ದಾವಣಗೆರೆ : ಮೊಬೈಲ್ ನಲ್ಲಿ ಮಾತನಾಡುತ್ತ ಹಳಿ ದಾಟುತ್ತಿದ್ದ ವೇಳೆ ರೈಲು ಡಿಕ್ಕಿಯಾಗಿ ಯುವತಿ ಸಾವನ್ನಪ್ಪಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.
ದಾವಣಗೆರೆ ಜಿಲ್ಲೆಯ ಹರಿಹರ ರೈಲು ನಿಲ್ದಾಣದಲ್ಲಿ ಶ್ರಾವಣಿ (23) ಮೃತಪಟ್ಟ ಯುವತಿ ಎಂದು ಗುರುತಿಸಲಾಗಿದೆ.
ಎಂಬಿಎ ಓದುತ್ತಿದ್ದ ಬಳ್ಳಾರಿಯ ಶ್ರಾವಣಿ, ಹರಿಹರಕ್ಕೆ ಸಂಬಂಧಿಕರ ಮನೆಗೆ ಬಂದಿದ್ದರು. ಮೊಬೈಲ್ ನಲ್ಇ ಮಾತನಾಡುತ್ತ ಹಳಿ ದಾಟುತ್ತಿದ್ದ ವೇಳೆ ರೈಲು ಡಿಕ್ಕಿಯಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.