ಬೆಂಗಳೂರು : ತಡರಾತ್ರಿ ಬೆಂಗಳೂರಿನ ಏರ್ಪೋರ್ಟ್ ಫ್ಲೈ ಓವರ್ ಮೇಲೆ ಸರಣಿ ಅಪಘಾತ ಸಂಭವಿಸಿದೆ. ರಾತ್ರಿ 12 ಗಂಟೆ ಸುಮಾರಿಗೆ 4 ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.
ಬೆಂಗಳೂರು ನಿಂದ ಏರ್ಪೋರ್ಟಿಗೆ ತೆರಳುವ ಮಾರ್ಗದಲ್ಲಿ ಈ ಒಂದು ಸರಣಿ ಅಪಘಾತ ಸಂಭವಿಸಿದೆ. ಅತಿ ವೇಗವಾಗಿ ಬರುತ್ತಿದ್ದ ವಾಹನಗಳ ನಡುವೆ ಡಿಕ್ಕಿಯಾಗಿ ಈ ಅಪರಾಧ ಸಂಭವಿಸಿದೆ.ಆದರೆ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಹೆಬ್ಬಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಅಪಘಾತದ ಕುರಿತು ಪ್ರಕರಣ ದಾಖಲಾಗಿದೆ.