ಬೆಂಗಳೂರು: ಸಿಎಂ ಸಿದ್ಧರಾಮಯ್ಯ ರಾಜಕೀಯಕ್ಕೆ 1978ರಲ್ಲಿ ತಾಲ್ಲೂಕು ಮಂಡಲ ಚುನಾವಣೆಯಲ್ಲಿ ಗೆಲುವು ಸಾಧಿಸುವ ಮೂಲಕ ಎಂಟ್ರಿ ಕೊಟ್ಟಿದ್ದರು. ಅಂದು ಅವರು ತಾಲ್ಲೂಕು ಮಂಡಲ ಚುನಾವಣೆಗೆ ಎಷ್ಟು ಖರ್ಚು ಮಾಡಿದ್ರು ಅಂತ ರಿವೀಲ್ ಮಾಡಿದ್ದಾರೆ. ಆ ಬಗ್ಗೆ ಮುಂದೆ ಓದಿ.
ಅವರು ಇಂದು ಕಂದಾಯ ಇಲಾಖೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ 1000 ಗ್ರಾಮ ಆಡಳಿತಾಧಿಕಾರಿಗಳಿಗೆ ನೇಮಕಾತಿ ಆದೇಶ ವಿತರಣೆ, ಅಭಿಶಿಕ್ಷಣ ತರಬೇತಿ ಮತ್ತು 4000 ಕ್ರೋಮ್ ಬುಕ್ ವಿತರಣೆ ಹಾಗೂ ಸಾಧನೆಯ ಹಾದಿಯಲ್ಲಿ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದರು.
ಹಿಂದೆ ಗ್ರಾಮಗಳಲ್ಲಿ ಜಮೀನಿನ ವಿವರಗಳನ್ನು ಶಾನುಭೋಗರು ಮಾಡುತ್ತಿದ್ದರು. ಶಾನುಭೋಗರು ಎಂದರೆ ರೈತರಿಗೆ ಗುರುಗಳಿದ್ದಂತೆ. ಶಾನುಭೋಗರು ಹೇಳಿದ್ದೇ ಅಂತಿಮ ಎಂಬಂತಿತ್ತು. ಕೆಲವರು ಉತ್ತಮ ಕೆಲಸ ಮಾಡುತ್ತಿದ್ದರೆ, ಕೆಲವರು ಕಿತಾಪತಿಯನ್ನೂ ಮಾಡುತ್ತಿದ್ದರು. ಶಾನುಭೋಗರು ದಾಖಲೆ ಬರೆಯುತ್ತಿದ್ದರು. ಅವರು ಏನು ಬರೆದಿದ್ದರು ಎಂದು ಯಾರಿಗೂ ಓದಿ ಹೇಳುತ್ತಿರಲಿಲ್ಲ. 1978 ರಲ್ಲಿ ತಾಲ್ಲೂಕು ಮಂಡಳಿ ಚುನಾವಣೆಗೆ ನಿಂತಾಗ, ಅವರ ತಂದೆ ನಿಲ್ಲಿಸಬೇಕೋ ಬೇಡವೋ ಎಂದು ಶಾನುಭೋಗರನ್ನು ಕೇಳಿ ನಿಲ್ಲಬಾರದು ಎಂದು ತಮ್ಮ ತಂದೆ ಹಠ ಮಾಡಿದ್ದನ್ನು, ನಂತರ ಗೆದ್ದದ್ದನ್ನು ಸಿಎಂ ಸ್ಮರಿಸಿದರು. ಚುನಾವಣೆಗೆ ಆಗ 3500 ಮಾತ್ರ ವೆಚ್ಚವಾಗಿತ್ತು ಎಂದು ತಿಳಿಸಿದ ಮುಖ್ಯಮಂತ್ರಿಗಳ ಶಾನುಭೋಗರ ಎಷ್ಟು ಪ್ರಭಾವ ಬೀರುತ್ತಿದ್ದರು ಎಂದು ವಿವರಿಸಿದರು.
ಗ್ರಾಮ ಆಡಳಿತಾಧಿಕಾರಿಗಳನ್ನು 1 ರೂ ಲಂಚ ಪಡೆಯದೇ ನೇಮಕ: ಮುಖ್ಯಮಂತ್ರಿ ಸಿದ್ದರಾಮಯ್ಯ