ಮೈಸೂರು: ದೇಶದಲ್ಲಿದ್ದುಕೊಂಡು ಪಾಕಿಸ್ತಾನಕ್ಕೆ ಜೈಕಾರ ಹಾಕುವವರನ್ನು ಗುಂಡಿಕ್ಕಿ ಕೊಲ್ಲಬೇಕು ಎಂದು ವಿಧಾನಪರಿಷತ್ ಸದಸ್ಯ ಎ.ಎಚ್. ವಿಶ್ವನಾಥ್ ಒತ್ತಾಯಿಸಿದರು. ಇಂದು ಮೈಸೂರಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
ಪಾಕಿಸ್ತಾನ್ ಜಿಂದಾಬಾದ್ ಎನ್ನುವವರನ್ನು ದೇಶದ್ರೋಹಿಗಳೆಂದು ಘೋಷಿಸಿ ಶಿಕ್ಷೆ ವಿಧಿಸಬೇಕು. ಶತ್ರು ರಾಷ್ಟ್ರದ ಪರ ಜೈಕಾರ ಕೂಗಿದವರನ್ನು ಸುಮ್ಮನೆ ಬಿಟ್ಟು ಕಳುಹಿಸುವುದು ಸರಿಯಲ್ಲ. ನಮ್ಮ ದೇಶದ ಅನ್ನ ತಿಂದು, ನಮ್ಮ ನೀರು ಕುಡಿದು ಶತ್ರುಗಳಿಗೆ ಜೈ ಎನ್ನುವವರನ್ನು ಒಪ್ಪಲು ಸಾಧ್ಯವಿಲ್ಲ ಎಂದರು.
ಇನ್ನು ಜನಗಣತಿ ಜೊತೆ ಜಾತಿ ಗಣತಿಯನ್ನೂ ನಡೆಸಲು ಕೇಂದ್ರ ಸರ್ಕಾರ ನಿರ್ಣಯ ಕೈಗೊಂಡಿರುವುದು ಸ್ವಾಗತಾರ್ಹ. ಎಲ್ಲಾ ಜಾತಿಯ ಮುಖಂಡರೂ ಇದನ್ನು ಸ್ವಾಗತಿಸಿದ್ದಾರೆ. ಈಗ, ರಾಜ್ಯದಲ್ಲಿ ನಡೆಸಲಾದ ಸಮೀಕ್ಷಾ ವರದಿಯನ್ನು ಸರ್ಕಾರ ಅಧಿಕೃತವಾಗಿ ಬಹಿರಂಗಪಡಿಸಲಿ ಎಂದು ಆಗ್ರಹಿಸಿದರು.