ಬೆಂಗಳೂರು : ರಾಜ್ಯದ ವಾಹನ ಮಾಲೀಕರಿಗೆ ರಾಜ್ಯ ಸರ್ಕಾರ ಇದೀಗ ಮತ್ತೊಂದು ಬಿಗ್ ಶಾಕ್ ನೀಡಿದೆ. ಟ್ಯಾಕ್ಸಿ ಲಘು ವಾಹನಗಳು ದುಬಾರಿ ಆಗಲಿವೆ 10 ಲಕ್ಷದೊಳಗಿನ ವಾಣಿಜ್ಯ ವಾಹನಗಳ ತೆರಿಗೆ ಹೆಚ್ಚಾಗಲಿದೆ. ಕರ್ನಾಟಕ ಮೋಟಾರ್ ವಾಹನಗಳ ವಿಧೇಯಕಕ್ಕೆ ರಾಜಪಾಲರು ಅಂಕಿತ ಹಾಕಿದ ಹಿನ್ನೆಲೆಯಲ್ಲಿ ಇದೀಗ ವಾಹನ ಮಾಲೀಕರಿಗೆ ತೆರಿಗೆ ಶಾಕ್ ನೀಡಲಾಗಿದೆ.
ಹೌದು ನಾಳೆಯಿಂದ ವಾಹನಗಳ ಜೀವಿತಾವಧಿ ತೆರಿಗೆ ಏರಿಕೆ ಆಗಲಿದೆ. 10 ಲಕ್ಷದೊಳಗಿನ ಟ್ಯಾಕ್ಸಿ, ಲಘು ವಾಹನಗಳ ತೆರಿಗೆ ಏರಿಕೆಯಾಗಲಿದೆ. ವಾಹನಗಳ ಜೀವಿತಾವಧಿ ತೆರಿಗೆ ಶೇಕಡ 5ರಷ್ಟು ಏರಿಕೆಯಾಗಲಿದೆ. ವಾಣಿಜ್ಯ ಉದ್ದೇಶ ಬಳಕೆಯ ಎಲೆಕ್ಟ್ರಿಕ್ ವಾಹನಗಳ ತೆರಿಗೆಯು ಏರಿಕೆಯಾಗಲಿದೆ. 25 ಲಕ್ಷಕ್ಕೂ ಹೆಚ್ಚಿನ ವಾಣಿಜ್ಯ ಬಳಕೆ ಇವಿಗೆ ಶೇಕಡ 10 ರಷ್ಟು ತೆರಿಗೆ ಏರಿಕೆಯಾಗಿದೆ. ಇದುವರೆಗೂ 10 ಲಕ್ಷಕ್ಕಿಂತ ಕಡಿಮೆ ಮುಳ್ಳಿದ ವಾಹನಗಳಿಗೆ ತೆರಿಗೆ ಇರಲಿಲ್ಲ. ನಾಳೆಯಿಂದ ಈ ಎಲ್ಲ ವಾಹನಗಳ ಜೀವಿತಾವಧಿ ತೆರಿಗೆ ಏರಿಕೆ ಆಗಲಿದೆ.