ಕೊಲ್ಕತ್ತಾ : ಕೋಲ್ಕತ್ತಾದ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಫಾಲ್ಪಟ್ಟಿ ಮಚುವಾ ಬಳಿ ಇರುವ 6 ಅಂತಸ್ತಿನ ರಿತುರಾಜ್ ಹೋಟೆಲ್‌ನಲ್ಲಿ ನಿನ್ನೆ ರಾತ್ರಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಕನಿಷ್ಠ 14 ಜನರು ಸಜೀವ ದಹನ ಹೊಂದಿದ್ದಾರೆ. ಈಗಾಗಲೇ ಅಗ್ನಿ ಶಾಮಕ ಸಿಬ್ಬಂದಿಗಳು ಆಗಮಿಸಿ 14 ಮೃತ ದೇಹಗಳನ್ನು ಹೊರಗರೇ ತೆಗೆದಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.
ಹೋಟೆಲ್ ನಲ್ಲಿ ಹಲವರು ಉಸಿರುಗಟ್ಟುವಿಕೆಯಿಂದ ಸಾವನ್ನಪ್ಪಿದರೆ, ಬೆಂಕಿಯಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸುವಾಗ ಕಟ್ಟಡದಿಂದ ಬಿದ್ದು ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ನಗರದ ಬುರ್ರಬಜಾರ್ ಪ್ರದೇಶದ ಮದನ್ಮೋಹನ್ ಬೀದಿಯಲ್ಲಿರುವ ಋತುರಾಜ್ ಹೋಟೆಲ್‌ನಲ್ಲಿ ಸಂಜೆ 7:30 ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿತು. ಹತ್ತು ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ರವಾನಿಸಲಾಗಿದ್ದು, ಬುಧವಾರ ಬೆಳಗಿನ ಜಾವ 1 ಗಂಟೆ ಸುಮಾರಿಗೆ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಯಿತು.