ಬೆಂಗಳೂರು : ಶಾಸಕ ಸ್ಥಾನಕ್ಕೆ ಶಿವಾನಂದ ಪಾಟೀಲ್ ರಾಜೀನಾಮೆ ನೀಡಿದ್ದಾರೆ. ಸ್ಪೀಕರ್ ಖಾದರ್ ಗೆ ಇದೀಗ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.
ಹೌದು, ಶಾಸಕ ಯತ್ನಾಳ್ ಸವಾಲ್ ಸ್ವೀಕರಿಸಿದ ಸಚಿವ ಶಿವಾನಂದ್ ಪಾಟೀಲ್ ಧಿಡೀರ್ ಬೆಳವಣಿಗೆಯಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಸವಾಲ್ ಸ್ವೀಕರಿಸಿರುವ ಶಿವಾನಂದ್ ಪಾಟೀಲ್ ಅವರು ಇಂದು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ವಿಧಾನಸಭೆಯಲ್ಲಿ ಸ್ಪೀಕರ್ ಯು.ಟಿ.ಖಾದರ್ ಗೆ ಶಾಸಕ ಶಿವನಾಂದ ಪಾಟೀಲ್ ರಾಜೀನಾಮೆ ನೀಡಿದ್ದಾರೆ.