ಠಾಣೆ : ಇತ್ತೀಚಿನ ದಿನಗಳಲ್ಲಿ ಯುವ ಜನತೆ ಮೊಬೈಲ್ ಎಂಬ ಗೀಳಿಗೆ ಅಂಟಿಕೊಂಡಿದ್ದು, ಇದೀಗ ಅತಿಯಾದ ಮೊಬೈಲ್ ಬಳಕೆ ಮಾಡದಂತೆ ಮನೆಯವರು ಆಕ್ಷೇಪ ವ್ಯಕ್ತಪಡಿಸಿದ್ದಕ್ಕೆ ನೊಂದ 20 ವರ್ಷದ ಯುವತಿ, 11ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ ಘಟನೆ ಠಾಣೆಯಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ಸಮೀಕ್ಷಾ ನಾರಾಯಣ ವಡ್ಡಿ ಎಂದು ಗುರುತಿಸಲಾಗಿದೆ.ಯುವತಿ ರಾತ್ರಿ ವೇಳೆಯಲ್ಲಿ ಮೊಬೈಲ್‌ನಲ್ಲಿ ಅತಿಯಾಗಿ ಮಾತನಾಡುತ್ತಿದ್ದರು. ಇದಕ್ಕೆ ಅವರ ಮನೆಯವರು ಆಕ್ಷೇಪ ವ್ಯಕ್ತಪಡಿಸಿ, ಮೊಬೈಲ್ ಬಳಕೆಯನ್ನು ತಗ್ಗಿಸುವಂತೆ ಸಲಹೆ ನೀಡಿದ್ದರು. ಇದಕ್ಕೆ ನಿರಾಕರಿಸಿದ ಯುವತಿಯಿಂದ ಮೊಬೈಲ್ ಕಸಿದುಕೊಳ್ಳಲಾಗಿತ್ತು.
ಇದರಿಂದ ಯುವತಿ ಮನನೊಂದಿದ್ದಳು.ಈ ವೇಳೆ ತಾನು ವಾಸವಿದ್ದ ಅಪಾರ್ಟ್ಮೆಂಟ್ 12ನೇ ಮಹಡಿಯಿಂದ ಜಿಗಿದು ಜಿಗಿದಿದ್ದಾಳೆ. ಈ ವೇಳೆ ತಕ್ಷಣ ಇವರನ್ನು ಆಸ್ಪತ್ರೆಗೆ ಕರೆತರಲಾಯಿತಾದರೂ, ಆ ಹೊತ್ತಿಗಾಗಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದರು.