ಮಂಗಳೂರು: ಮಂಗಳೂರಲ್ಲಿ ಗುಂಪಿನಿಂದ ಕೇರಳ ಮೂಲದ ವ್ಯಕ್ತಿಯೊಬ್ಬನ ಮೇಲೆ ದಾಳಿ ಮಾಡಿ ಕೊಲೆ ಪ್ರಕರಣ ಸಂಬಂಧ ಕರ್ತವ್ಯ ನಿರ್ಲಕ್ಷ್ಯ ತೋರಿದ ಮೂವರು ಪೊಲೀಸರನ್ನು ಅಮಾನತುಗೊಳಿಸಿ ಆದೇಶಿಸಲಾಗಿದೆ.
ಈ ಬಗ್ಗೆ ಮಂಗಳೂರು ಕಮೀಷನರ್ ಅನುಪಮ್ ಅಗರ್ವಾಲ್ ಮಾಹಿತಿ ನೀಡಿದ್ದು, ಮಂಗಳೂರಲ್ಲಿ ಕೇರಳ ಮೂಲದ ವ್ಯಕ್ತಿಯ ಕೊಲೆ ಪ್ರಕರಣ ಸಂಬಂಧ ಕರ್ತವ್ಯ ನಿರ್ಲಕ್ಷ್ಯ ತೋರಿದಂತ ಮೂವರು ಪೊಲೀಸರನ್ನು ಅಮಾನತುಗೊಳಿಸಿರುವುದಾಗಿ ತಿಳಿಸಿದ್ದಾರೆ.
ಕರ್ತವ್ಯ ಲೋಪದ ಆರೋಪದಡಿ ಮಂಗಳೂರು ಗ್ರಾಮಾಂತರ ಠಾಣೆಯ ಇನ್ಸ್ ಪೆಕ್ಟರ್ ಶಿವಕುಮಾರ್, ಹೆಡ್ ಕಾನ್ಸ್ ಟೇಬಲ್ ಪಿ.ಚಂದ್ರ ಹಾಗೂ ಪೊಲೀಸ್ ಕಾನ್ಸ್ ಸ್ಟೇಬಲ್ ಯಲ್ಲಾಲಿಂಗ ಅವರನ್ನು ಅಮಾನತುಗೊಳಿಸಿರುವುದಾಗಿ ತಿಳಿಸಿದ್ದಾರೆ.
ಕೇರಳ ಮೂಲದ ವ್ಯಕ್ತಿ ಕೊಲೆ ಪ್ರಕರಣ ಸಂಬಂಧ 20 ಜನರನ್ನು ಬಂಧಿಸಲಾಗಿದೆ. ತಲೆಮರೆಸಿಕೊಂಡಿರುವಂತ ಇತರೆ ಆರೋಪಿಗಳಿಗಾಗಿ ಹುಡುಕಾಟ ಮಾಡಲಾಗುತ್ತಿದೆ. ಈಗಾಗಲೇ ಘಟನಾ ಸ್ಥಳದಲ್ಲಿದ್ದಂತ 15 ಜನರಿಗೆ ನೋಟಿಸ್ ಜಾರಿ ಮಾಡಿದ್ದೇವೆ. ಘಟನಾ ಸ್ಥಳದಲ್ಲಿ ಇರುವಂತ ಸಿಸಿಟಿವಿಗಳನ್ನು ಪರಿಶೀಲನೆ ಮಾಡಲಾಗುತ್ತಿದೆ ಎಂದರು.
BREAKING: ಮೇ.31ರವರೆಗೆ ಕರಾಚಿ, ಲಾಹೋರ್ ವಾಯುಪ್ರದೇಶವನ್ನು ಬಂದ್ ಮಾಡಿದ ಪಾಕಿಸ್ತಾನ