ಮೈಸೂರು : ಜಮೀನು ಸರ್ವೆ ಮಾಡಲು ಎಂದು ತೆರಳಿದ ಇಲಾಖೆಯ ಇಬ್ಬರು ಸಿಬ್ಬಂದಿಗಳ ಮೇಲೆ ಹಲ್ಲೆ ನಡೆದಿರುವ ಘಟನೆ ವರದಿಯಾಗಿದೆ. ಬೆಟ್ಟದಬೀಡು ಗ್ರಾಮದಲ್ಲಿ ಇಲಾಖೆಯ ಇಬ್ಬರು ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಲಾಗಿದೆ. ಮೈಸೂರು ಜಿಲ್ಲೆಯ ಎಚ್ ಡಿ ಕೋಟೆ ತಾಲೂಕಿನ ಬೆಟ್ಟದ ಬಿಡು ಗ್ರಾಮದಲ್ಲಿ ಈ ಘಟನೆ ನಡೆದಿ.
ಜಮೀನು ಸರ್ವೆಗೆ ಎಂದು ಸಿಬ್ಬಂದಿಗಳು ತೆರಳಿದ್ದರು. ಇಲಾಖೆ ಸಿಬ್ಬಂದಿಗಳಾದ ಮಂಜುನಾಥ ಹಾಗೂ ಇನ್ನೊರ್ವ ಸಿಬ್ಬಂದಿಯ ಮೇಲೆ ಗ್ರಾಮದ ಶಿವಣ್ಣೇಗೌಡ ಸ್ವಾಮಿಗೌಡ ಸಹೋದರ ವಿರುದ್ಧ ಇದೀಗ ಹಲ್ಲೆಯ ಆರೋಪ ಕೇಳಿ ಬಂದಿದೆ. ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ ಮೊಬೈಲ್ ಕಸಿದುಕೊಂಡು ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.
ಸರ್ವೇ ನಂಬರ್ 32ರ ಜಮೀನು ಸರ್ವೆ ನಡೆಸಿ ಜಾಗ ಗುರುತಿಸಲು ತೆರಳಿದ್ದಾಗ ಇಬ್ಬರು ಸಹೋದರರು ಹಲ್ಲೆ ಮಾಡಿದ್ದಾರೆ. ಇಬ್ಬರು ಸಿಬ್ಬಂದಿಗಳ ಮುಖ ಮತ್ತು ಎದೆಯ ಭಾಗಕ್ಕೆ ಗುದ್ದಿ ಹಲ್ಲೆ ನಡೆಸಿದ್ದಾರೆ. ಇಬ್ಬರಿಗೂ ಎಚ್ ಡಿ ಕೋಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಕುರಿತಂತೆ ಎಚ್ ಡಿ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.