ಬೆಂಗಳೂರು : ಬೆಂಗಳೂರಿನಲ್ಲಿ ಮಳೆಯ ರಣಾರ್ಭಟಕ್ಕೆ ಮರ ಬಿದ್ದು ಆಟೋ ಚಾಲಕ ಮೃತಪಟ್ಟಿರುವ ಘಟನೆ ನಡೆದಿದೆ.
ಕತ್ರಿಗುಪ್ಪೆಯ ಎಂ.ಎಂ ಬಾರ್ ಬಳಿ ಭಾರೀ ಮಳೆಗೆ ಮರಬಿದ್ದು ಆಟೋ ಅಪ್ಪಚ್ಚಿಯಾಗಿದ್ದು, ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ಮೃತ ಆಟೋ ಚಾಲಕನ ಇಟ್ಟಮಡು ನಿವಾಸಿ ಮಹೇಶ್ ಎಂದು ಗುರುತಿಸಲಾಗಿದೆ.
ಬಂಕ್ ನಲ್ಲಿ ಗ್ಯಾಸ್ ತುಂಬಿಸಿಕೊಂಡು ಬರುತ್ತಿದ್ದ ವೇಳೆ ಆಟೋ ಮೇಲೆ ಮರ ಬಿದ್ದು ಚಾಲಕ ಮಹೇಶ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಬಸವನಗುಡಿ ಶಾಸಕ ರವಿ ಸುಬ್ರಹ್ಮಣ್ಯ ಭೇಟಿ ನೀಡಿದ್ದಾರೆ. ಚೆನ್ನಮನಕೆರೆ ಅಚ್ಚುಕಟ್ಟು ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.