ಬೆಂಗಳೂರು : ಇತ್ತೀಚಿಗೆ ರಾಜ್ಯದಲ್ಲಿ ಬಿಚ್ಚಿ ಬೀಳಿಸುವಂತಹ ಘಟನೆ ನಡೆದಿತ್ತು. ಹುಬ್ಬಳ್ಳಿಯಲ್ಲಿ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಬಳಿಕ ಹತ್ಯೆಗೈದು ಪೊಲೀಸ್ ಎನ್‌ಕೌಂಟರ್‌ಗೆ ಬಲಿಯಾಗಿರುವ ಬಿಹಾರ ಮೂಲದ ವಲಸೆ ಕಾರ್ಮಿಕ ರಿತೇಶ್ ಕುಮಾರ್‌ಮೃತದೇಹದ ಅಂತ್ಯ ಸಂಸ್ಕಾರ ಮಾಡಲು ಹೈಕೋರ್ಟ್ ಅನುಮತಿ ನೀಡಿದೆ.
ಹೌದು ರಿತೇಶ್ ಕುಮಾರ್ ಮೃತದೇಹ ಇಡೀ ಪ್ರಕರಣಕ್ಕೆ ಪ್ರಮುಖ ಸಾಕ್ಷಿಯಾಗಿದ್ದು, ಮೃತದೇಹ ದಹನ ಮಾಡದಂತೆ ಹಾಗೂ ಶವವನ್ನು ಸಂರಕ್ಷಿಸಿ ಇಡುವಂತೆ ನಿರ್ದೇಶನ ನೀಡಬೇಕು ಎಂದು ಕೋರಿ ಪಿಯುಸಿ ಎಲ್ ಸಂಘಟನೆ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಅವರ ನೇತೃತ್ವದ ವಿಭಾ ಗೀಯ ಪೀಠ ಈ ಆದೇಶ ಮಾಡಿತು.
ಪ್ರಕರಣವನ್ನು ಸ್ವತಂತ್ರ ತನಿಖಾ ಸಂಸ್ಥೆಗೆ ವಹಿಸಬೇಕು ಹಾಗೂ ಎನ್‌ಕೌಂಟರ್‌ಬಗ್ಗೆಯೂ ತನಿಖೆ ಆಗಬೇಕು ಎಂಬ ಅರ್ಜಿ ದಾರರ ಮನವಿ ಸೇರಿ ಇಡೀ ಪ್ರಕರಣದ ಬಗ್ಗೆ ಸಮಗ್ರ ಆದೇಶ ಹೊರಡಿಸಲಾ ಗುವುದು ಎಂದು ಹೇಳಿ ವಿಚಾರಣೆಯನ್ನು ಮೇ 2ಕ್ಕೆ ಮುಂದೂಡಿತು.
ಪ್ರಕರಣ ಹಿನ್ನೆಲೆ?
ಕಳೆದ ಏಪ್ರಿಲ್ 13 ರಂದು ಹುಬ್ಬಳ್ಳಿಯ ಅಶೋಕ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಿಹಾರ್ ಮೂಲದ ರಿತೇಶ್ ಕುಮಾರ ಎಂಬಾತ ಐದು ವರ್ಷದ ಬಾಲಕಿಗೆ ಚಾಕ್ಲೆಟ್ ಆಸೆ ತೋರಿಸಿದ್ದಾನೆ. ಬಳಿಕ ಬಾಲಕಿಯನ್ನು ಕಿಡ್ನಾಪ್ ಮಾಡಿದ್ದಾನೆ. ನಿರ್ಜನ ಪ್ರದೇಶಕ್ಕೆ ಕರೆದೋಯ್ದು ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ.
ನಂತರ ಆರೋಪಿ ರಾಜೇಶ್ ಕುಮಾರ್ ನನ್ನು ಬಂಧಿಸಲು ಹೇಳಿದಾಗ ಪೊಲೀಸರ ಮೇಲೆ ಹಲ್ಲಿಗೆ ಎತ್ತಿಸಿದ್ದಾರೆ ಈ ವೇಳೆ ಪೊಲೀಸರು ತಮ್ಮ ಆತ್ಮ ರಕ್ಷಣೆಗಾಗಿ ಆತನ ಮೇಲೆ ಫೈರಿಂಗ್ ನಡೆಸಿದ್ದಾರೆ ಈ ಒಂದು ಗುಂಡಿನ ದಾಳಿಯಲ್ಲಿ ರಿತೇಶ್ ಕುಮಾರ್ ಹತನಾಗಿದ್ದು, ಇದೀಗ ಆರೋಪಿ ಶವ ಅಂತ್ಯಸಂಸ್ಕಾರಕ್ಕೆ ಹೈಕೋರ್ಟ್ ಒಪ್ಪಿಗೆ ನೀಡಿದೆ.