ಬೆಂಗಳೂರು: ಪ್ರಸಕ್ತ ಸಚಿವ ಸಂಪುಟದಲ್ಲಿ ಮಂಡಿಸಿರುವ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯನ್ನು ಮೇ 9 ರಂದು ನಡೆಯುವ ಸಚಿವ ಸಂಪುಟದಲ್ಲಿ ಸಚಿವರೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ತಿಳಿಸಿದರು.
ಅವರು ಇಂದು ಕಾವೇರಿ ನಿವಾಸದಲ್ಲಿ ಪತ್ರಿಕಾಗೋಷ್ಠಿಯಲ್ಲಿಮಾತನಾಡಿದರು.
ದೇಶದ ಜನತೆಗೆ ಸಾಮಾಜಿಕ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಜಾತಿ ಗಣತಿ ಯೊಂದಿಗೆ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ನಡೆಸಬೇಕು. ಮೀಸಲಾತಿಯಲ್ಲಿ ಶೇ.50% ಗರಿಷ್ಠ ಪರಿಮಿತಿಯನ್ನು ಸಡಿಲಗೊಳಿಸಿ ಜನಸಂಖ್ಯೆ ಅನುಗುಣವಾಗಿ ಮೀಸಲಾತಿ ಕಲ್ಪಿಸಬೇಕು. ಜಾತಿ ಗಣತಿಗೆ ಕೂಡಲೇ ದಿನಾಂಕ ನಿಗದಿಗೊಳಿಸಬೇಕು ಎಂದರು.
ರಾಹುಲ್ ಗಾಂಧಿಯವರು ಕೂಡಾ ಇದನ್ನೇ ಆಗ್ರಹಿಸಿದ್ದು, ಜಾತಿ ಗಣತಿ ವೇಳೆ ಸಾಮಾಜಿಕ, ಆರ್ಥಿಕ ಸಮೀಕ್ಷೆ ನಡೆಸಲು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.
ಬಡವರು, ಹಿಂದುಳಿದವರನ್ನು ಮುಖ್ಯವಾಹಿನಿಗೆ ತರಲು ಅನುಕೂಲ
ಸಾಮಾಜಿಕವಾಗಿ , ಶೈಕ್ಷಣಿಕವಾಗಿ ಹಿಂದುಳಿದವರಿಗೆ ಮೀಸಲಾತಿ ನೀಡಬೇಕೆಂದು ಸಂವಿಧಾನ ಹೇಳುತ್ತದೆ. ಜಾತಿ ಗಣತಿ ಯೊಂದಿಗೆ ಸಾಮಾಜಿಕ, ಆರ್ಥಿಕ , ಶೈಕ್ಷಣಿಕ ಮಾಡಿದರೆ ಜನಸಂಖ್ಯೆಗನುಗುಣವಾಗಿ ಮೀಸಲಾತಿ ನೀಡಲು ಅನುಕೂಲವಾಗುತ್ತದೆ ಮತ್ತು ಅವರನ್ನು ಮುಖ್ಯವಾಹಿನಿಗೆ ತರಲು ಸಾಧ್ಯವಾಗುತ್ತದೆ ಎಂದರು.
ಬಿಹಾರ ಚುನಾವಣೆ ಹಿನ್ನೆಲೆಯಲ್ಲಿ ಸಮೀಕ್ಷೆ
ಈ ರೀತಿಯ 2015 ರಲ್ಲಿಯೇ ನಮ್ಮ ಸರ್ಕಾರ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಮೂಲಕ 192 ಕೋಟಿ ವೆಚ್ಚ ಮಾಡಿ 1. 33 ಲಕ್ಷ ಸಿಬ್ಬಂದಿ ನಿಯೋಜನೆ ಮಾಡಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ನಡೆಸಲಾಗಿದೆ . ಇದರಿಂದ ಪ್ರೇರಿತವಾಗಿ ಮತ್ತು ಬಿಹಾರ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು
ಕೇಂದ್ರ ಸರ್ಕಾರವು ಈಗ ಸಮೀಕ್ಷೆಗೆ ಮುಂದಾಗಿದೆ ಎಂದರು.
ಮೇ 9 ಕ್ಕೆ ಸಚಿವ ಸಂಪುಟ ಸಭೆ
ಪ್ರಸಕ್ತ ಸಚಿವ ಸಂಪುಟದಲ್ಲಿ ಮಂಡಿಸಿರುವ ಸಾಮಾಜಿಕ , ಶೈಕ್ಷಣಿಕ ಸಮೀಕ್ಷೆಯನ್ನು ಮೇ 9 ರಂದು ನಡೆಯುವ ಸಚಿವ ಸಂಪುಟದಲ್ಲಿ ಸಚಿವರೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳುವುದಾಗಿ ಅವರು ತಿಳಿಸಿದರು.
50% ಮೀಸಲಾತಿಯನ್ನು ಬದಲಾಯಿಸಬೇಕು. ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಸಂವಿಧಾನದ 15 ವಿಧಿ, ಕಲಂ (5) ರಂತೆ ಮೀಸಲಾತಿಯನ್ನು ಕೊಡಬೇಕೆಂದು ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ. ಇದನ್ನು ಪರಿಗಣಿಸಬೇಕೆಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸುವುದಾಗಿ ತಿಳಿಸಿದರು.
ಜಾತಿಗಣತಿಯೊಂದಿಗೆ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ನಡೆಸಿ: ಸಿಎಂ ಸಿದ್ದರಾಮಯ್ಯ ಆಗ್ರಹ