ಮಂಡ್ಯ : ತನ್ನ ಇಬ್ಬರು ಮಕ್ಕಳೊಂದಿಗೆ ತಂದೆ ಒಬ್ಬರು ನಾಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಮೂವರು ಮಂಡ್ಯ ಜಿಲ್ಲೆಯ ವಿ ಸಿ ನಾಲೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ತಂದೆ ಕುಮಾರಸ್ವಾಮಿ (36) ಹಾಗು ಮಕ್ಕಳಾದ ಅದ್ವೈತ, ಅಕ್ಷರ ಮೃತರು ಎಂದು ತಿಳಿದುಬಂದಿದೆ.
ಮೃತರು ಮೈಸೂರು ಜಿಲ್ಲೆಯ ಕೆ.ಆರ್ ನಗರ ಮೂಲದವರು ಎಂದು ತಿಳಿದುಬಂದಿದೆ. ಏಪ್ರಿಲ್ 17 ರಂದು ಕೆ ಆರ್ ಎಸ್ ನಲ್ಲಿ ಇದ್ದೇನೆ ಎಂದು ಹೇಳಿ ಕುಮಾರಸ್ವಾಮಿ ತಮ್ಮ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದರು. ಇಂದು KRS ನಾರ್ತ್ ಬ್ಯಾಂಕ್ ಬಳಿಯ ವಿ.ಸಿ ನಾಲೆಯಲ್ಲಿ ಶವ ಪತ್ತೆಯಾಗಿದೆ. ಕಾರು ಸಮೇತ ನಾಲೆಗೆ ಬಿದ್ದು ಆತ್ಮಹತ್ಯೆಗೆ ಶರಣಾಗಿರುವ ಶಂಕೆ ಇದೀಗ ವ್ಯಕ್ತವಾಗುತ್ತಿದೆ. ಕೃಷ್ಣರಾಜಸಾಗರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.