ಬೆಂಗಳೂರು : ಕೇಂದ್ರ ಸರ್ಕಾರ ಜನಗಣತಿಯ ಜೊತೆಗೆ ಜಾತಿಗಣತಿ ನಡೆಸೋದಾಗಿ ಹೇಳಿದೆ. ಇದೆ ವಿಚಾರವಾಗಿ ಇಂದು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುದ್ದಿಗೋಷ್ಠಿ ನಡೆಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶೇಕಡ 50ರಷ್ಟು ಮೀಸಲಾತಿ ಮಿತಿಯನ್ನು ತೆಗೆದು ಹಾಕಬೇಕು ಎಂದು ಆಗ್ರಹಿಸಿದ್ದಾರೆ .
ಜನಗಣತಿ ಜೊತೆಗೆ ಜಾತಿಗಣತಿ ಕೂಡ ನಡೆಸುವುದಾಗಿ ಕೇಂದ್ರ ಸರ್ಕಾರ ಹೇಳಿದೆ. ರಾಹುಲ್ ಗಾಂಧಿ ಹಾಗೂ ಕೇಂದ್ರ ಸರ್ಕಾರವನ್ನು ನಾನು ಅಭಿನಂದಿಸುವೆ. ಕೇಂದ್ರ ಸರ್ಕಾರದ ನಿರ್ಧಾರವನ್ನು ನಾನು ಸ್ವಾಗತಿಸುತ್ತೇನೆ. ಪ್ರಧಾನಿ ಮೋದಿ ಅವರಿಗಿಂತ ರಾಹುಲ್ ಗಾಂಧಿಯನ್ನು ನಾನು ಅಭಿನಂದಿಸುತ್ತೇನೆ. ಕಳೆದ ಎರಡುವರೆ ವರ್ಷಗಳಿಂದ ಜಾತಿ ಗಣತಿಗೆ ರಾಹುಲ್ ಗಾಂಧಿ ಒತ್ತಾಯಿಸಿದ್ದರು.
ಹೀಗಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ಅಭಿನಂದಿಸುವೆ. ರಾಹುಲ್ ಗಾಂಧಿ ಒತ್ತಡ ಹಾಕಿದ್ದರಿಂದ ಕೇಂದ್ರ ಸರ್ಕಾರ ಈ ತೀರ್ಮಾನ ತೆಗೆದುಕೊಂಡಿದೆ. ಬಿಹಾರ ಚುನಾವಣೆ ಹಿನ್ನೆಲೆಯಲ್ಲಿ ಆತುರವಾಗಿ ನಿರ್ಧಾರ ಕೈಗೊಂಡಿದೆ.ಕೇವಲ ಜನಗಣತಿಯ ಜೊತೆಗೆ ಜಾತಿಗಣತಿ ನಡೆಸಿದರೆ ಸಾಲದು. ಆರ್ಥಿಕ, ಸಾಮಾಜಿಕ ಹಾಗು ಶೈಕ್ಷಣಿಕ ಸಮೀಕ್ಷೆ ಕೂಡ ನಡೆಸಲಿ ಎಂದು ಹೇಳಿದರು.
ಬಿಜೆಪಿಯವರು ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿರುವವರು. ಬಿಜೆಪಿ ನಾಯಕರಾದ ವಿರುದ್ಧ ಇದೆ ವೇಳೆ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ಎಲ್ಲಾ ಆಯೋಗಗಳ ವರದಿಯನ್ನು ಬಿಜೆಪಿಯವರು ವಿರೋಧಿಸಿದ್ದಾರೆ. ಇತಿಹಾಸ ನೋಡಿದರೆ ಬಿಜೆಪಿಯವರು ಎಂದೂ ಸಾಮಾಜಿಕ ನ್ಯಾಯದ ಪರವಾಗಿ ಇಲ್ಲ. ನಿರ್ದಿಷ್ಟ ಸಮಯದೊಳಗೆ ಕೇಂದ್ರ ಸರ್ಕಾರ ಜಾತಿಗಣತಿ ಮುಗಿಸಲಿ ಎಂದು ಸಿಎಂ ಸಿದ್ದರಾಮಯ್ಯ ಆಗ್ರಹಿಸಿದರು.