ಬೆಂಗಳೂರು: “ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಅವರು ಜಾತಿ ಗಣತಿ ನಡೆಸುವುದು ಕೇಂದ್ರದ ಜವಾಬ್ದಾರಿ ಎಂದು ಹೇಳುತ್ತಿದ್ದರು. ರಾಹುಲ್ ಗಾಂಧಿಯವರ ಒತ್ತಾಯಕ್ಕೆ ಮಣಿದು ಕೇಂದ್ರ ಸರ್ಕಾರ ಜಾತಿಗಣತಿಗೆ ಮುಂದಾಗಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.
ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಗುರುವಾರ ಪ್ರತಿಕ್ರಿಯೆ ನೀಡಿದರು.
ಕೇಂದ್ರ ಸರ್ಕಾರ ಜಾತಿಗಣತಿ ನಡೆಸಲು ನಿರ್ಧರಿಸಿರುವ ಬಗ್ಗೆ ಕೇಳಿದಾಗ, “ಜಾತಿಗಣತಿಗೆ ಇಂತಿಷ್ಟು ಸಮಯ ಎಂದು ನಿಗದಿ ಮಾಡಿ ಪೂರ್ಣಗೊಳಿಸಬೇಕು ಎಂದು ರಾಹುಲ್ ಗಾಂಧಿ ಅವರು ಹೇಳಿದ್ದು. ಇದರಂತೆ ಕೇಂದ್ರ ಸರ್ಕಾರ ನಡೆದುಕೊಳ್ಳಬೇಕು. ಸಮಾಜದ ಎಲ್ಲಾ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದರೆ ಜನಸಂಖ್ಯೆಯ ಆಧಾರದ ಮೇಲೆ ದೇಶದ ಜನರಿಗೆ ಸೌಲಭ್ಯಗಳನ್ನು ನೀಡಬೇಕು ಎಂಬುದು ಕಾಂಗ್ರೆಸ್ ಪಕ್ಷದ ಮೂಲ ಆಶಯ, ಸಿದ್ಧಾಂತ, ಬೇಡಿಕೆಯಾಗಿದೆ. ಮುಖ್ಯಮಂತ್ರಿಗಳು ಸಹ ಇದೇ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ ಸರ್ಕಾರ ಇದಕ್ಕೆ ಬೇಕಾದಂತಹ ಸಹಕಾರ ನೀಡಲಿದೆ” ಎಂದರು.
BREAKING: ನಾನು ಮಾಜಿ ಸಂಸದ ಡಿ.ಕೆ ಸುರೇಶ್ ಪತ್ನಿ ಎಂಬುದಾಗಿ ವೀಡಿಯೋ ಹರಿಬಿಟ್ಟ ಮಹಿಳೆ ಅರೆಸ್ಟ್