ಬೆಂಗಳೂರು : ಪೌರ-ಕಾರ್ಮಿಕರ ದಿನಾಚರಣೆ”ಯ ದಿನದಂದು ಬಿಬಿಎಂಪಿಯ 12,692 ಪೌರಕಾರ್ಮಿಕರಿಗೆ ನೇಮಕಾತಿ ಆದೇಶ ಪತ್ರಗಳ ವಿತರಣಾ ಕಾರ್ಯಕ್ರಮವನ್ನು ಮೇ 01, 2025 ರಂದು ಬೆಳಿಗ್ಗೆ 11.30 ಗಂಟೆಗೆ ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ಆಯೋಜಿಸಲಾಗಿದೆ.
ಸದರಿ ಕಾರ್ಯಕ್ರಮವನ್ನು ಭಾರತ ಸರ್ಕಾರದ ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ್ ಖರ್ಗೆ ರವರು, ಮುಖ್ಯಮಂತ್ರಿಗ ಸಿದ್ದರಾಮಯ್ಯ ರವರು, ಉಪ ಮುಖ್ಯಮಂತ್ರಿಗಳು ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಡಿ.ಕೆ ಶಿವಕುಮಾರ್ ರವರು ಉದ್ಘಾಟಿಸಲಿದ್ದಾರೆ.