Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ಭಾರತದ ಸುಧಾರಣೆಯ ವೇಗ ಎಂದಿಗೂ ನಿಲ್ಲದು, ಸ್ಟಾರ್ಟ್‌ಅಪ್ ವ್ಯವಸ್ಥೆ ಮತ್ತಷ್ಟು ವಿಸ್ತರಣೆಯಾಗಲಿದೆ: ಫ್ರಾನ್ಸ್‌ನಲ್ಲಿ ಪ್ರಧಾನಿ ಮೋದಿ ಭರವಸೆ

BIG NEWS: ರಾಜ್ಯದ ಆರೋಗ್ಯ ಇಲಾಖೆಯ ‘NHM ಗುತ್ತಿಗೆ ನೌಕರ’ರನ್ನು ‘ಖಾಯಂ’ ಅಸಾಧ್ಯ: ಸಚಿವ ಯು.ಟಿ ಖಾದರ್

​ಬಾರ್ಸಿಲೋನಾ ಗ್ರಾಂಡ್ ಪ್ರಿಕ್ಸ್‌ನಲ್ಲಿ ಲೂಯಿಸ್ ಹ್ಯಾಮಿಲ್ಟನ್‌ಗೆ ಐತಿಹಾಸಿಕ ಜಯ; ಫೆರಾರಿ ಪರ ಮೊದಲ ಪ್ರಶಸ್ತಿ ಮುಡಿಗೇರಿಸಿಕೊಂಡ ದಿಗ್ಗಜ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಜನಗಣತಿ ಜೊತೆ ಜಾತಿ ಗಣತಿ ನಡೆಸುವ ಕೇಂದ್ರ ಸರ್ಕಾರದ ತೀರ್ಮಾನ ಸ್ವಾಗತಿಸಿದ ‘CM’ ಸಿದ್ದರಾಮಯ್ಯ
KARNATAKA

BIG NEWS : ಜನಗಣತಿ ಜೊತೆ ಜಾತಿ ಗಣತಿ ನಡೆಸುವ ಕೇಂದ್ರ ಸರ್ಕಾರದ ತೀರ್ಮಾನ ಸ್ವಾಗತಿಸಿದ ‘CM’ ಸಿದ್ದರಾಮಯ್ಯ

By ಸುರೇಶ್‌

ಬೆಂಗಳೂರು : ಜನಗಣತಿ ಜೊತೆಯಲ್ಲಿ ಜಾತಿ ಗಣತಿಯನ್ನೂ ನಡೆಸುವ ಕೇಂದ್ರ ಸರ್ಕಾರದ ತೀರ್ಮಾನವನ್ನು ನಮ್ಮ ಸರ್ಕಾರ ಹೃತ್ಪೂರ್ವಕವಾಗಿ ಸ್ವಾಗತಿಸುತ್ತದೆ. ಇದೇ ಸಂದರ್ಭದಲ್ಲಿ ಜಾತಿ ಗಣತಿ ಜೊತೆ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನೂ ನಡೆಸಬೇಕೆಂದು ಕೇಂದ್ರ ಸರ್ಕಾರವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಆಗ್ರಹಪಡಿಸಿದ್ದಾರೆ.

ಈ ಕುರಿತಂತೆ ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಸಿಎಂ ಸಿದ್ದರಾಮಯ್ಯ, ಜನಗಣತಿ ಜೊತೆಯಲ್ಲಿ ಜಾತಿ ಗಣತಿಯನ್ನೂ ನಡೆಸುವ ಕೇಂದ್ರ ಬಿಜೆಪಿ ಸರ್ಕಾರದ ತೀರ್ಮಾನವನ್ನು ನಮ್ಮ ಸರ್ಕಾರ ಹೃತ್ಪೂರ್ವಕವಾಗಿ ಸ್ವಾಗತಿಸುತ್ತದೆ. ಇದೇ ಸಂದರ್ಭದಲ್ಲಿ ಜಾತಿ ಗಣತಿ ಜೊತೆ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನೂ ನಡೆಸಬೇಕೆಂದು ನರೇಂದ್ರಮೋದಿ ಅವರ ಸರ್ಕಾರವನ್ನು ಆಗ್ರಹಪಡಿಸುತ್ತಿದ್ದೇನೆ.

ಕರ್ನಾಟಕದಲ್ಲಿ ನಾವು ಕೇವಲ ಜಾತಿ ಗಣತಿ ನಡೆಸದೆ ಅದರ ಜೊತೆ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಸಮೀಕ್ಷೆಯನ್ನು ನಡೆಸಿದ್ದೇವೆ. ಈ ದತ್ತಾಂಶಗಳ ಆಧಾರದಲ್ಲಿ ಈಗಿನ ಮೀಸಲಾತಿ ನೀತಿಯನ್ನು ಪರಿಷ್ಕರಿಸಿ ಅದರ ಮಿತಿಯನ್ನು ಹೆಚ್ಚಿಸುವ ಪ್ರಯತ್ನ ಕೂಡಾ ನಡೆದಿದೆ. ಜಾತಿ ಗಣತಿಯ ಜೊತೆಯಲ್ಲಿ ಈ ಪ್ರಕ್ರಿಯೆಯನ್ನು ಕೂಡಾ ಕೇಂದ್ರ ಸರ್ಕಾರ ಪೂರ್ಣಗೊಳಿಸಲಿದೆ ಎಂದು ನಂಬಿದ್ದೇ.

ವೈಜ್ಞಾನಿಕವಾದ ಮೀಸಲಾತಿ ನೀತಿಯನ್ನು ರೂಪಿಸುವುದೇ ಜಾತಿ ಆಧಾರಿತ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಮೂಲ ಉದ್ದೇಶವಾಗಿದೆ. ಪ್ರತಿ ಬಾರಿ ಮೀಸಲಾತಿಗೆ ಸಂಬಂಧಿಸಿದ ಪ್ರಕರಣಗಳು ವಿಚಾರಣೆಗೆ ಬಂದಾಗೆಲ್ಲ ಸುಪ್ರೀಂಕೋರ್ಟ್ ಇಂತಹದ್ದೊಂದು ಸಮೀಕ್ಷೆ ನಡೆಸುವ ಅಗತ್ಯವನ್ನು ಒತ್ತಿ ಒತ್ತಿ ಹೇಳುತ್ತಾ ಬಂದಿದೆ ಎನ್ನುವುದನ್ನು ಕೇಂದ್ರ ಬಿಜೆಪಿ ಸರ್ಕಾರ ಗಮನಿಸಬೇಕಾಗುತ್ತದೆ.

ನಾನು ಧರ್ಮಸಿಂಗ್ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿಯೇ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ರಚಿಸಿ ಜಾತಿಯ ಜೊತೆಯಲ್ಲಿ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸುವ ತೀರ್ಮಾನ ಕೈಗೊಂಡಿದ್ದೆ. ಕಾರಣಾಂತರಗಳಿಂದ ಅನುಷ್ಠಾನಗೊಳ್ಳದೆ ನೆನೆಗುದಿಗೆ ಬಿದ್ದ ಆ ನಿರ್ಧಾರವನ್ನು ಕಾರ್ಯರೂಪಕ್ಕೆ ತರಲು ಮತ್ತೆ ನಾನು ರಾಜ್ಯದ ಮುಖ್ಯಮಂತ್ರಿ ಆಗಬೇಕಾಯಿತು.

ಜಾತಿ ಗಣತಿ ಜೊತೆಯಲ್ಲಿ ಮೀಸಲಾತಿ ಮಿತಿ ಏರಿಕೆಯ ನಿರ್ಧಾರವನ್ನು ಸಂಪೂರ್ಣ ಬೆಂಬಲಿಸಿ ಅದನ್ನು ನಮ್ಮ ಪಕ್ಷದ ರಾಷ್ಟ್ರೀಯ ಕಾರ್ಯಕ್ರಮವನ್ನಾಗಿ ರೂಪಿಸಿ ದೇಶಾದ್ಯಂತ ಪ್ರಚಾರ ಮಾಡುತ್ತಾ ಬಂದ ಕಾಂಗ್ರೆಸ್ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಅವರನ್ನು ಈ ಸಂದರ್ಭದಲ್ಲಿ ಅಭಿನಂದಿಸುತ್ತೇನೆ. ಅವರ ಅವಿರತ ಪ್ರಯತ್ನದ ಒತ್ತಡದಿಂದಾಗಿಯೇ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಜಾತಿ ಗಣತಿ ನಡೆಸುವ ನಿರ್ಧಾರವನ್ನು ಕೈಗೊಂಡಿದ್ದಾರೆ ಎನ್ನುವುದನ್ನು ಅವರು ಒಪ್ಪಿಕೊಳದೆ ಇರಬಹುದು, ಆದರೆ ದೇಶ ಖಂಡಿತಾ ಒಪ್ಪುತ್ತದೆ.

ಜಾತಿ ಗಣತಿ ನಡೆಸುವುದರಿಂದ ಜಾತಿ ಸಂಘರ್ಷಗಳು ಹೆಚ್ಚಾಗಿ ಸಮಾಜ ಒಡೆದುಹೋಗುತ್ತದೆ, ಜಾತಿ ಗಣತಿ ಎನ್ನುವುದು ಹಿಂದೂ ಸಮಾಜವನ್ನು ಒಡೆಯುವ ಹುನ್ನಾರ ಎಂದೆಲ್ಲ ವರ್ಷಗಳ ಕಾಲ ಟೀಕಾಪ್ರಹಾರ ಮಾಡುತ್ತಾ ಬಂದ ಬಿಜೆಪಿ ಪಕ್ಷ ಮತ್ತು ಅದರ ನೇತೃತ್ವದ ಸರ್ಕಾರಗಳು ಕೊನೆಗೂ ಜಾತಿ ಗಣತಿಯ ಸಾಮಾಜಿಕ ಮಹತ್ವವನ್ನು ಅರ್ಥಮಾಡಿಕೊಂಡಿರುವುದು ಸ್ವಾಗತಾರ್ಹ ಬೆಳವಣಿಗೆ.

ಭಾರತದ ಸಾಮಾಜಿಕ ವ್ಯವಸ್ಥೆಯಲ್ಲಿ ಜಾತಿ ಎನ್ನುವುದು ವಾಸ್ತವ. ಜಾತಿ ಇಲ್ಲ ಎನ್ನುವುದು ಆತ್ಮವಂಚನೆ. ಜಾತಿ ಎನ್ನುವ ವಾಸ್ತವವನ್ನು ಒಪ್ಪಿಕೊಳ್ಳುವ ಮೂಲಕವೇ ಅದರ ನಾಶಕ್ಕೆ ಪ್ರಯತ್ನಿಸಬೇಕಾಗಿದೆ. ಆರ್ಥಿಕ ಮತ್ತು ಸಾಮಾಜಿಕ ಅಸಮಾನತೆಯನ್ನು ಹೋಗಲಾಡಿಸುವ ಮೂಲಕವೇ ಜಾತಿನಾಶ ಸಾಧ್ಯ ಎಂದು ನಾನುಬಲವಾಗಿ ನಂಬಿದವನು.

ಕರ್ನಾಟಕದಲ್ಲಿ ನಾವು ನಡೆಸಿದ್ದ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿ ಸಿದ್ಧ ಇದೆ. ಇದನ್ನು ಬಿಜೆಪಿ ರಾಜ್ಯ ಘಟಕ ನಾನಾ ಸಬೂಬುಗಳನ್ನು ಮುಂದೊಡ್ಡಿ ವಿರೋಧಿಸುತ್ತಿದೆ. ಈ ಸಮೀಕ್ಷೆಯನ್ನು ಆಧಾರವಾಗಿಟ್ಟುಕೊಂಡು ಮೀಸಲಾತಿಯನ್ನು ಪರಿಷ್ಕರಿಸಿ ಈಗಿನ ಶೇಕಡಾ 50ರ ಮಿತಿಯನ್ನು ಹೆಚ್ಚಿಸುವ ಪ್ರಯತ್ನ ಕೂಡಾ ನಡೆದಿದೆ. ಈ ಎಲ್ಲ ಪ್ರಯತ್ನಗಳಿಗೆ ಅಡ್ಡಗಾಲು ಹಾಕುತ್ತಿರುವ ಬಿಜೆಪಿಯ ರಾಜ್ಯಘಟಕದ ನಾಯಕರಿಗೆ ಪ್ರಧಾನಿ ನರೇಂದ್ರಮೋದಿ ಅವರು ಕಿವಿ ಹಿಂಡಿ ಬುದ್ದಿ ಹೇಳಬೇಕೆಂದು ಮನವಿ ಮಾಡಿಕೊಳ್ಳುತ್ತೇನೆ.

ನಮ್ಮ ಪಕ್ಷದ ಪಂಚ ಗ್ಯಾರಂಟಿ ಯೋಜನೆಗಳನ್ನು ಟೀಕಿಸುತ್ತಲೇ ಕೊನೆಗೆ ಅದನ್ನು ತಮ್ಮ ಪಕ್ಷದ ಕಾರ್ಯಕ್ರಮವನ್ನಾಗಿ ಮಾಡಿಕೊಂಡ ರೀತಿಯಲ್ಲಿಯೇ ಇದೀಗ ನಮ್ಮ ಜಾತಿಗಣತಿ ಕಾರ್ಯಕ್ರಮವನ್ನು ಕೂಡಾ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಕೈಗೆತ್ತಿಕೊಂಡಿರುವುದು ಕಾಂಗ್ರೆಸ್ ಪಕ್ಷದ ನೀತಿ ಮತ್ತು ಕಾರ್ಯಕ್ರಮಗಳು ಜನಪರವಾಗಿರುವುದಕ್ಕೆ ಸಾಕ್ಷಿಯಾಗಿದೆ. ಕರ್ನಾಟಕ ಸರ್ಕಾರ ನಡೆಸಿರುವ ಜಾತಿ ಆಧಾರಿತ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಒಂದು ಪರಿಪೂರ್ಣ ಮಾದರಿಯಾಗಿದ್ದು ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಯಾವುದೇ ಸಲಹೆ-ಸಹಕಾರ ನೀಡಲು ರಾಜ್ಯ ಸರ್ಕಾರ ಸಿದ್ಧ ಇದೆ.

ಜನಗಣತಿ ಜೊತೆಯಲ್ಲಿ ಜಾತಿ ಗಣತಿಯನ್ನೂ ನಡೆಸುವ ಕೇಂದ್ರ @BJP4India ಸರ್ಕಾರದ ತೀರ್ಮಾನವನ್ನು ನಮ್ಮ ಸರ್ಕಾರ ಹೃತ್ಪೂರ್ವಕವಾಗಿ ಸ್ವಾಗತಿಸುತ್ತದೆ. ಇದೇ ಸಂದರ್ಭದಲ್ಲಿ ಜಾತಿ ಗಣತಿ ಜೊತೆ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನೂ ನಡೆಸಬೇಕೆಂದು @narendramodi ಅವರ ಸರ್ಕಾರವನ್ನು ಆಗ್ರಹಪಡಿಸುತ್ತಿದ್ದೇನೆ.

ಕರ್ನಾಟಕದಲ್ಲಿ ನಾವು… pic.twitter.com/I4CV6blyfp

— Siddaramaiah (@siddaramaiah) April 30, 2025

Share. Facebook Twitter LinkedIn WhatsApp Email

Related Posts

BIG NEWS: ರಾಜ್ಯದ ಆರೋಗ್ಯ ಇಲಾಖೆಯ ‘NHM ಗುತ್ತಿಗೆ ನೌಕರ’ರನ್ನು ‘ಖಾಯಂ’ ಅಸಾಧ್ಯ: ಸಚಿವ ಯು.ಟಿ ಖಾದರ್

2 Mins Read

ಬೆಂಗಳೂರಿನಲ್ಲಿ ಗ್ರಾಹಕರಿಗೆ ತಟ್ಟಿದ ಬೆಲೆ ಏರಿಕೆ ಬಿಸಿ: ಗಗನಕ್ಕೇರಿದ ಸೋನಾ ಸ್ಟೀಮ್, ಬಾಸುಮತಿ ಅಕ್ಕಿ ಬೆಲೆ!

1 Min Read

ಸಾಗರ ನಗರಸಭೆ ‘ಮೇಸ್ತ್ರಿ ನಾಗರಾಜ್’ ಮಹಿಳೆಗೆ ಲೈಂಗಿಕ ಕಿರುಕುಳ; ನಾಳೆ ಅಮಾನತಿಗೆ ಆಗ್ರಹಿಸಿ ‘DSS ಪ್ರತಿಭಟನೆ’

1 Min Read
Recent News

​ಭಾರತದ ಸುಧಾರಣೆಯ ವೇಗ ಎಂದಿಗೂ ನಿಲ್ಲದು, ಸ್ಟಾರ್ಟ್‌ಅಪ್ ವ್ಯವಸ್ಥೆ ಮತ್ತಷ್ಟು ವಿಸ್ತರಣೆಯಾಗಲಿದೆ: ಫ್ರಾನ್ಸ್‌ನಲ್ಲಿ ಪ್ರಧಾನಿ ಮೋದಿ ಭರವಸೆ

BIG NEWS: ರಾಜ್ಯದ ಆರೋಗ್ಯ ಇಲಾಖೆಯ ‘NHM ಗುತ್ತಿಗೆ ನೌಕರ’ರನ್ನು ‘ಖಾಯಂ’ ಅಸಾಧ್ಯ: ಸಚಿವ ಯು.ಟಿ ಖಾದರ್

​ಬಾರ್ಸಿಲೋನಾ ಗ್ರಾಂಡ್ ಪ್ರಿಕ್ಸ್‌ನಲ್ಲಿ ಲೂಯಿಸ್ ಹ್ಯಾಮಿಲ್ಟನ್‌ಗೆ ಐತಿಹಾಸಿಕ ಜಯ; ಫೆರಾರಿ ಪರ ಮೊದಲ ಪ್ರಶಸ್ತಿ ಮುಡಿಗೇರಿಸಿಕೊಂಡ ದಿಗ್ಗಜ!

​ಡಿಜಿಟಲ್ ಲಗ್ನ ಪತ್ರಿಕೆ ಹಗರಣ: ‘ವೆಡ್ಡಿಂಗ್ ಇನ್ವಿಟೇಶನ್ ಲಿಂಕ್’ ಕ್ಲಿಕ್ ಮಾಡಿ ₹5.3 ಲಕ್ಷ ಕಳೆದುಕೊಂಡ ಉದ್ಯಮಿ!

State News
KARNATAKA

BIG NEWS: ರಾಜ್ಯದ ಆರೋಗ್ಯ ಇಲಾಖೆಯ ‘NHM ಗುತ್ತಿಗೆ ನೌಕರ’ರನ್ನು ‘ಖಾಯಂ’ ಅಸಾಧ್ಯ: ಸಚಿವ ಯು.ಟಿ ಖಾದರ್

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಮಂಗಳೂರು : “ಸರ್, ನಮಗೆ ಬರುತ್ತಿರುವ ಅಲ್ಪ ಸಂಬಳದಲ್ಲಿ ಜೀವನ ನಡೆಸಲು ಸಾಧ್ಯವಾಗುತ್ತಿಲ್ಲ. ಕಳೆದ 15 ವರ್ಷಗಳಿಂದ ಕನಿಷ್ಠ ವೇತನದಲ್ಲೇ…

ಬೆಂಗಳೂರಿನಲ್ಲಿ ಗ್ರಾಹಕರಿಗೆ ತಟ್ಟಿದ ಬೆಲೆ ಏರಿಕೆ ಬಿಸಿ: ಗಗನಕ್ಕೇರಿದ ಸೋನಾ ಸ್ಟೀಮ್, ಬಾಸುಮತಿ ಅಕ್ಕಿ ಬೆಲೆ!

ಸಾಗರ ನಗರಸಭೆ ‘ಮೇಸ್ತ್ರಿ ನಾಗರಾಜ್’ ಮಹಿಳೆಗೆ ಲೈಂಗಿಕ ಕಿರುಕುಳ; ನಾಳೆ ಅಮಾನತಿಗೆ ಆಗ್ರಹಿಸಿ ‘DSS ಪ್ರತಿಭಟನೆ’

ಬೆಂಗಳೂರಲ್ಲಿ ಪ್ರಿಯಕರನಿಂದಲೇ ಯುವತಿ ಕೊಲೆ ಕೇಸ್‌ಗೆ ಬಿಗ್ ಟ್ವಿಸ್ಟ್! ಮದುವೆ ವಿಷಯ ಮುಚ್ಚಿಟ್ಟು ಪ್ರೀತಿ, ಕೊನೆಗೆ ಕಗ್ಗೊಲೆ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.