ಬೆಂಗಳೂರು: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲ್ಲಿ ಎಂದು ಶಾಸಕ ಬಸನಗೌಡ ಪಾಟೀಲ ಸಚಿವ ಶಿವಾನಂದ ಪಾಟೀಲ್ ಅವರಿಗೆ ಸವಾಲು ಹಾಕಿದ್ದು, ಈ ಹಿನ್ನೆಲೆ ಸಚಿವ ಶಿವಾನಂದ ಪಾಟೀಲ್ ಇಂದು ವಿಧಾನಸಭೆಯ ಸ್ಪೀಕರ್ ಯುಟಿ ಖಾದರ್ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ಈ ವಿಚಾರವಾಗಿ ಸ್ಪೀಕರ್ ಯುಟಿ ಖಾದರ್ ಶಿವಾನಂದ್ ಪಾಟೀಲ್ ಅವರ ರಾಜಿನಾಮೆ ಅಂಗೀಕರಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಇದೇ ವಿಚಾರವಾಗಿ ಮಾತನಾಡಿದ ಸ್ವೀಕರಿಟಿ ಖಾದರ್, ಸಚಿವ ಶಿವಾನಂದ್ ಪಾಟೀಲ್ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆದರೆ ಅವರ ರಾಜೀನಾಮೆ ಅಂಗೀಕರಿಸಲು ಸಾಧ್ಯವಿಲ್ಲ. ಸಚಿವ ಶಿವಾನಂದ್ ಪಾಟೀಲ್ ಷರತ್ತುಬದ್ಧ ರಾಜೀನಾಮೆ ನೀಡಿದ್ದಾರೆ. ಅಲ್ಲದೇ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಮ್ಮ ಶಾಸಕ ಸ್ಥಾನಕ್ಕೆ ಇನ್ನು ರಾಜಿನಾಮೆ ನೀಡಿಲ್ಲ. ಹಾಗಾಗಿ ಶಿವಾನಂದ್ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಸಾಧ್ಯವಿಲ್ಲ ಅದು ಸ್ಪೀಕರ್ ಯುಟಿ ಖಾದರ್ ಸ್ಪಷ್ಟಪಡಿಸಿದರು.