ಬೆಂಗಳೂರು : ಮಂಗಳೂರಿನಲ್ಲಿ ಹಜ್ ಭವನ ನಿರ್ಮಾಣಕ್ಕೆ ಮೇ 16 ರಂದು ಶಂಕುಸ್ಥಾಪನೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ವಸತಿ ಸಚಿವರಾದ ಜಮೀರ್ ಅಹ್ಮದ್ ಖಾನ್ ಅವರು ಕಲಬುರಗಿಯಲ್ಲಿ ಹಜ್ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಲಿದ್ದಾರೆ. ಬೆಂಗಳೂರಿನಲ್ಲಿ ಹಜ್ ಭವನಕ್ಕೆ ಬರುವ ಪ್ರವಾಸಿಗರಿಗೆ ಉಳಿದುಕೊಳ್ಳಲು ವ್ಯವಸ್ಥೆ ಕಲ್ಪಿಸಲು ಈ ಬಾರಿ 10 ಕೋಟಿ ರೂ. ಅನುದಾನ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.