Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಹಾಸನದಲ್ಲಿ ಪ್ರೇಯಸಿ ಮೇಲೆ ಅತ್ಯಾಚಾರ ಎಸಗಿ ಕೊಲೆಗೈದ ಪ್ರಕರಣ : ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕೋರ್ಟ್ ತೀರ್ಪು

30/04/2026 4:13 PM

ಧರ್ಮಾಧಾರಿತ ಮೀಸಲಾತಿಗೆ ಸಂವಿಧಾನದಲ್ಲಿ ಅವಕಾಶವಿಲ್ಲ: ಹೈಕೋರ್ಟ್‌ಗೆ ಸರ್ಕಾರ ಸ್ಪಷ್ಟನೆ

30/04/2026 3:53 PM

BREAKING: ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆ ಕಟ್ಟಡ, ಕಾಂಪೌಂಡ್ ಪರಿಶೀಲಿಸಿ ವರದಿ ನೀಡಲು ಸಚಿವ ಶರಣಪ್ರಕಾಶ್ ಪಾಟೀಲ್ ಆದೇಶ

30/04/2026 3:50 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಪ್ರಯಾಣಿಕರಿಗೆ ಗುಡ್ ನ್ಯೂಸ್: ಬೇಸಿಗೆ ರಜೆ ಪ್ರಯುಕ್ತ ವಿಶೇಷ ರೈಲುಗಳ ಸಂಚಾರ
KARNATAKA

ಪ್ರಯಾಣಿಕರಿಗೆ ಗುಡ್ ನ್ಯೂಸ್: ಬೇಸಿಗೆ ರಜೆ ಪ್ರಯುಕ್ತ ವಿಶೇಷ ರೈಲುಗಳ ಸಂಚಾರ

By kannadanewsnow0928/04/2025 5:52 PM

ಬೆಂಗಳೂರು: ಬೇಸಿಗೆ ರಜೆಯ ಪ್ರಯಾಣಿಕರ ದಟ್ಟಣೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ನೈಋತ್ಯ ರೈಲ್ವೆಯು ಈ ಕೆಳಗಿನ ವಿಶೇಷ ಎಕ್ಸ್ ಪ್ರೆಸ್ ರೈಲುಗಳನ್ನು ಓಡಿಸಲು ನಿರ್ಧರಿಸಿದೆ. ಅದರಂತೆ, ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್-ಬೆಳಗಾವಿ ನಡುವೆ ಎರಡು ಟ್ರಿಪ್ಗಳು, ಯಶವಂತಪುರ-ವಿಜಯಪುರ ಮತ್ತು ಎಸ್ಎಂವಿಟಿ ಬೆಂಗಳೂರು-ಮಧುರೈ ನಡುವೆ ತಲಾ ಒಂದು ಟ್ರಿಪ್ ಸೇರಿವೆ. ಈ ವಿಶೇಷ ರೈಲುಗಳ ವಿವರ ಈ ಕೆಳಗಿನಂತಿದೆ:

1. ಎಸ್ಎಂವಿಟಿ ಬೆಂಗಳೂರು–ಬೆಳಗಾವಿ ನಡುವೆ ಎರಡು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ (06551/06552) ರೈಲು ಸಂಚಾರ:

ರೈಲು ಸಂಖ್ಯೆ 06551 ಎಸ್ಎಂವಿಟಿ ಬೆಂಗಳೂರು-ಬೆಳಗಾವಿ ವಿಶೇಷ ವಿಶೇಷ ಎಕ್ಸ್ ಪ್ರೆಸ್ ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ನಿಂದ ಏಪ್ರಿಲ್ 30 ಮತ್ತು ಮೇ 2, 2025 ರಂದು ಸಂಜೆ 7:00 ಗಂಟೆಗೆ ಹೊರಟು, ಮರುದಿನ ಬೆಳಿಗ್ಗೆ 07:30 ಗಂಟೆಗೆ ಬೆಳಗಾವಿಯನ್ನು ತಲುಪಲಿದೆ.

ಹಿಂತಿರುಗುವ ಮಾರ್ಗದಲ್ಲಿ, ರೈಲು ಸಂಖ್ಯೆ 06552 ಬೆಳಗಾವಿ– ಎಸ್ಎಂವಿಟಿ ಬೆಂಗಳೂರು ವಿಶೇಷ ಎಕ್ಸ್ ಪ್ರೆಸ್ ಬೆಳಗಾವಿಯಿಂದ ಮೇ 1 ಮತ್ತು 3, 2025 ರಂದು ಸಂಜೆ 05:30 ಗಂಟೆಗೆ ಹೊರಟು, ಮರುದಿನ ಬೆಳಗಿನ ಜಾವ 04:30 ಗಂಟೆಗೆ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರನ್ನು ತಲುಪಲಿದೆ.

ಈ ರೈಲುಗಳು ಎರಡೂ ಮಾರ್ಗಗಳಲ್ಲಿ ತುಮಕೂರು, ಅರಸಿಕೆರೆ, ಬೀರೂರು, ದಾವಣಗೆರೆ, ಹರಿಹರ, ಎಸ್ಎಂಎಂ. ಹಾವೇರಿ, ಎಸ್ಎಸ್ಎಸ್. ಹುಬ್ಬಳ್ಳಿ, ಧಾರವಾಡ, ಅಳ್ನಾವರ, ಲೋಂಡಾ ಮತ್ತು ಖಾನಾಪುರ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರಲಿವೆ.

ಈ ರೈಲಿನಲ್ಲಿ 1 ಎಸಿ-ಟು ಟೈರ್, 01 ಎಸಿ-ತ್ರಿ ಟೈರ್, 08 ಸ್ಲೀಪರ್ ಕ್ಲಾಸ್, 04 ಸಾಮಾನ್ಯ ದ್ವಿತೀಯ ದರ್ಜೆ ಮತ್ತು 02 ಎಸ್ಎಲ್ಆರ್/ಡಿ ಬೋಗಿಗಳು ಸೇರಿದಂತೆ ಒಟ್ಟು 16 ಬೋಗಿಗಳು ಇರಲಿವೆ.

2. ಯಶವಂತಪುರ–ವಿಜಯಪುರ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ (06561/06562) ರೈಲು ಸಂಚಾರ:

ರೈಲು ಸಂಖ್ಯೆ 06561 ಯಶವಂತಪುರ – ವಿಜಯಪುರ ವಿಶೇಷ ಎಕ್ಸ್ ಪ್ರೆಸ್ ಯಶವಂತಪುರದಿಂದ ಏಪ್ರಿಲ್ 30, 2025 ರಂದು ರಾತ್ರಿ 10:00 ಗಂಟೆಗೆ ಹೊರಟು, ಮರುದಿನ ಮಧ್ಯಾಹ್ನ 02:05 ಗಂಟೆಗೆ ವಿಜಯಪುರವನ್ನು ತಲುಪಲಿದೆ.

ಹಿಂತಿರುಗುವ ಮಾರ್ಗದಲ್ಲಿ, ರೈಲು ಸಂಖ್ಯೆ 06562 ವಿಜಯಪುರ–ಯಶವಂತಪುರ ವಿಶೇಷ ಎಕ್ಸ್ ಪ್ರೆಸ್ ವಿಜಯಪುರದಿಂದ ಮೇ 1, 2025 ರಂದು ಸಂಜೆ 7:00 ಗಂಟೆಗೆ ಹೊರಟು, ಮರುದಿನ ಬೆಳಿಗ್ಗೆ 11:15 ಗಂಟೆಗೆ ಯಶವಂತಪುರವನ್ನು ತಲುಪಲಿದೆ.

ಈ ರೈಲುಗಳು ಎರಡೂ ಮಾರ್ಗಗಳಲ್ಲಿ ತುಮಕೂರು, ಅರಸಿಕೆರೆ, ಬೀರೂರು, ಚಿಕ್ಕಜಾಜೂರು, ಚಿತ್ರದುರ್ಗ, ರಾಯದುರ್ಗ, ಬಳ್ಳಾರಿ ಕಂಟೋನ್ಮೆಂಟ್, ತೋರಣಗಲ್ಲು, ಹೊಸಪೇಟೆ, ಕೊಪ್ಪಳ, ಗದಗ, ಬದಾಮಿ, ಬಾಗಲಕೋಟೆ ಮತ್ತು ಆಲಮಟ್ಟಿ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರಲಿವೆ.

ಈ ರೈಲಿನಲ್ಲಿ 02 ಎಸಿ-ಟು ಟೈರ್, 06 ಎಸಿ-ತ್ರಿ ಟೈರ್, 07 ಸ್ಲೀಪರ್ ಕ್ಲಾಸ್, 04 ಸಾಮಾನ್ಯ ದ್ವಿತೀಯ ದರ್ಜೆ ಮತ್ತು 02 ಲಗೇಜ್/ಜನರೇಟರ್/ಬ್ರೇಕ್ ವ್ಯಾನ್ಗಳು ಸೇರಿದಂತೆ ಒಟ್ಟು 21 ಬೋಗಿಗಳು ಇರಲಿವೆ.

3. ಎಸ್ಎಂವಿಟಿ ಬೆಂಗಳೂರು–ಮಧುರೈ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ (06521/06522) ರೈಲು ಸಂಚಾರ:

ರೈಲು ಸಂಖ್ಯೆ 06521 ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು – ಮಧುರೈ ವಿಶೇಷ ಎಕ್ಸ್ ಪ್ರೆಸ್ ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ನಿಂದ ಏಪ್ರಿಲ್ 30, 2025 ರಂದು ಸಂಜೆ 07:00 ಗಂಟೆಗೆ ಹೊರಟು, ಮರುದಿನ ಬೆಳಿಗ್ಗೆ 06:15 ಗಂಟೆಗೆ ಮಧುರೈಯನ್ನು ತಲುಪಲಿದೆ.

ಹಿಂತಿರುಗುವ ಮಾರ್ಗದಲ್ಲಿ, ರೈಲು ಸಂಖ್ಯೆ 06522 ಮಧುರೈ – ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ವಿಶೇಷ ಎಕ್ಸ್ ಪ್ರೆಸ್ ಮಧುರೈಯಿಂದ ಮೇ 1, 2025 ರಂದು ಬೆಳಿಗ್ಗೆ 09:10 ಗಂಟೆಗೆ ಹೊರಟು, ಅದೇ ದಿನ ಸಂಜೆ 07:50 ಗಂಟೆಗೆ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರನ್ನು ತಲುಪಲಿದೆ.

ಈ ರೈಲುಗಳು ಎರಡೂ ಮಾರ್ಗಗಳಲ್ಲಿ ಕೃಷ್ಣರಾಜಪುರಂ, ಬಂಗಾರಪೇಟೆ, ಸೇಲಂ, ನಾಮಕ್ಕಲ್, ಕರೂರು, ದಿಂಡಿಗುಲ್ ಮತ್ತು ಕೊಡೈಕೆನಾಲ್ ರೋಡ್ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರಲಿವೆ.

ಈ ರೈಲಿನಲ್ಲಿ 2 ಎಸಿ-ಟು ಟೈರ್, 16 ಎಸಿ-ತ್ರಿ ಟೈರ್ ಮತ್ತು 2 ಲಗೇಜ್/ಜನರೇಟರ್/ಬ್ರೇಕ್ ವ್ಯಾನ್ಗಳು ಸೇರಿದಂತೆ ಒಟ್ಟು 20 ಬೋಗಿಗಳು ಇರಲಿವೆ.

ಈ ರೈಲುಗಳ ಪ್ರತಿ ನಿಲ್ದಾಣದ ಆಗಮನ ಮತ್ತು ನಿರ್ಗಮನದ ವೇಳಾಪಟ್ಟಿಯನ್ನು ತಿಳಿಯಲು ಭಾರತೀಯ ರೈಲ್ವೆಯ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಬಹುದು ಅಥವಾ ನಿಮ್ಮ ಹತ್ತಿರದ ರೈಲ್ವೆ ಬುಕಿಂಗ್ ಕೌಂಟರ್’ಗಳನ್ನು ಸಂಪರ್ಕಿಸಬಹುದು.

Share. Facebook Twitter LinkedIn WhatsApp Email

Related Posts

ಹಾಸನದಲ್ಲಿ ಪ್ರೇಯಸಿ ಮೇಲೆ ಅತ್ಯಾಚಾರ ಎಸಗಿ ಕೊಲೆಗೈದ ಪ್ರಕರಣ : ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕೋರ್ಟ್ ತೀರ್ಪು

30/04/2026 4:13 PM1 Min Read

BREAKING: ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆ ಕಟ್ಟಡ, ಕಾಂಪೌಂಡ್ ಪರಿಶೀಲಿಸಿ ವರದಿ ನೀಡಲು ಸಚಿವ ಶರಣಪ್ರಕಾಶ್ ಪಾಟೀಲ್ ಆದೇಶ

30/04/2026 3:50 PM1 Min Read

ಹೃದಯವಿದ್ರಾವಕ ಘಟನೆ : ಮದುವೆಗೆ 10 ದಿನ ಬಾಕಿ, ಪ್ರಿವೆಡ್ಡಿಂಗ್ ಶೂಟ್ ಗೆ ತೆರಳಿದ್ದಾಗ ಅಪಘಾತದಲ್ಲಿ ವರ ದುರ್ಮರಣ!

30/04/2026 3:49 PM1 Min Read
Recent News

ಹಾಸನದಲ್ಲಿ ಪ್ರೇಯಸಿ ಮೇಲೆ ಅತ್ಯಾಚಾರ ಎಸಗಿ ಕೊಲೆಗೈದ ಪ್ರಕರಣ : ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕೋರ್ಟ್ ತೀರ್ಪು

30/04/2026 4:13 PM

ಧರ್ಮಾಧಾರಿತ ಮೀಸಲಾತಿಗೆ ಸಂವಿಧಾನದಲ್ಲಿ ಅವಕಾಶವಿಲ್ಲ: ಹೈಕೋರ್ಟ್‌ಗೆ ಸರ್ಕಾರ ಸ್ಪಷ್ಟನೆ

30/04/2026 3:53 PM

BREAKING: ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆ ಕಟ್ಟಡ, ಕಾಂಪೌಂಡ್ ಪರಿಶೀಲಿಸಿ ವರದಿ ನೀಡಲು ಸಚಿವ ಶರಣಪ್ರಕಾಶ್ ಪಾಟೀಲ್ ಆದೇಶ

30/04/2026 3:50 PM

ಹೃದಯವಿದ್ರಾವಕ ಘಟನೆ : ಮದುವೆಗೆ 10 ದಿನ ಬಾಕಿ, ಪ್ರಿವೆಡ್ಡಿಂಗ್ ಶೂಟ್ ಗೆ ತೆರಳಿದ್ದಾಗ ಅಪಘಾತದಲ್ಲಿ ವರ ದುರ್ಮರಣ!

30/04/2026 3:49 PM
State News
KARNATAKA

ಹಾಸನದಲ್ಲಿ ಪ್ರೇಯಸಿ ಮೇಲೆ ಅತ್ಯಾಚಾರ ಎಸಗಿ ಕೊಲೆಗೈದ ಪ್ರಕರಣ : ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕೋರ್ಟ್ ತೀರ್ಪು

By kannadanewsnow0530/04/2026 4:13 PM KARNATAKA 1 Min Read

ಹಾಸನ : ಪ್ರೇಯಸಿ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದ ಅಪರಾಧಿಗೆ ಇದೀಗ ಜವಾವಧಿ ಶಿಕ್ಷೆ ವಿಧಿಸಿ ಹಾಸನದ 3ನೇ ಹೆಚ್ಚುವರಿ…

BREAKING: ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆ ಕಟ್ಟಡ, ಕಾಂಪೌಂಡ್ ಪರಿಶೀಲಿಸಿ ವರದಿ ನೀಡಲು ಸಚಿವ ಶರಣಪ್ರಕಾಶ್ ಪಾಟೀಲ್ ಆದೇಶ

30/04/2026 3:50 PM

ಹೃದಯವಿದ್ರಾವಕ ಘಟನೆ : ಮದುವೆಗೆ 10 ದಿನ ಬಾಕಿ, ಪ್ರಿವೆಡ್ಡಿಂಗ್ ಶೂಟ್ ಗೆ ತೆರಳಿದ್ದಾಗ ಅಪಘಾತದಲ್ಲಿ ವರ ದುರ್ಮರಣ!

30/04/2026 3:49 PM

ಕರ್ನಾಟಕ ಪತ್ರಕರ್ತೆಯರ ಸಂಘದ ಅಧ್ಯಕ್ಷೆಯಾಗಿ ಹಿರಿಯ ಪತ್ರಕರ್ತೆ ಡಾ.ಆರ್.ಪೂರ್ಣಿಮಾ ಅವಿರೋಧ ಆಯ್ಕೆ

30/04/2026 3:43 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.