ಬೆಂಗಳೂರು: ನಗರದಲ್ಲಿ ಈಗಾಗಲೇ ಮಳೆ ಆರಂಭಗೊಂಡಿದೆ. ಇದಲ್ಲದೇ ಮುಂದಿನ ಮೂರು ಗಂಟೆಗಳ ಕಾಲ ಗುಡುಗು ಸಹಿತ ಭಾರೀ ಮಳೆಯಾಗುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ನಗರದಲ್ಲಿ ಮುಂದಿನ 3 ಗಂಟೆಗಳ ಕಾಲ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಈಗಾಗಲೇ ಬೆಂಗಳೂರಿನ ವಿವಿಧೆಡೆ ಮಳೆಯಾಗುತ್ತಿದೆ. ಕತ್ರಿಗುಪ್ಪೆಯಲ್ಲಿ ಬಿರುಗಾಳಿ ಸಹಿತ ಮಳೆಗೆ ಮರವೊಂದು ಆಟೋದ ಮೇಲೆ ಉರುಳಿ ಬಿದ್ದಿದೆ. ಈ ಪರಿಣಾಮ ಆಟೋ ಚಾಲಕನೊಬ್ಬ ದುರ್ಮರಣ ಹೊಂದಿರುವುದಾಗಿ ತಿಳಿದು ಬಂದಿದೆ.