ಜಮ್ಮು-ಕಾಶ್ಮೀರ: ಪಹಲ್ಗಾಮ್ ನಲ್ಲಿ ಏಪ್ರಿಲ್.22ರಂದು ಭಯೋತ್ಪಾದಕರು ನಡೆಸಿದ್ದಂತ ಗುಂಡಿನ ದಾಳಿಯಲ್ಲಿ 26 ಪ್ರವಾಸಿಗರು ಸಾವನ್ನಪ್ಪಿದ್ದರು. ಈ ಘಟನೆಯ ನಂತ್ರ ಮೂವರು ಶಂಕಿತ ಭಯೋತ್ಪಾದಕರ ರೇಖಾ ಚಿತ್ರವನ್ನು ಬಿಡುಗಡೆ ಮಾಡಿತ್ತು. ಆ ರೇಖಾಚಿತ್ರದೊಂದಿಗೆ ಮುಖಚಹರೆ ಹೋಲಿಕೆಯಾದ ಹಿನ್ನಲೆಯಲ್ಲಿ ಶ್ರೀನಗರ ವಿಮಾನ ನಿಲ್ದಾಣದಲ್ಲಿ ಶಂಕಿತ ವ್ಯಕ್ತಿಯನ್ನು ಬಂಧಿಸಲಾಗಿದೆ.
ಏಪ್ರಿಲ್ 22 ರಂದು ನಡೆದ ಪಹಲ್ಗಾಮ್ ದಾಳಿಯ ನಂತರ ನವದೆಹಲಿಯಲ್ಲಿ ಉನ್ನತ ಮಟ್ಟದ ಭದ್ರತಾ ಸಭೆಗಳನ್ನು ನಡೆಸಲಾಗುತ್ತಿತ್ತು. ಪ್ರಧಾನಿ ನರೇಂದ್ರ ಮೋದಿ ಅವರು ತ್ರಿ-ಸೇನಾಪಡೆಗಳ ಮುಖ್ಯಸ್ಥರು, ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಅನಿಲ್ ಚೌಹಾಣ್, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರೊಂದಿಗೆ ಸಭೆ ನಡೆಸಿದರು.
ಕೇಂದ್ರ ಗೃಹ ಕಾರ್ಯದರ್ಶಿ ಗೋವಿಂದ್ ಮೋಹನ್ ಮಂಗಳವಾರ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಮೂರು ಅರೆಸೈನಿಕ ಪಡೆಗಳ ಮುಖ್ಯಸ್ಥರು ಮತ್ತು ಇತರ ಎರಡು ಭದ್ರತಾ ಸಂಸ್ಥೆಗಳ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು. ಗಡಿ ಭದ್ರತಾ ಪಡೆಯ ಮಹಾನಿರ್ದೇಶಕ (ಡಿಜಿ) ದಲ್ಜಿತ್ ಸಿಂಗ್ ಚೌಧರಿ, ರಾಷ್ಟ್ರೀಯ ಭದ್ರತಾ ಗಾರ್ಡ್‌ನ ಮಹಾನಿರ್ದೇಶಕ ಬೃಘು ಶ್ರೀನಿವಾಸನ್ ಮತ್ತು ಅಸ್ಸಾಂ ರೈಫಲ್ಸ್‌ನ ಮಹಾನಿರ್ದೇಶಕ ಲೆಫ್ಟಿನೆಂಟ್ ಜನರಲ್ ವಿಕಾಸ್ ಲಖೇರಾ ಸಭೆಯಲ್ಲಿ ಭಾಗವಹಿಸಿದ್ದರು.
ಪಾಕಿಸ್ತಾನದಿಂದ ಬಂದ ಮತ್ತು ತರಬೇತಿ ಪಡೆದ ಭಯೋತ್ಪಾದಕರು ಕಾಶ್ಮೀರದ ಪಹಲ್ಗಾಮ್‌ನಲ್ಲಿ 26 ಪ್ರವಾಸಿಗರ ಮೇಲೆ ದಾಳಿ ಮಾಡಿ ಕೊಂದಿದ್ದರು. ಈ ಘಟನೆ ನಂತ್ರ ಮೂವರು ಶಂಕಿತರ ರೇಖಾಚಿತ್ರವನ್ನು ಪೊಲೀಸರು ಬಿಡುಗಡೆ ಮಾಡಿದ್ದರು. ಆ ರೇಖಾಚಿತ್ರವನ್ನು ಹೋಲಿಕೆಯಾದಂತ ಶಂಕಿತ ವ್ಯಕ್ತಿಯೊಬ್ಬನನ್ನು ಶ್ರೀನಗರ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ.
BREAKING: ಮಾಜಿ MLC ಡಿಎಸ್ ವೀರಯ್ಯಗೆ ಹೈಕೋರ್ಟ್ ಬಿಗ್ ರಿಲೀಫ್: ದೇವರಾಜ್ ಅರಸು ಟ್ರಕ್ ಟರ್ಮಿನಲ್ ಕೇಸ್ ರದ್ದು