28 PM

ಯಾದಗಿರಿಯಲ್ಲಿ ಪತ್ನಿ ಜೊತೆಗಿನ ಅನೈತಿಕ ಸಂಭಂದ ಪ್ರಶ್ನಿಸಿದಕ್ಕೆ, ಪ್ರಿಯಕರನಿಂದಲೇ ಪತಿಯ ಹತ್ಯೆ!

23/03/2026 3:22 PM

ಯುದ್ಧಪೀಡಿತ ರಾಷ್ಟ್ರಗಳಲ್ಲಿರುವ ಪ್ರತಿ ಭಾರತೀಯನ ರಕ್ಷಣೆ ನಮ್ಮ ಹೊಣೆ: ಲೋಕಸಭೆಯಲ್ಲಿ ಪ್ರಧಾನಿ ಮೋದಿ ಭರವಸೆ

23/03/2026 3:21 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಗ್ಯಾರಂಟಿ ಯೋಜನೆಗಳಿಂದ 80,000 ಕೋಟಿ ರೂ. ರಾಜ್ಯದ ಜನರ ಜೇಬಿಗೆ ಹಾಕಿದ್ದೇವೆ : ಸಿಎಂ ಸಿದ್ದರಾಮಯ್ಯ
KARNATAKA

BIG NEWS : ಗ್ಯಾರಂಟಿ ಯೋಜನೆಗಳಿಂದ 80,000 ಕೋಟಿ ರೂ. ರಾಜ್ಯದ ಜನರ ಜೇಬಿಗೆ ಹಾಕಿದ್ದೇವೆ : ಸಿಎಂ ಸಿದ್ದರಾಮಯ್ಯ

By kannadanewsnow5728/04/2025 6:09 AM

ಬೆಂಗಳೂರು : ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಅಭಿವೃದ್ಧಿ ಯೋಜನೆಗಳಿಗೆ ಯಾವುದೇ ಸಮಸ್ಯೆ ಆಗಿಲ್ಲ. ಗ್ಯಾರಂಟಿಗಳ ಜೊತೆಗೆ ಅಭಿವೃದ್ಧಿ ಕಾರ್ಯಗಳೂ ಉತ್ತಮವಾಗಿ ನಡೆಯುತ್ತಿವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಇಂದು ನಡೆದ ರಾಜ್ಯ ಸರ್ಕಾರದ ಸಾಧನಾ ಸಮಾವೇಶದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯ ಅಭಿವೃದ್ಧಿ ಮತ್ತು ಪ್ರಗತಿಗೆ ನಮ್ಮ ಸರ್ಕಾರ ನಿರಂತರವಾಗಿ ಅನುದಾನಗಳನ್ನು ನೀಡಿ, ಕಾರ್ಯಕ್ರಮಗಳನ್ನು ರೂಪಿಸಿ ಜಾರಿ ಮಾಡುತ್ತಿದೆ. ಚುನಾವಣೆ ವೇಳೆ ನಾವು ಕೊಟ್ಟ ಭರವಸೆಗಳನ್ನೆಲ್ಲಾ ಈಡೇರಿಸುತ್ತಲೇ ಇದ್ದೇವೆ. ಅಧಿಕಾರಕ್ಕೆ ಬಂದ ಬಳಿಕ ಮೊದಲ ಕ್ಯಾಬಿನೆಟ್ ನಲ್ಲೇ ಗ್ಯಾರಂಟಿಗಳನ್ನು ಜಾರಿ ಮಾಡಿ ಇದಕ್ಕಾಗಿ 80 ಸಾವಿರ ಕೋಟಿ ರೂಪಾಯಿಗಳನ್ನು ವೆಚ್ಚ ಮಾಡಿದ್ದೇವೆ ಎಂದರು.

ಭಾರತವನ್ನು ಕೆಣಕಿದರೆ ಅದು ಪಾಕಿಸ್ತಾನವೇ ಆಗಲಿ, ಯಾವುದೇ ದೇಶವಾಗಲಿ ನಾವು ಸಹಿಸಲ್ಲ.‌ ಯಾವುದೇ ಹಂತದ ಯುದ್ಧಕ್ಕೆ ಭಾರತ ಸದಾ ಸಿದ್ಧ, ಸದಾ ಸನ್ನದ್ಧ ಆಗಿರುತ್ತದೆ. ಅನಿವಾರ್ಯತೆ ಆದಾಗ ಯುದ್ಧಕ್ಕೆ ಮುಂದಡಿ ಇಟ್ಟು ನಮ್ಮ ಸಾರ್ವಭೌಮತೆಯನ್ನು ಕಾಪಾಡಿಕೊಳ್ಳುವುದು ನಮಗೆ ಗೊತ್ತಿದೆ. ಇದನ್ನು ಭಾರತ ಪ್ರತೀ ಸಂದರ್ಭದಲ್ಲೂ ಸಾಬೀತು ಪಡಿಸಿದೆ. ಇತಿಹಾಸದುದ್ದಕ್ಕೂ ನಾವು ಈ ಎಚ್ಚರವನ್ನು ಮತ್ತು ಸಾರ್ವಭೌಮತೆಯನ್ನು ಕಾಪಾಡಿಕೊಂಡೇ ಬಂದಿದ್ದೇವೆ. ಮುಂದಕ್ಕೂ ಇದನ್ನು ಕಾಪಾಡಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ.

ಭಯೋತ್ಪಾದನೆಯನ್ನು ಬೇರು ಸಮೇತ ಕಿತ್ತು ಹಾಕುವುದು, ಪ್ರತಿಯೊಬ್ಬ ಭಾರತೀಯರಿಗೆ ಸೂಕ್ತ ರಕ್ಷಣೆ ಕೊಡುವುದು ನಮ್ಮ ಈ ಕ್ಷಣದ ಆದ್ಯತೆಯಾಗಿದೆ. ಇದರಲ್ಲಿ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ. ಭಾರತ ಬುದ್ಧ, ಬಸವಣ್ಣ, ಗಾಂಧಿ, ಅಂಬೇಡ್ಕರ್ ಅವರ ನಾಡು. ಇಲ್ಲಿ ಭಯೋತ್ಪಾದನೆಗೆ, ಅಶಾಂತಿಗೆ ಅವಕಾಶ ಇಲ್ಲ. ಅನಿವಾರ್ಯವಾದರೆ ಯುದ್ಧಕ್ಕೂ ಸಿದ್ಧ ಎನ್ನುವ ಮಾತನ್ನು ನಿನ್ನೆ ನಾನು ಹೇಳಿದ್ದೆ. ಆದರೆ ಭಯೋತ್ಪಾದಕರ ವಿರುದ್ಧ, ಪಾಕಿಸ್ತಾನದ ವಿರುದ್ಧ ಯುದ್ಧವೇ ಬೇಡ ಎಂದು ಹೇಳಿದ್ದೇನೆ ಎಂದು ಸುಳ್ಳು ಸುಳ್ಳೇ ಬಿಜೆಪಿ ಪ್ರಚಾರ ಮಾಡುತ್ತಿದೆ. ನನ್ನ ಮಾತನ್ನು ತಿರುಚಿ ಯುದ್ಧವೇ ಬೇಡ ಎಂದು ಹೇಳಿದ್ದೇನೆ ಎಂದು ನನ್ನದಲ್ಲದ ಅಭಿಪ್ರಾಯವನ್ನು ತೋರಿಸುತ್ತಿದ್ದಾರೆ. ಇದು ತಪ್ಪು, ಇದಕ್ಕೆ ನಾನು ಹೊಣೆಗಾರನಲ್ಲ ಎಂದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಸಾವಿರಾರು ಕೋಟಿ ವೆಚ್ಚದ ಕಾಮಗಾರಿಗಳಿಗೆ ಒಂದೇ ದಿನ ಚಾಲನೆ ನೀಡಿದ್ದೇವೆ. ಅಭಿವೃದ್ಧಿಗೆ ಹಣ ಇಲ್ಲ ಎನ್ನುವ ಬಿಜೆಪಿ ಪರಿವಾರದ ಸುಳ್ಳುಗಳಿಗೆ ಅಭಿವೃದ್ಧಿ ಮೂಲಕವೇ ಉತ್ತರ ನೀಡುತ್ತಿದ್ದೇವೆ.ಬಿಜೆಪಿ ಕನ್ನಡಕದ ಗಾಜುಗಳು ಅವರ ಅಧಿಕಾರಾವಧಿಯ ಕಲೆಗಳಿಂದ ಕೂಡಿದೆ. ಅದಕ್ಕೇ ಅವರು ನೋಡುವ ಕಡೆಯಲ್ಲೆಲ್ಲಾ ಕಲೆಗಳೇ ಕಾಣುತ್ತಿವೆ. ಬಿಜೆಪಿ ತನ್ನ ಕನ್ನಡಕ ಕ್ಲೀನ್ ಮಾಡಿಕೊಂಡರೆ ನಮ್ಮ ಸರ್ಕಾರದ ಅಭಿವೃದ್ಧಿ ಕಾಣುತ್ತದೆ ಎಂದು ಹೇಳಿದ್ದಾರೆ.

ಭಾರತವನ್ನು ಕೆಣಕಿದರೆ ಅದು ಪಾಕಿಸ್ತಾನವೇ ಆಗಲಿ, ಯಾವುದೇ ದೇಶವಾಗಲಿ ನಾವು ಸಹಿಸಲ್ಲ.‌ ಯಾವುದೇ ಹಂತದ ಯುದ್ಧಕ್ಕೆ ಭಾರತ ಸದಾ ಸಿದ್ಧ, ಸದಾ ಸನ್ನದ್ಧ ಆಗಿರುತ್ತದೆ. ಅನಿವಾರ್ಯತೆ ಆದಾಗ ಯುದ್ಧಕ್ಕೆ ಮುಂದಡಿ ಇಟ್ಟು ನಮ್ಮ ಸಾರ್ವಭೌಮತೆಯನ್ನು ಕಾಪಾಡಿಕೊಳ್ಳುವುದು ನಮಗೆ ಗೊತ್ತಿದೆ. ಇದನ್ನು ಭಾರತ ಪ್ರತೀ ಸಂದರ್ಭದಲ್ಲೂ ಸಾಬೀತು ಪಡಿಸಿದೆ.… pic.twitter.com/IGoqx1Zotv

— Siddaramaiah (@siddaramaiah) April 27, 2025

BIG NEWS: Rs 80000 crores have been put into the pockets of the people of the state through guarantee schemes: CM Siddaramaiah
Share. Facebook Twitter LinkedIn WhatsApp Email

Related Posts

ರಾಜ್ಯ ಸರ್ಕಾರ ತನ್ನ ಕೈಲಾದಷ್ಟು ಪ್ರಯತ್ನಿಸುತ್ತಿದೆ: ಎಲ್‌ಪಿಜಿ ಬಿಕ್ಕಟ್ಟು ಬಗ್ಗೆ ಮಧ್ಯಪ್ರವೇಶಿಸಕ್ಕೆ ಹೈಕೋರ್ಟ್ ನಕಾರ

23/03/2026 3:28 PM1 Min Read

ಯಾದಗಿರಿಯಲ್ಲಿ ಪತ್ನಿ ಜೊತೆಗಿನ ಅನೈತಿಕ ಸಂಭಂದ ಪ್ರಶ್ನಿಸಿದಕ್ಕೆ, ಪ್ರಿಯಕರನಿಂದಲೇ ಪತಿಯ ಹತ್ಯೆ!

23/03/2026 3:22 PM1 Min Read

BIG NEWS: ‘ಕೃಷಿ ಅಧಿಕಾರಿ’ಗಳ ನೇಮಕಾತಿ ಈಗ ಮತ್ತಷ್ಟು ಪಾರದರ್ಶಕ: ಎಓ, ಎಎಓ ಹುದ್ದೆಗಳ ಭರ್ತಿ ಹೊಣೆ ‘ಕೆಇಎ’ಗೆ ಹಸ್ತಾಂತರ

23/03/2026 3:15 PM1 Min Read
Recent News

ರಾಜ್ಯ ಸರ್ಕಾರ ತನ್ನ ಕೈಲಾದಷ್ಟು ಪ್ರಯತ್ನಿಸುತ್ತಿದೆ: ಎಲ್‌ಪಿಜಿ ಬಿಕ್ಕಟ್ಟು ಬಗ್ಗೆ ಮಧ್ಯಪ್ರವೇಶಿಸಕ್ಕೆ ಹೈಕೋರ್ಟ್ ನಕಾರ

23/03/2026 3:28 PM

ಯಾದಗಿರಿಯಲ್ಲಿ ಪತ್ನಿ ಜೊತೆಗಿನ ಅನೈತಿಕ ಸಂಭಂದ ಪ್ರಶ್ನಿಸಿದಕ್ಕೆ, ಪ್ರಿಯಕರನಿಂದಲೇ ಪತಿಯ ಹತ್ಯೆ!

23/03/2026 3:22 PM

ಯುದ್ಧಪೀಡಿತ ರಾಷ್ಟ್ರಗಳಲ್ಲಿರುವ ಪ್ರತಿ ಭಾರತೀಯನ ರಕ್ಷಣೆ ನಮ್ಮ ಹೊಣೆ: ಲೋಕಸಭೆಯಲ್ಲಿ ಪ್ರಧಾನಿ ಮೋದಿ ಭರವಸೆ

23/03/2026 3:21 PM

ಇಂಧನ ಬಿಕ್ಕಟ್ಟು ನಿವಾರಣೆಗೆ ಕೇಂದ್ರದ ಮಾಸ್ಟರ್ ಪ್ಲಾನ್: ಸಿಟಿ ಗ್ಯಾಸ್ ಯೋಜನೆಗಳಿಗೆ ವೇಗ, ವಾಣಿಜ್ಯ ಎಲ್‌ಪಿಜಿ ಕೋಟಾ ಹೆಚ್ಚಳ

23/03/2026 3:18 PM
State News
KARNATAKA

ರಾಜ್ಯ ಸರ್ಕಾರ ತನ್ನ ಕೈಲಾದಷ್ಟು ಪ್ರಯತ್ನಿಸುತ್ತಿದೆ: ಎಲ್‌ಪಿಜಿ ಬಿಕ್ಕಟ್ಟು ಬಗ್ಗೆ ಮಧ್ಯಪ್ರವೇಶಿಸಕ್ಕೆ ಹೈಕೋರ್ಟ್ ನಕಾರ

By kannadanewsnow0923/03/2026 3:28 PM KARNATAKA 1 Min Read

ಬೆಂಗಳೂರು: ರಾಜ್ಯದಲ್ಲಿ ಎದುರಾಗಿರುವ ಅಡುಗೆ ಅನಿಲ (LPG) ಸಿಲಿಂಡರ್‌ಗಳ ಪೂರೈಕೆ ಕೊರತೆಯ ಬಿಕ್ಕಟ್ಟಿನಲ್ಲಿ ಮಧ್ಯಪ್ರವೇಶಿಸಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ. ಈ…

ಯಾದಗಿರಿಯಲ್ಲಿ ಪತ್ನಿ ಜೊತೆಗಿನ ಅನೈತಿಕ ಸಂಭಂದ ಪ್ರಶ್ನಿಸಿದಕ್ಕೆ, ಪ್ರಿಯಕರನಿಂದಲೇ ಪತಿಯ ಹತ್ಯೆ!

23/03/2026 3:22 PM

BIG NEWS: ‘ಕೃಷಿ ಅಧಿಕಾರಿ’ಗಳ ನೇಮಕಾತಿ ಈಗ ಮತ್ತಷ್ಟು ಪಾರದರ್ಶಕ: ಎಓ, ಎಎಓ ಹುದ್ದೆಗಳ ಭರ್ತಿ ಹೊಣೆ ‘ಕೆಇಎ’ಗೆ ಹಸ್ತಾಂತರ

23/03/2026 3:15 PM

ಚಿತ್ರದುರ್ಗ ಜಿಲ್ಲೆಯಲ್ಲಿ ಯುಗಾದಿ ಪ್ರಯುಕ್ತ ಇಸ್ಪೀಟ್ ಅಡ್ಡೆಗಳ ಮೇಲೆ ಪೊಲೀಸರ ವಿಶೇಷ ದಾಳಿ; 1,189 ಮಂದಿ ವಶಕ್ಕೆ!

23/03/2026 3:09 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.